ಬೆಂಗಳೂರು ಗ್ರಾಮಾಂತರ

'ಸತ್ವರಹಿತ ಸಾಹಿತ್ಯದಿಂದ ಕನ್ನಡಕ್ಕೆ ತೀವ್ರ ಆತಂಕ'

Published On :

ದೊಡ್ಡಬಳ್ಳಾಪುರ:  ಇಲ್ಲಿನ ಜೈ ಭಾರತ್ ರಕ್ಷಣಾ ವೇದಿಕೆ ಮತ್ತು ಪ್ರವಾಸಿ ಮಂದಿರ ವೃತ್ತದ ಆಟೋ ಚಾಲಕರ ಸಂಘದ ನೇತೃತ್ವದಲ್ಲಿ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ಮಾಜಿ ಶಾಸಕ ಜೆ.ನರಸಿಂಹಸ್ವಾಮಿ ಉದ್ಘಾಟಿಸಿದರು. ಅವರು ಮಾತನಾಡಿ, ಕನ್ನಡ ಇಂದು ಉಳಿದಿರುವುದು ಶ್ರಮಿಕವರ್ಗದಲ್ಲಿ ಮಾತ್ರ. ಸಾಫ್ಯ್ವೇರ್ ಎಂಜಿನಿಯರ್ಗಳಾಗಲೀ, ನಗರವಾಸಿಗಳಾಗಲೀ ಕನ್ನಡವನ್ನು ಬೆಳೆಸುವ ಅಥವಾ ಉಳಿಸುವ ಕೆಲಸ ಮಾಡುತ್ತಿಲ್ಲ ಎಂದು ಅಭಿಪ್ರಾಯಪಟ್ಟರು. ಜೈ ಭಾರತ್ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ನಾರಾಯಣಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಸಂಘಟನೆ ಅಧ್ಯಕ್ಷ ಟಿ.ವೆಂಕಟೇಶ್, ತಾಕಸಾಪ ಅಧ್ಯಕ್ಷ ರವಿಕಿರಣ್,ನಗರಸಭೆ ಸದಸ್ಯ ಎಚ್.ಎಸ್.ಶಿವಶಂಕರ್, ನಮೋ ಬ್ರಿಗೇಡ್ ಮುಖಂಡ ಮುರಳಿ ಆಟೋ ಚಾಲಕರ ಸಂಘದ ಅಧ್ಯಕ್ಷ ತಿಮ್ಮರಾಜು, ಕಾರ್ಯದರ್ಶಿ ರಮೇಶ್, ಸಹಸ್ರಹೆಜ್ಜೆ ಅಬ್ದುಲ್ ರೆಹಮಾನ್ ಮತ್ತಿತರರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.