ಸೂಲಿಬೆಲೆ ಕಾರಂಜಿಯಲ್ಲಿ ಅರಳಿದ ಗ್ರಾಮೀಣ ಪ್ರತಿಭೆ
ಕ.ಪ್ರ.ವಾರ್ತೆ ಸೂಲಿಬೆಲೆ ನ.30
ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಶಾಸಕ ಎನ್. ನಾಗರಾಜ್ ಉದ್ಘಾಟಿಸಿದರು.
ನಂತರ ಮಾತನಾಡಿ ಅವರು, ಮಕ್ಕಳಲ್ಲಿರುವ ಸುಪ್ತ ಪ್ರತಿಭೆಗಳನ್ನು ಹೊರ ತೆಗೆಯಲು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಉತ್ತಮ ವೇದಿಕೆಗಳಾಗಿವೆ. ಮಕ್ಕಳು ಈ ವೇದಿಕೆಗಳನ್ನು ಸದ್ಬಳಕೆ ಮಾಡಿಕೊಂಡು ತಮ್ಮಲ್ಲಿನ ಅಗೋಚರ ಪ್ರತಿಭೆಯನ್ನು ಹೊರ ಹಾಕಬೇಕು ಎಂದರು.
ಮುಖ್ಯ ಅತಿಥಿಯಾಗಿದ್ದ ಸ್ವಾತಂತ್ರ್ಯ ಹೋರಾಟಗಾರ ಸೂ.ರಂ ರಾಮಯ್ಯ ಮಾತನಾಡಿ, ಮಕ್ಕಳಿಗೆ ಕಲಿಕೆಗೆ ಮಾತ್ರ ಶಾಲೆ ಇರೋಲ್ಲ ಆಟ, ಪಾಠದ ಜೊತೆಗೆ ತನ್ನಲ್ಲಿ ಅಡಗಿರುವ ಪ್ರತಿಭೆಯನ್ನು ಹತ್ತಾರು ಹಂತದಲ್ಲಿ ಪ್ರದರ್ಶನ ಮಾಡುವಂತ ಅವಕಾಶ ಸಿಗುತ್ತದೆ. ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ. ಪ್ರಸಾದ್ ಮಾತನಾಡಿದರು.
ಕಾರಂಜಿ ಕಾರ್ಯಕ್ರಮಕ್ಕೆ ಆಗಮಿಸಿದ ಕ್ಲಸ್ಟರ್ ವ್ಯಾಪ್ತಿಯ 22 ಶಾಲೆಗಳ ಮಕ್ಕಳು ನಾನಾ ರೀತಿಯಲ್ಲಿ ತಮ್ಮಲ್ಲಿರುವ ಪ್ರತಿಭೆಗಳನ್ನು ಅನಾವರಣ ಮಾಡಿದ ನಂತರ ಸಂಜೆ ಸಮಾರೋಪ ಸಮಾರಂಭ ನಡೆಯಿತು.ಇದರಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಬೈಲಾಂಜಿನಪ್ಪ ಪಾಲ್ಗೊಂಡು ಮಾತನಾಡಿದರು. ವಿಜೇತರಾದ ಎಲ್ಲರಿಗೆ ಬಹುಮಾನಗಳನ್ನು ನೀಡಲಾಯಿತು. ಶಿಕ್ಷಕರ ಸಂಘದ ತಾ.ಅಧ್ಯಕ್ಷ ಬಿ.ಶ್ರೀನಿವಾಸ್,ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ನಾಗರಾಜ್,ಇಸಿಓ ಚಿನ್ನಸ್ವಾಮಿಗೌಡ, ವಿವೇಕಾನಂದ ಶಾಲೆ ಮುಖ್ಯ ಶಿಕ್ಷಕ ನಾಗರಾಜ್, ಶರಣಪ್ಪ ಕಂಬಳಿ, ಓಂಕಾರಮ್ಮ ಸೇರಿದಂತೆ ಹಲವರು ಮಂದಿ ಪಾಲ್ಗೊಂಡಿದ್ದರು. ಛದ್ಮ ವೇಷ, ಕಾಳಿ ಮಾತೆ, ಗಣೇಶ,ನರಸಿಂಹ ಪಾತ್ರಗಳು ಜನರ ಗಮನ ಸೆಳೆದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

