ದಾಸರ ಚಿಂತನೆಗಳು ಇಂದಿಗೂ ಪ್ರಸ್ತುತ'
ಕನಕಪುರ: ಎಲ್ಲಾ ಧರ್ಮಗಳ ತತ್ವ, ಚಿಂತನೆಗಳನ್ನು ಸರಳವಾದ ಭಾಷೆ, ಹಾಡುಗಳಲ್ಲಿ ಸಾರಿದ ಉದಾತ್ತ ಜ್ಞಾನಿ ಕನಕದಾಸರ ಚಿಂತನೆಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಪುರಸಭೆ ಮುಖ್ಯಾಧಿಕಾರಿ ಮಾಯಣ್ಣಗೌಡ ಹೇಳಿದರು.
ಕನಕಪುರದ ಪುರಸಭೆ ಸಭಾಂಗಣದಲ್ಲಿ ಕನಕದಾಸ ಜಯಂತಿಯನ್ನು ನೆರವೇರಿಸಿ ಮಾತನಾಡಿ, ಸಾವಿರಾರು ಕೀರ್ತನೆಗಳು, ಸುಳಾದಿ, ಉಗಾಭೋಗಗಳು, ರಾಮಧಾನ್ಯ ಚರಿತೆ, ಹರಿಭಕ್ತಸಾರದಂತಹಾ ಮೇರುಕೃತಿಗಳನ್ನು ನೀಡಿದ್ದಾರೆ. ಯಾವುದೇ ಪಂಥದಲ್ಲಿಯೂ ಗುರುತಿಸಿಕೊಳ್ಳದ ಸ್ವಯಂಪೂರ್ಣ ವ್ಯಕ್ತಿತ್ವವನ್ನು ಕನಕದಾಸರು ಹೊಂದಿದ್ದರು. ಅವರ ಹೆಸರಿನಲ್ಲಿ ಇಂದು ನಡೆಯುತ್ತಿರುವ ಕ್ಷುಲ್ಲಕ ರಾಜಕೀಯ ಹೇಸಿಗೆ ಹುಟ್ಟಿಸುವಂತಿದೆ ಎಂದು ವಿಷಾದ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಪುರಸಭೆ ಸದಸ್ಯೆ ಲಕ್ಷ್ಮಮ್ಮ, ಅಭಿಯಂತರ ನರಸು ಕಳಂತ್ರಿ, ರಾಮಚಂದ್ರ, ರಾಮದಾಸ್ ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

