ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಗೆ ಕ್ರಮ
ಕನ್ನಡಪ್ರಭ ವಾರ್ತೆ, ದೊಡ್ಡಬಳ್ಳಾಪುರ,ನ.26
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ಪೊಲೀಸ್ ಇಲಾಖೆ ನೇತೃತ್ವದಲ್ಲಿ ಇಲ್ಲಿನ ಬಸವ ಭವನದಲ್ಲಿ ದಲಿತ ಮುಖಂಡರ ಸಭೆ ಮಂಗಳವಾರ ನಡೆಯಿತು.
ತಾಲೂಕಿನ ಅನೇಕ ದಲಿತ ಸಂಘಟನೆಗಳ ಮುಖಂಡರು ಸಭೆಯಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳು ಮತ್ತು ಪರಿಹಾರೋಪಾಯಗಳ ಕುರಿತು ಮುಕ್ತ ಚರ್ಚೆ ನಡೆಸಿದರು. ಚರ್ಚೆಯಲ್ಲಿ ಮುಖ್ಯವಾಗಿ ತಾಲೂಕಿನ ವಿವಿಧ ಭಾಗಗಳಲ್ಲಿ ದಲಿತರ ಮೇಲೆ ಆಗುತ್ತಿರುವ ದೌರ್ಜನ್ಯ, ದಲಿತ ಕೇರಿಗಳು, ಹರಿಜನ ಕಾಲೋನಿಗಳು, ಗ್ರಾಮಗಳಲ್ಲಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟ, ಅನೇಕ ಬಗೆಯ ವ್ಯಾಜ್ಯಗಳ ಕುರಿತಾಗಿ ಕಾವೇರಿದ ಚರ್ಚೆ ನಡೆಯಿತು.
ಸಭೆಯಲ್ಲಿ ಮಾತನಾಡಿದ ಅನೇಕ ಸಂಘಟನೆಗಳ ಮುಖಂಡರು, ತಾಲೂಕಿನಲ್ಲಿ ಸಮಸ್ಯೆ ಬಂದಾಗ ಎಲ್ಲ ಪಕ್ಷಗಳ ಮುಖಂಡರೂ ಪಕ್ಷ ಭೇದ ಮರೆತು ಒಂದಾದಾಗ ಮಾತ್ರ ದಲಿತರ ಸಮಸ್ಯೆಗಳು ಬಗೆಹರಿಯುತ್ತವೆ. ಅದನ್ನು ಬಿಟ್ಟು ಪೊಲೀಸರ ಮೇಲೆ ಆರೋಪ ಮಾಡುವುದು ವಿವೇಚನಾರ್ಹ. ದಲಿತರಿಗೆ ಅನ್ಯಾಯವಾದಲ್ಲಿ ಎಲ್ಲರೂ ಒಕ್ಕೊರಲ ದನಿಯಲ್ಲಿ ಖಂಡಿಸಬೇಕು. ಗ್ರಾಮಾಂತರ ಪ್ರದೇಶಗಳಲ್ಲಿ ಇತ್ತೀಚೆಗೆ ಇಂತಹ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕಾರಿ. ಕನ್ನಮಂಗಲದಲ್ಲಿ ದಲಿತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಕೃತ್ಯ ಖಂಡನೀಯ. ಹಳ್ಳಿಗಾಡು ಪ್ರದೇಶಗಳಲ್ಲಿ ನಿಯಮಿತವಾಗಿ ಪೊಲೀಸರು ಗಸ್ತು ವ್ಯವಸ್ಥೆ ಬಲಪಡಿಸಬೇಕು ಎಂದು ಆಗ್ರಹಿಸಿದರು.
ಈ ಸಭೆಯಲ್ಲಿ ಚರ್ಚೆಯಾದ ವಿಚಾರಗಳ ಕುರಿತು ವಿವಿಧ ಸರ್ಕಾರಿ ಇಲಾಖೆಗಳಿಗೆ ಮಾಹಿತಿ ಒದಗಿಸಬೇಕು. ಮುಂದಿನ ಸಭೆಗಳಿಗೆ ಸಮಾಜ ಕಲ್ಯಾಣ ಇಲಾಖೆ, ಅಬಕಾರಿ ಇಲಾಖೆ ಸೇರಿದಂತೆ ಸಂಬಂದಪಡುವ ಇಲಾಖೆಗಳ ಅಧಿಕಾರಿಗಳನ್ನೂ ಆಹ್ವಾನಿಸಬೇಕು. ಎಲ್ಲ ಇಲಾಖೆಗಳ ಅಧಿಕಾರಿಗಳು ದಲಿತರ ಸಮಸ್ಯೆಗಳನ್ನು ಗಂಭೀರವಾಗಿ ಆಲಿಸಿ ಪರಿಹಾರ ಕಂಡುಕೊಳ್ಳಲು ನೆರವು ನೀಡಬೇಕು ಎಂಬ ಆಗ್ರಹ ಕೇಳಿಬಂತು.
ತಿಂಗಳಿಗೊಮ್ಮೆ ಹೋಬಳಿ ಹಂತದ ಸಭೆ: ತಾಲೂಕಿನಲ್ಲಿ ದಲಿತರ ಸಮಸ್ಯೆಗಳ ನಿವಾರಣೆ ಉದ್ದೇಶದಿಂದ ಪ್ರತಿ ತಿಂಗಳು ಹೋಬಳಿ ಹಂತಗಳಲ್ಲಿ ದಲಿತ ಮುಖಂಡರ ಸಭೆಗಳನ್ನು ನಡೆಸಲು ಉದ್ದೇಶ ಹೊಂದಲಾಗಿದೆ. ಅದೇ ರೀತಿ ಪ್ರತಿ 3 ತಿಂಗಳಿಗೊಮ್ಮೆ ತಾಲೂಕು ಹಂತದಲ್ಲಿ ದಲಿತ ಸಂಪರ್ಕ ಸಭೆಗಳನ್ನು ನಡೆಸಲಾಗುವುದು. ಕನ್ನಮಂಗಲ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗಳು ಬಿಗಿಯಾದ ಕಾನೂನು ಹಿಡಿತದಲ್ಲಿದ್ದಾರೆ. ಪ್ರಕರಣದಲ್ಲಿ ಪೊಲೀಸರು ಯಾವುದೇ ಪೂರ್ವಾಗ್ರಹಗಳಿಗೆ ಒಳಗಾಗಿಲ್ಲ ಎಂದು ಡಿವೈಎಸ್ಪಿ ಶ್ರೀಧರ್ ಸ್ಪಷ್ಟಪಡಿಸಿದರು.
ಸಭೆಯಲ್ಲಿ ಡಿವೈಎಸ್ಪಿ ಶ್ರೀಧರ್, ವೃತ್ತ ಆರಕ್ಷಕ ನಿರೀಕ್ಷಕ ಶಿವಾರೆಡ್ಡಿ, ಆರಕ್ಷಕ ಉಪ ನಿರೀಕ್ಷಕ ನವೀನ್ಕುಮಾರ್, ಗಿರೀಶ್ ಸೇರಿದಂತೆ ಅನೇಕ ಪೊಲೀಸರು ಅಧಿಕಾರಿಗಳು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

