ಬೆಂಗಳೂರು ಗ್ರಾಮಾಂತರ

'ಜೀತ ಪದ್ಧತಿ ನಿರ್ಮೂಲನೆಗಾಗಿ ಕ್ರಿಯಾ ಯೋಜನೆ'

Published On :

ಮಾಗಡಿ: ಜೀತ ಪದ್ಧತಿ ನಿರ್ಮೂಲನೆಗೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಜೀತದಾಳುಗಳಿಗೆ ಪುನರ್ವಸತಿ ಕಲ್ಪಿಸಲು ಸರ್ಕಾರ ಬದ್ಧವಾಗಿದೆ ಎಂದು ತಹಶೀಲ್ದಾರ್ ಶಿವಕುಮಾರ್ ಹೇಳಿದರು.
ತಾಲೂಕು ಪಂಚಾಯ್ತಿಯಲ್ಲಿ ನಡೆದ ತಾಲೂಕು ಮಟ್ಟದ ಜೀತ ಕಾರ್ಮಿಕ ಪದ್ಧತಿ ನಿರ್ಮೂಲನೆಗಾಗಿ ಕ್ರಿಯಾ ಯೋಜನೆ ಹಾಗೂ ಸಮೀಕ್ಷೆ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ಜೀತ ಪದ್ಧತಿಯನ್ನು ಹೋಗಲಾಡಿಸಲು ಸರ್ಕಾರ ಮಹತ್ವದ ಕಾರ್ಯಕ್ರಮ ರೂಪಿಸಿದ್ದು, ವಿವಿಧ ಸಂಘ, ಸಂಸ್ಥೆಗಳ ಹಾಗೂ ಪ್ರಗತಿಪರ ವ್ಯಕ್ತಿಗಳ ಜೊತೆಗೂಡಿ ಕಾರ್ಯಕ್ರಮಗಳನ್ನು ಹಾಕಿಕೊಳ್ಳಲು  ಕ್ರಮ ಕೈಗೊಳ್ಳಲಾಗಿದೆ. ಜೀತಪದ್ಧತಿ, ಬಲಾತ್ಕಾರ ದುಡಿಮೆ ಅನುಸರಿಸುತ್ತಿರುವುದು ಕಂಡು ಬಂದರೆ  ನಿರ್ದಾಕ್ಷಣ್ಯವಾಗಿ  ಕಾನೂನು ರೀತ್ಯ ಕ್ರಮ ಜರುಗಿಸಲಾಗುವುದು ಎಂದರು. ತಾಪಂ ಅಧ್ಯಕ್ಷ ಜಿ. ಕೃಷ್ಣ ಅಧ್ಯಕ್ಷತೆ ವಹಿಸಿದ್ದು, ತಾಲೂಕಿನಲ್ಲಿ ಜೀತದಾಳುಗಳನ್ನು ಪತ್ತೆ ಹಚ್ಚಬೇಕು. ಇದಕ್ಕಾಗಿ ಅಧಿಕಾರಿಗಳು ವಿನೂತನ ಕಾರ್ಯಕ್ರಮಗಳನ್ನು ಹಾಕಿಕೊಳ್ಳಬೇಕು. ಈ ನಿಟ್ಟಿನಲ್ಲಿ ಜೀತ ಮುಕ್ತ ತಾಲೂಕನ್ನಾಗಿಸಲು ಅಧಿಕಾರಿಗು ಜಾಗೃತರಾಗಬೇಕು. ಹಾಗೂ ಜೀತದಾಳುಗಳ ಸಮೀಕ್ಷೆ ಸಹ ಕಟ್ಟುನಿಟ್ಟಾಗಿ ನಡೆಸಲು ಕಾರ್ಯಗಾರ ಅನುಕೂಲಕವಾಗಿದೆ ಎಂದರು.
ಬಿಇಓ ರಂಗಸ್ವಾಮಿ, ಜೀವಿಕಾ ಗಂಗಹನುಮಯ್ಯ,ಜೀವಿಕಾ ಜಿಲ್ಲಾ ಸಂಚಾಲಕ ಬಸವರಾಜು,ಸಮಾಜ ಕಲ್ಯಾಣಾಧಿಕಾರಿ ನರಸಿಂಹಮೂರ್ತಿ, ಸಿಡಿಪಿಓ ಕೆಂಪಣ್ಣ, ಜೀವಿಕಾ ಸಂಪನ್ಮಾಲ ವ್ಯಕ್ತಿ ವಿಜಯಕುಮಾರಿ ಜೀತಪದ್ಧತಿ ನಿರ್ಮೂಲನೆಯ ಕ್ರಮದ ಬಗ್ಗೆ ಸುದೀರ್ಘವಾಗಿ ತಿಳಿಸಿಕೊಟ್ಟರು. ತಾಲೂಕು ಮಟ್ಟದ ಅಧಿಕಾರಿಗಳು, ಗ್ರಾ.ಪಂ. ಗಳ ಪಿಡಿಓಗಳು ಕಾರ್ಯಗಾರದಲ್ಲಿ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.