ಬೆಂಗಳೂರು ಗ್ರಾಮಾಂತರ

ಕೌಶಲ್ಯ, ಉದ್ಯೋಗ ಮೇಳ ಆಯೋಜಿಸಲು ನಿರ್ಧಾರ

Published On :

ಕ.ಪ್ರ.ವಾರ್ತೆ, ರಾಮನಗರ, ನ.27
ಕೌಶಲ್ಯ ಹಾಗೂ ಉದ್ಯೋಗ ಮೇಳವನ್ನು ರಾಮನಗರದಲ್ಲಿ ಆಯೋಜಿಸಲು ಜಿಲ್ಲಾಡಳಿತ ನಿರ್ಧರಿಸಿದ್ದು, ಈ ಸಂಬಂಧ ಜಿಲ್ಲಾಧಿಕಾರಿ ಡಾ.ಡಿ.ಎಸ್.ವಿಶ್ವನಾಥ್ ಅವರ ಅಧ್ಯಕ್ಷತೆಯಲ್ಲಿ ಬುಧವಾರ ಪೂರ್ವಭಾವಿ ಸಭೆ ನಡೆಯಿತು.
ಕೈಗಾರಿಕಾ, ಕಾರ್ಮಿಕ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಸಾರ್ವಜನಿಕ ಶಿಕ್ಷಣ ಇಲಾಖೆಗಳು ಹಾಗೂ ಜಿಲ್ಲಾ ವ್ಯಾಪ್ತಿಯ ಕೈಗಾರಿಕಾ ಪ್ರದೇಶಗಳಲ್ಲಿನ ಕಾರ್ಖಾನೆಗಳು, ಸಂಘ-ಸಂಸ್ಥೆಗಳ ಸಹಭಾಗಿತ್ವದಲ್ಲಿ ಮೇಳ ಆಯೋಜಿಸಲು ನಿರ್ಧರಿಸಲಾಯಿತು.  
10ನೇ ತರಗತಿ ಮತ್ತು ಪಿಯುಸಿ ನಂತರ ವಿದ್ಯಾಭ್ಯಾಸ ತೊರೆದವರನ್ನು ಗುರುತಿಸಿ, ಅವರಿಗೆ ಕೌಶಲ್ಯ ವೃದ್ಧಿಸಿಕೊಳ್ಳಲು ತರಬೇತಿ ನೀಡಬೇಕು. ಇದಕ್ಕಾಗಿ ಪ್ರಮುಖ ಇಲಾಖೆಗಳು ಕೌಶಲ್ಯ ಅಭಿವೃದ್ಧಿಗಿರುವ ಯೋಜನೆಗಳನ್ನು ಬಳಸಿಕೊಳ್ಳಬೇಕು ಎಂದು ವಿಶ್ವನಾಥ್ ಸಲಹೆ ನೀಡಿದರು.
ವಿದ್ಯಾಭ್ಯಾಸ ತೊರೆದಿರುವ ಮಕ್ಕಳನ್ನು ಗುರುತಿಸಿ ಕೌಶಲ್ಯ ಮೇಳಕ್ಕೆ ಕರೆತರುವ ಹೊಣೆಯನ್ನು ಡಿಡಿಪಿಐ ಹಾಗೂ ಡಿಡಿಪಿಯು ನೇತೃತ್ವದ ಅಧಿಕಾರಿಗಳ ತಂಡಕ್ಕೆ ವಹಿಸಲಾಯಿತು. ಮೇಳಕ್ಕೆ ಉದ್ಯೋಗಾಧಿಕಾರಿ ಹೇಮಚಂದ್ರ ಅವರನ್ನು ಸಮನ್ವಯಾಧಿಕಾರಿಯಾಗಿ ನೇಮಿಸಲಾಯಿತು.  
ಕೌಶಲ್ಯಾಭಿವೃದ್ಧಿ ಮೇಳದ ಜತೆಗೆ ಉದ್ಯೋಗ ಮೇಳವನ್ನು ಆಯೋಜಿಸಿರುವುದರಿಂದ ನಿರುದ್ಯೋಗಿಗಳಿಗೆ ಅವರ ವಿದ್ಯಾಭ್ಯಾಸಕ್ಕನುಗುಣವಾಗಿ ಉದ್ಯೋಗವನ್ನು ಒದಗಿಸುವ  ನಿಟ್ಟಿನಲ್ಲಿ ವ್ಯವಸ್ಥಿತ ಕೆಲಸವಾಗಬೇಕು ಎಂದು ವಿಶ್ವನಾಥ್ ಅಧಿಕಾರಿಗಳಿಗೆ ಸೂಚಿಸಿದರು. ಸಭೆಯಲ್ಲಿ ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.