ಕಾರ್ತಿಕ ಮಾಸದ ಪ್ರಯುಕ್ತ ಪಾದಯಾತ್ರೆ
ಹೊಸಕೋಟೆ: ತಾಲೂಕಿನ ಅನುಗೊಂಡನಹಳ್ಳಿ ಹೋಬಳಿ ನಾರಾಯಣಕೆರೆ ಶ್ರೀ ವೀರಾಂಜನೇಯ ಭಜನೆ ಮಂಡಳಿಯ ಸದಸ್ಯರು ಹಾಗೂ ಗ್ರಾಮಸ್ಥರು ಕಾರ್ತಿಕ ಮಾಸದ ಪ್ರಯುಕ್ತ ಡಿ.1ರಂದು ಶ್ರೀ ಕ್ಷೇತ್ರ ವಕ್ಕಲೇರಿಯ ಶ್ರೀ ಮಾರ್ಕಂಡೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಕೈಗೊಂಡಿದ್ದಾರೆ. ಪಾದಯಾತ್ರೆಯಲ್ಲಿ ತೆರಳಿ ಭಜನೆ ನಡೆಸಿ ಪೂಜಾ ಕಾರ್ಯಗಳಲ್ಲಿ ಪಾಲ್ಗೊಂಡು ಹಿಂದಿರುಗುವರು. ಯಾತ್ರಿಗಳಿಗೆ ವ್ಯವಸಾಯ ಸೇವಾ ಸಂಘದ ನಿರ್ದೇಶಕ ಸಿದ್ದಾಪುರ ಸುರೇಶ್ ಉಪಾಹಾರ, ಗ್ರಾಮ ಪಂಚಾಯಿತಿ ಸದಸ್ಯ ಪಟೇಲ್ ವೆಂಕಟಾಚಲರೆಡ್ಡಿ ಊಟದ ವ್ಯವಸ್ಥೆ ಸಹ ಕಲ್ಪಿಸಿದ್ದಾರೆ.
ಕ್ರೀಡಾಕೂಟಕ್ಕೆ ಆಯ್ಕೆ
ದೊಡ್ಡಬಳ್ಳಾಪುರ: ಇಲ್ಲಿನ ವಿದ್ಯಾ ಶಿಲ್ಪ ಪಬ್ಲಿಕ್ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಮಧುಚಂದ್ರ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾನೆ. ಈತ ವಿಭಾಗೀಯ ಕ್ರೀಡಾಕೂಟದ ಅಥ್ಲೆಟಿಕ್ಸ್ ವಿಭಾಗದ ತ್ರಿವಿಧ ಜಿಗಿತದಲ್ಲಿ ಉತ್ತಮ ಸಾಧನೆಯೊಂದಿಗೆ ರಾಜ್ಯ ಮಟ್ಟಕ್ಕೆ ಅರ್ಹತೆ ಪಡೆದಿದ್ದಾನೆ. ಶಾಲಾ ಆಡಳಿತ ಮತ್ತು ಬೋಧಕ ಸಿಬ್ಬಂದಿ ವಿದ್ಯಾರ್ಥಿಯನ್ನು ಅಭಿನಂದಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

