ಲಾಭಕ್ಕೆ ರೈತನ ಸಾವು ಬಳಕೆ: ಕಾಂಗ್ರೆಸ್ ಸಮಿತಿ ಆರೋಪ
ಬೆಂಗಳೂರು: ಬೆಳಗಾವಿಯಲ್ಲಿ ಕಬ್ಬು ಬೆಳೆಗಾರನ ಆತ್ಮಹತ್ಯೆಯನ್ನು ಬಿಜೆಪಿ ಹಾಗೂ ಕೆಜೆಪಿ ಪಕ್ಷಗಳು ತಮ್ಮ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿವೆ ಎಂದು ಬೆಂಗಳೂರು ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಆರೋಪಿಸಿದೆ.
ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ನಡೆದಿದ್ದ ಹಾವೇರಿ ಗೋಲಿಬಾರ್ನಲ್ಲಿ ರೈತರನ್ನು ಗುಂಡಿಟ್ಟು ಕೊಲ್ಲಲಾಗಿದೆ. ಅವರ ಅವಧಿಯಲ್ಲಿ 750ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಕ್ಕರೆ ಬೆಲೆ ಹೆಚ್ಚಿದ್ದರೂ ಕಬ್ಬಿನ ಬೆಲೆಯನ್ನು ಕೇವಲ 2400 ನಿಗದಿಪಡಿಸಿದ್ದು ಬಿಜೆಪಿ ಸರ್ಕಾರ. ಬಿಜೆಪಿಯ ಪ್ರಮುಖ ನಾಯಕ ಮುರುಗೇಶ ನಿರಾಣಿ ಅವರ ಕುಟುಂಬಕ್ಕೆ ಸೇರಿದ ಸಕ್ಕರೆ ಕಾರ್ಖಾನೆಯಿಂದ ಸಕಾಲದಲ್ಲಿ ಹಣ ಬರದಿರುವುದರಿಂದ ಕಂಗೆಟ್ಟ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ವಿಷಯ ತಿಳಿದಿದ್ದರೂ ಅದನ್ನು ಮುಚ್ಚಿಟ್ಟು ಕಾಂಗ್ರೆಸ್ ಸರ್ಕಾರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಸಮಿತಿಯ ಪ್ರಧಾನ ಕಾರ್ಯದರ್ಶಿ ಕೆ.ಎಸ್. ನಾಗರಾಜ್ ಆರೋಪಿಸಿದ್ದಾರೆ.
ರೈತರ ಸಾವಿನ ವಿಚಾರದಲ್ಲಿ ರಾಜಕೀಯ ಮಾಡಬಾರದು ಎಂಬ ಪ್ರತಿಪಕ್ಷದ ನಾಯಕ ಜೆಡಿಎಸ್ನ ಎಚ್.ಡಿ. ಕುಮಾರಸ್ವಾಮಿ ಅವರ ಮಾತುಗಳನ್ನು ಎಲ್ಲರೂ ಗಂಭೀರವಾಗಿ ಪರಿಗಣಿಸಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

