ಕನ್ನಡ ನಾಮಫಲಕ ಅಭಿಯಾನ ಇಂದು
ದೊಡ್ಡಬಳ್ಳಾಪುರ: ಇಲ್ಲಿನ ತಾಲೂಕು ಡಾ.ರಾಜ್ಕುಮಾರ್ ಅಭಿಮಾನಿಗಳ ಸಂಘದ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಕನ್ನಡ ನಾಮಫಲಕ ಅಭಿಯಾನ ನ.25ರ ಸೋಮವಾರ ಬೆಳಗ್ಗೆ 10 ಗಂಟೆಗೆ ನಡೆಯಲಿದೆ. ನೆಲದಾಂಜನೇಯಸ್ವಾಮಿ ದೇವಾಲಯದ ಸಮೀಪ ಇರುವ ಡಾ.ರಾಜ್ಕುಮಾರ್ ಪುತ್ಥಳಿ ಮುಂಭಾಗದಿಂದ ಅಭಿಯಾನ ಆರಂಭವಾಗಲಿದ್ದು, ಎಲ್ಲಾ ವ್ಯಾಪಾರಿಗಳು, ವಾಣಿಜ್ಯ ಮಳಿಗೆಗಳು, ಬ್ಯಾಂಕುಗಳು, ಇತರೆ ಸಂಸ್ಥೆಗಳು ಕಡ್ಡಾಯವಾಗಿ ಕನ್ನಡ ನಾಮಫಲಕಗಳನ್ನು ಹಾಕಿಸಿಕೊಳ್ಳಲು ಒತ್ತಾಯಿಸಿ ಮತ್ತು ಪರಭಾಷೆ ನಾಮಫಲಕಗಳಿಗೆ ಮಸಿ ಬಳಿಯುವ ಕಾರ್ಯಕ್ರಮ ನಡೆಯಲಿದೆ. ತಾಲೂಕು ಡಾ.ರಾಜ್ಕುಮಾರ್ ಅಭಿಮಾನಿಗಳ ಸಂಘ, ಭುವನೇಶ್ವರಿ ಕನ್ನಡ ಸಂಘ ಸೇರಿದಂತೆ ವಿವಿಧ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಭಾಗವಹಿಸಲಿದ್ದಾರೆ.
ರಾಜ್ಯೋತ್ಸವ ಇಂದು
ದೊಡ್ಡಬಳ್ಳಾಪುರ: ಕರ್ನಾಟಕ ಡಾ.ರಾಜ್ ರೈತ ಕಾರ್ಮಿಕ ಕನ್ನಡ ಸಂಘದ ನೇತೃತ್ವದಲ್ಲಿ 58ನೇ ಕರ್ನಾಟಕ ರಾಜ್ಯೋತ್ಸವ ಮತ್ತು ಸಂಘದ 28ನೇ ವಾರ್ಷಿಕೋತ್ಸವ ಸಮಾರಂಭ ನ.25ರಂದು ಸೋಮವಾರ ದರ್ಗಾಜೋಗಿಹಳ್ಳಿಯಲ್ಲಿ ನಡೆಯಲಿದೆ. ತಹಸೀಲ್ದಾರ್ ಕೆ.ಬಿ.ಸಿದ್ಧಲಿಂಗಯ್ಯ ಧ್ವಜಾರೋಹಣ ಮಾಡಲಿದ್ದು, ಸೈಕಲ್ ಸ್ಪರ್ಧೆ, ಮಡಿಕೆ ಹೊಡೆಯುವ ಸ್ಪರ್ಧೆ, ರಂಗೋಲಿ ಸ್ಪರ್ಧೆಗಳು ನಡೆಯಲಿವೆ. ಸಂಜೆ ನಡೆಯುವ ಕಾರ್ಯಕ್ರಮದಲ್ಲಿ ಗ್ರಾ.ಪಂ ಅಧ್ಯಕ್ಷೆ ಗಂಗಮ್ಮ ಅಧ್ಯಕ್ಷತೆ ವಹಿಸುವರು. ಪಿಡಿಓ ಶಂಕರಾಚಾರಿ, ಗ್ರಾ.ಪಂ ಕಾರ್ಯದರ್ಶಿ ಮುನಿಯನಾಯಕ್, ಗ್ರಾ.ಪಂ ಉಪಾಧ್ಯಕ್ಷ ಡಿ.ಎನ್. ತಿಮ್ಮರಾಜು, ಗ್ರಾ.ಪಂ ಸದಸ್ಯ ಎಂ.ವೆಂಕಟೇಶ್, ಶಶಿಕಲಾ ನಾಗರಾಜ್, ಚಂದ್ರಕಲಾ ಬಸವರಾಜು, ರಂಗಮ್ಮ ಕೃಷ್ಣಪ್ಪ, ಪಾರ್ವತಮ್ಮ ನಾಗರಾಜ್ ಮತ್ತಿತರರು ಭಾಗವಹಿಸಲಿದ್ದಾರೆ.
ಬಸವಣ್ಣ ಸೇವಾ ಸಮಿತಿ ಬೆಳ್ಳಿಹಬ್ಬ
ದೊಡ್ಡಬಳ್ಳಾಪುರ: ಇಲ್ಲಿನ ಶ್ರೀಚೌಡೇಶ್ವರಿ ದೇವಾಲಯದ ಶ್ರೀ ಬಸವಣ್ಣ ಸೇವಾ ಸಮಿತಿಯ 25ನೇ ವಾರ್ಷಿಕೋತ್ಸವ-ಬೆಳ್ಳಿಹಬ್ಬ ಕಾರ್ಯಕ್ರಮ ನ.25ರ ಸೋಮವಾರ ಶ್ರೀರಾಮಲಿಂಗ ಚಂದ್ರ ಚೌಡೇಶ್ವರಿ ದೇವಾಲಯದಲ್ಲಿ ನಡೆಯಲಿದೆ. ಕಾರ್ಯಕ್ರಮದ ಅಂಗವಾಗಿ ಶ್ರೀಬಸವಣ್ಣ ಮತ್ತು ರಾಮಲಿಂಗಚಂದ್ರ ಚೌಡೇಶ್ವರಿ ಹಾಗೂ ವಿವಿಧ ದೇವರುಗಳಿಗೆ ವಿಶೇಷಾಲಂಕಾರಗಳನ್ನು ಏರ್ಪಡಿಸಲಾಗಿದೆ. ಮಧ್ಯಾಹ್ನ 3 ಗಂಟೆಗೆ ಹಂಪಿ ಹೇಮಕೂಟ ಗಾಯತ್ರಿಪೀಠ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀದಯಾನಂದಪುರಿ ಸ್ವಾಮೀಜಿ ಮತ್ತು ಪುಷ್ಪಾಂಡಜಮುನಿ ಆಶ್ರಮದ ಶ್ರೀದಿವ್ಯಜ್ಞಾನಾನಂದಸ್ವಾಮೀಜಿ ಆಶೀರ್ವಚನ ನೀಡಲಿದ್ದು, ನಂತರ ಪ್ರಮುಖ ಬೀದಿಗಳಲ್ಲಿ ವಿವಿಧ ಸಾಂಸ್ಕೃತಿಕ ತಂಡಗಳೊಂದಿಗೆ ರಾಜಬೀದಿ ಉತ್ಸವ ನಡೆಯಲಿದೆ ಎಂದು ಸಮಿತಿ ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

