ನಿರ್ಭೀತಿಯಿಂದ ಮತ ಚಲಾಯಿಸಿ: ತಹಸೀಲ್ದಾರ್ ಬಿ.ಟಿ. ಕುಮಾರಸ್ವಾಮಿ
ಸೂಲಿಬೆಲೆ: ಹೊಸಕೋಟೆ ತಾಲೂಕಿನ ನಡುವತ್ತಿ ಗ್ರಾಮದಲ್ಲಿರುವ ಮತದಾರರಿಗೆ ಬೆದರಿಕೆಯೊಡ್ಡಿ ಭಯಪಡುವಂತೆ ಪ್ರಚಾರ ನಡೆಸುತ್ತಿದ್ದಾರೆ ಎಂಬ ಗ್ರಾಮಸ್ಥರ ದೂರಿನ ಹಿನ್ನೆಲೆಯಲ್ಲಿ ಹೊಸಕೋಟೆ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಡಾ. ನಟರಾಜ್ ಹಾಗೂ ತಹಸೀಲ್ದಾರ್ ಬಿ.ಟಿ ಕುಮಾರಸ್ವಾಮಿ ಬುಧವಾರ ಗ್ರಾಮಕ್ಕೆ ಭೇಟಿ ನೀಡಿ ಮತದಾರರಲ್ಲಿ ದೈರ್ಯ ತುಂಬಿದರು.
ಈ ವೇಳೆ ಮಾತನಾಡಿದ ನಟರಾಜ್ ,ಮುಕ್ತ ಮತ್ತು ನ್ಯಾಯ ಸಮ್ಮತ ಚುನಾವಣಿ ನಡೆಸಲು ಆಯೋಗ ಎಲ್ಲರೀತಿಯ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದು, ಗ್ರಾಮದ ಯಾವುದೇ ಮತದಾರ ಭಯಪಡಬಾರದು.ನಿರ್ಭೀತಿಯಿಂದ ಮತವನ್ನು ಚಲಾಯಿಸುವಂತೆ ವಾತಾವರಣವನ್ನು ಕಲ್ಪಿಸಲಾಗುವುದು. ಮತದಾರರು ಯಾವುದೇ ಆಸೆ, ಆಮಿಷಗಳಿಗೆ ಒಳಗಾಗದೇ ಮುಕ್ತವಾಗಿ ಮತದಾನ ಮಾಡಲು ಸಕಲ ವ್ಯವಸ್ಥೆಯನ್ನು ಮಾಡಲಾಗುವುದು. ಗ್ರಾಮದಲ್ಲಿ ಮತದಾನ ನಡೆಯುವ ವೇಳೆ ಅಗತ್ಯವಾಗಿರುವ ಪೊಲೀಸ್ ಬಂದೋಬಸ್ತು ಏರ್ಪಡಿಸಲಾಗುವುದು. ಅಲ್ಲದೇ ಅರೆ ಸೇನಾಪಡೆಗಳ ನಿಯೋಜನೆ ಮಾಡಲಾಗುವದು. ಮತದಾರರು ಭಯ ಮತ್ತು ಗೊಂದಲಗಳಿಗೆ ಒಳಗಾಗುವದು ಬೇಡ. ಮುಕ್ತವಾಗಿ ಮತದಾನ ಮಾಡಲು ಸಿದ್ಧವಾಗಿರಬೇಕು ಎಂದು ಗ್ರಾಮಸ್ಥರಲ್ಲಿ ಧೈರ್ಯ ತುಂಬಿದರು. ಗ್ರಾಮದಲ್ಲಿ ಮನೆಗಳಿಗೆ ಭೇಟಿ ನೀಡಿ ಮತದಾರರಿಗೆ ಇರುವ ಭಯ,ಅಂಜಿಕೆ ಬಗ್ಗೆ ಮಾಹಿತಿ ಪಡೆದುಕೊಂಡರು. ತಹಸೀಲ್ದಾರ್ ಕುಮಾರಸ್ವಾಮಿ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

