ಸರೋಜಿನಿ ಮಹಿಷಿ ವರದಿ ಯಥಾವತ್ ಜಾರಿಗೊಳಿಸಿ
ರಾಮನಗರ: ಡಾ.ಸರೋಜಿನಿ ಮಹಿಷಿ ವರದಿಯನ್ನು ಯಥಾವತ್ ಜಾರಿಗೊಳಿಬೇಕೆಂದು ಆಗ್ರಹಿಸಿ ಕರುನಾಡ ಸೇನೆ ಸಂಘಟನೆಯ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು. ನಗರದ ಅಂಬೇಡ್ಕರ್ ಭವನದ ಬಳಿ ಜಮಾಯಿಸಿದ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆಯಲ್ಲಿ ತೆರಳಿ, ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭನಟನೆ ನಡೆಸಿದರು. 30 ವರ್ಷ ಕಳೆದರೂ ಸರೋಜಿನಿ ಮಹಿಷಿ ವರದಿಯನ್ನು ಜಾರಿ ಮಾಡದ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. 1983ರಲ್ಲೇ ಸರ್ಕಾರಕ್ಕೆ ಸರೋಜಿನಿ ಮಹಿಷಿ ವರದಿ ಸಲ್ಲಿಕೆಯಾಗಿದ್ದರೂ ಅಲ್ಲಿಂದ ಇಲ್ಲಿಯವರೆಗೆ ಆಡಳಿತ ನಡೆಸಿದ ಯಾವುದೇ ಸರ್ಕಾರ ವರದಿಯನ್ನು ಅನುಷ್ಠಾನಕ್ಕೆ ಕ್ರಮ ಕೈಗೊಂಡಿಲ್ಲ. ಇದರಿಂದಾಗಿ ಕನ್ನಡಿಗರಿಗೆ ಮೀಸಲಾಗಿರಬೇಕಿದ್ದ ಉದ್ಯೋಗಗಳು ಅನ್ಯಭಾಷಿಕರ ಪಾಲಾಗುತ್ತಿವೆ ಎಂದು ಪ್ರತಿಭಟನಾನಿರತರು ಆರೋಪಿಸಿದರು. ಬಹುರಾಷ್ಟ್ರೀಯ ಕಂಪನಿಗಳಿಗೆ ನಾಡಿನ ಜಲ, ನೆಲ, ನೈಸರ್ಗಿಕ ಸಂಪತ್ತು ಎಲ್ಲವನ್ನೂ ಅತ್ಯಂತ ಕಡಿಮೆ, ಬೆಲೆಗೆ ನೀಡಲಾಗುತ್ತಿದೆ. ಇದನ್ನು ಉಪಯೋಗಿಸಿಕೊಂಡು ಕೋಟ್ಯಂತರ ರು. ಲಾಭಗಳಿಸುವ ಕಂಪನಿಗಳು ಕನ್ನಡಿಗರಿಗೆ ಉದ್ಯೋಗ ನೀಡದೇ ವಂಚಿಸುತ್ತಿವೆ. ಇಂತಹ ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕಾದ ಸರ್ಕಾರ ಕೈಕಟ್ಟಿ ಕುಳಿತಿದೆ ಎಂದರು. ಸರ್ಕಾರ ಕೂಡಲೇ ಸರೋಜಿನಿ ಮಹಿಷಿ ವರದಿಯನ್ನು ಜಾರಿಗೆ ತಂದು, ಶೇ.80ರಷ್ಟು ಉದ್ಯೋಗವನ್ನು ಕನ್ನಡಿಗರಿಗಾಗಿ ಮೀಸಲಿಟ್ಟರೆ ಮಾತ್ರ ನಾಡಿನಲ್ಲಿ ಬಹುರಾಷ್ಟ್ರೀಯ ಕಂಪೆನಿಗಳಿಗೆ ಪ್ರಾರಂಭಕ್ಕೆ ಅವಕಾಶ ನೀಡಬೇಕು. ಆ ಮೂಲಕ ಕನ್ನಡಿಗರ ಹಕ್ಕುಗಳನ್ನು ರಕ್ಷಿಸಬೇಕು ಎಂದು ಒತ್ತಾಯಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

