ಹೋರಿಗೆ ಮಾರುತಿ ವ್ಯಾನ್ ಡಿಕ್ಕಿ: ಸಾವು
ಮಾಗಡಿ: ಮಾರುತಿ ವ್ಯಾನ್ ಹೋರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಹೋರಿ ಮೃತಪಟ್ಟ ಘಟನೆ ತಿರುಮಲೆ ಹೆಬ್ಬಾಗಿಲ ಬಳಿ ಬುಧವಾರ ನಡೆದಿದೆ. ಕುಣಿಗಲ್ ತಾಲೂಕಿನ ಬಿಳಿದೇವಾಲಯ ಗ್ರಾಮದ ದೇವರಾಜು ಎಂಬುವರು ಇಲ್ಲಿನ ಶ್ರೀರಂಗನಾಥಸ್ವಾಮಿ ದನಗಳ ಜಾತ್ರೆಗೆ ಬಂದಿದ್ದರು. ಜೋಡಿ ಹೋರಿಗಳನ್ನು ಟೆಂಪೋದಿಂದ ಇಳಿಸುತ್ತಿದ್ದಾಗ ಆಕಸ್ಮಿಕವಾಗಿ ಒಂದು ಹೋರಿ ರಸ್ತೆಗೆ ಜಿಗಿದಿದ್ದು, ಮಾಗಡಿಯಿಂದ ಬರುತ್ತಿದ್ದ ಮಾರುತಿ ವ್ಯಾನ್ ಹೋರಿಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಹೋರಿಯೊಂದು ಸ್ಥಳದಲ್ಲೇ ಮೃತಪಟ್ಟಿದೆ. 1.5 ಲಕ್ಷ ರು ಮೌಲ್ಯದ ಹೋರಿ ಎಂದು ಅಂದಾಜಿಸಲಾಗಿದೆ. ಇದರಿಂದ ರೊಚ್ಚಿಗದ್ದ ರೈತರು ಮಾರುತಿ ವ್ಯಾನ್ ಮಾಲೀಕರನ್ನು ಹಿಡಿದು ಹಲ್ಲೆಗೆ ಯತ್ನಿಸಿದರು. ವಿಷಯ ತಿಳಿದ ಪೊಲೀಸರು ಸ್ಥಳಕ್ಕೆಆಗಮಿಸಿ ಆಗುವ ಅನಾಹುತ ತಪ್ಪಿಸಿದರು. ಹೋರಿ ಮಾಲೀಕ ದೇವರಾಜು ಪೊಲೀಸರಿಗೆ ದೂರು ನೀಡಿರುವುದಾಗಿ ತಿಳಿಸಿದರು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

