ಬೆಂಗಳೂರು ಗ್ರಾಮಾಂತರ

ಲಯನ್ಸ್ ಸಂಸ್ಥೆಯಿಂದ ನೇತ್ರ ಚಿಕಿತ್ಸಾ ಶಿಬಿರ

Published On :

ದೇವನಹಳ್ಳಿ: ಲಯನ್ಸ್ ಸಂಸ್ಥೆ ಹಾಗೂ ಲಯನ್ಸ್ ಸೇವಾ ಪ್ರತಿಷ್ಠಾನ ಇವರು ಬೆಂಗಳೂರು ಪಶ್ಚಿಮ ಲಯನ್ಸ್ ಕಣ್ಣಾಸ್ಪತ್ರೆ ಹಾಗೂ ಶ್ರೀ ಕೃಷ್ಣದೇವರಾಯ ದಂತ ವೈದ್ಯಕೀಯ ಮಹಾವಿದ್ಯಾಲಯ ಇವರ ಸಹಕಾರದೊಂದಿಗೆ 144ನೇ ಉಚಿತ ನೇತ್ರ ಚಿಕಿತ್ಸೆ ಮತ್ತು ದಂತ ಚಿಕಿತ್ಸಾ ಶಿಬಿರವನ್ನು ಸಂಯುಕ್ತವಾಗಿ ಗುರುವಾರ ಇಲ್ಲಿನ ಲಯನ್ಸ್ ಸೇವಾ ಭವನದಲ್ಲಿ ನಡೆಯಿತು. ಶಿಬಿರದ ಉದ್ಘಾಟನೆಯನ್ನು ಸಂಸ್ಥೆಯ ಮಾಜಿ ಅಧ್ಯಕ್ಷ ಆರ್. ರವಿಕುಮಾರ್ ನೆರವೇರಿಸಿದರು.
ಕಲ್ಯಾಣನಗರ ಲಯನ್ಸ್ ಸಂಸ್ಥೆಯ ಕಾರ್ಯದರ್ಶಿ ರಾಜಗೋಪಾಲ್ ಮಾತನಾಡಿ, ಇಂತಹ ಸೇವಾ ಕಾರ್ಯಗಳು ಬೆಂಗಳೂರಿನಲ್ಲಿ ಮಾಡಲು ಅವಕಾಶಗಳು ಕಡಿಮೆ ಇರುತ್ತದೆ. ಇಲ್ಲಿನ ಲಯನ್ಸ್ ಸಂಸ್ಥೆಯವರು ನಮ್ಮ ಸಂಘದ ಸಹಕಾರ ಪಡೆದು ಶಿಬಿರ ಆಯೋಜಿಸಿರುವುದಕ್ಕೆ ಅಭಿನಂದಿಸಿದರು. ವಲಯಾಧ್ಯಕ್ಷ ವಿ.ಡಿ. ದಿನೇಶ್ ಮಾತನಾಡಿ, ಕಳೆದ ಅಕ್ಟೋಬರ್ ತಿಂಗಳಿಂದ ಕಣ್ಣಿನ ತೊಂದರೆಗಳು ಅಲ್ಲದೆ ಮಧುಮೇಹ ಕಾಯಿಲೆಗಳ ಬಗ್ಗೆ ಜಿಲ್ಲೆಯಲ್ಲಿ ನಾಗರಿಕರಿಗೆ ಅರಿವು ಮೂಡಿಸುವ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ಆರ್. ನಾಗರಾಜಯ್ಯ ಮಾತನಾಡಿ, ನಮ್ಮ ಸಂಸ್ಥೆಯ ಎಲ್ಲ ಸದಸ್ಯರು ತಮ್ಮ ಅಮೂಲ್ಯ ಕಾಲವನ್ನು ಸೇವಾ ಕಾರ್ಯಕ್ಕೆ ಮುಡುಪಾಗಿಟ್ಟು ಯಾವುದೇ ಪ್ರತಿಫಲಾಕ್ಷೆ ಇಲ್ಲದೆ ಸೇವೆ ಸಲ್ಲಿಸುತ್ತಿದ್ದಾರೆ ಎಂದರು. ಸಮಾರಂಭದಲ್ಲಿ ಲಯನ್ಸ್ ಸಂಸ್ಥೆ ಅಧ್ಯಕ್ಷೆ ಪದ್ಮಾವತಮ್ಮ, ವೈ.ಸಿ. ಕೃಪಾಕರ್ ಹಾಗೂ ತಾಲೂಕು ಸೊಸೈಟಿ ಸಹ ಕಾರ್ಯದರ್ಶಿ ಅರುಣ್‌ಕುಮಾರ್ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.