ಸುದ್ದಿ ಸಂಕ್ಷೇಪ
ನಾಳೆ ಲೋಕಾಯುಕ್ತ ಡಿವೈಎಸ್ಪಿರಿಂದ ದೂರು ಸ್ವೀಕಾರ
ರಾಮನಗರ: ರಾಮನಗರ ವಿಭಾಗದ ಲೋಕಾಯುಕ್ತ ಡಿವೈಎಸ್ಪಿ ಅವರು ನ.29ರಂದು ಕನಕಪುರ ತಾಲೂಕು ಕಚೇರಿ ಸಭಾಂಗಣದಲ್ಲಿ ಬೆಳಗ್ಗೆ 11ರಿಂದ ಮಧ್ಯಾಹ್ನ 1ರವರೆಗೆ ಸಾರ್ವಜನಿಕರಿಂದ ದೂರು ಸ್ವೀಕರಿಸುವರು. ಕನಕಪುರದ ಯಾವುದೇ ಸರ್ಕಾರಿ ಅಧಿಕಾರಿ ಸಾರ್ವಜನಿಕರ ಕೆಲಸ ಮಾಡಿಕೊಡಲು ಹಣ ಕೇಳಿದ್ದಲ್ಲಿ ಅಥವಾ ಉದ್ದೇಶಪೂರ್ವಕ ವಿಳಂಬ ಮಾಡಿದ್ದಲ್ಲಿ ಅಂತಹ ದೂರುಗಳನ್ನು ಖುದ್ದಾಗಿ ಸಲ್ಲಿಸಬಹುದು.
ಸಿದ್ಧ ಉಡುಪು ತಯಾರಿಕಾ ತರಬೇತಿ
ರಾಮನಗರ: ನೆಲಮಂಗಲದ ಅರಿಶಿನಕುಂಟೆಯ ರುಡ್ಸೆಟ್ ಸಂಸ್ಥೆಯು ಬೆಂಗಳೂರು ಗ್ರಾಮಾಂತರ, ನಗರ, ರಾಮನಗರ ಮತ್ತು ತುಮಕೂರು ಜಿಲ್ಲಾ ವ್ಯಾಪ್ತಿಯ 18 ರಿಂದ 45 ವರ್ಷದೊಳಗಿನ, ಕನ್ನಡ ಓದಲು ಬರೆಯಲು ಬಲ್ಲ ಮಹಿಳೆಯರಿಗೆ ಡಿಸೆಂಬರ್ ತಿಂಗಳಿನಲ್ಲಿ ಸಿದ್ಧ ಉಡುಪು ತಯಾರಿಕಾ ತರಬೇತಿ ಹಾಗೂ ಡಿಸೆಂಬರ್ ಎರಡನೇ ವಾರದಲ್ಲಿ 12 ದಿನಗಳ ಉಚಿತ ಉದ್ಯಮ ನಿರ್ವಹಣಾ ತರಬೇತಿ ನೀಡಲಿದೆ.
ಆಸಕ್ತರು ಅರ್ಜಿಯನ್ನು ನಿರ್ದೇಶಕರು, ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ-ಅಂಚೆ, ನೆಲಮಂಗಲ ತಾಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಈ ವಿಳಾಸಕ್ಕೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ದೂ.080-27728166, ಮೊ.9481778047, 9741129429 ಸಂಪರ್ಕಿಸಬಹುದು ಎಂದು ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ.
ವೆಬ್ ಡಿಸೈನ್ ತರಬೇತಿ
ರಾಮನಗರ: ರಾಮನಗರದ ಜಿಲ್ಲಾ ಕೈಗಾರಿಕಾ ಕೇಂದ್ರ ಮತ್ತು ಧಾರವಾಡ ಜಿಲ್ಲೆಯ ಸಿಡಾಕ್ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಮಾಗಡಿಯಲ್ಲಿ 4 ವಾರಗಳ ವೆಬ್ ಡಿಸೈನ್ ಕುರಿತು ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವು ಡಿಸೆಂಬರ್ ತಿಂಗಳಲ್ಲಿ ನಡೆಯಲಿದೆ. ತರಬೇತಿಯಲ್ಲಿ ಭಾಗವಹಿಸುವ ಅಭ್ಯರ್ಥಿಗಳು ಕನಿಷ್ಠ 8ನೇ ತರಗತಿಯಲ್ಲಿ ತೇರ್ಗಡೆಯಾಗಿರಬೇಕು ಹಾಗೂ 18 ರಿಂದ 35 ವರ್ಷದೊಳಗಿರಬೇಕು. ಆಸಕ್ತರು ತಮ್ಮ ಸ್ವವಿವರದೊಂದಿಗೆ ಮೊಬೈಲ್ ನಂಬರ್ ಸಮೇತ ಅರ್ಜಿಯನ್ನು ಜಿಲ್ಲಾ ಉಪ ನಿರ್ದೇಶಕರು, ಸಿಡಾಕ್, ಕೈಗಾರಿಕಾ ವಿಸ್ತರಣಾಧಿಕಾರಿಗಳ ಕಚೇರಿ, ಕಾಳಿಕಾಂಬ ದೇವಸ್ಥಾನ ಪಕ್ಕ ಹಳೆ ಮೈಸೂರು ಬ್ಯಾಂಕ್ ರಸ್ತೆ, ಮಾಗಡಿ ಇಲ್ಲಿಗೆ ಡಿ.5ರೊಳಗೆ ಸಲ್ಲಿಸಬಹುದು. ಹೆಚ್ಚಿನ ವಿವರಗಳಿಗೆ ಕೈಗಾರಿಕಾ ಕೇಂದ್ರದ ಜಿಲ್ಲಾ ಉಪ ನಿರ್ದೇಶಕರನ್ನು ಸಂಪರ್ಕಿಸಬಹುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

