ಸಿದ್ದರಾಮಯ್ಯನವರೆ ಜೆಡಿಎಸ್ ನಿರ್ನಾಮ ಮಾಡುತ್ತೀರಾ: ಕುಮಾರಸ್ವಾಮಿ ಸವಾಲು
ದೇವನಹಳ್ಳಿ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಬುಧವಾರ ಸಂಜೆ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಪ್ರಚಾರ ನಡೆಸಿದರಲ್ಲದೆ ಹಳೇ ಬಸ್ ನಿಲ್ದಾಣದಲ್ಲಿ ಭಾರಿ ಚುನಾವಣಾ ಪ್ರಚಾರ ಸಭೆ ನಡೆಸಿದರು.
ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ನಾನು ಪಲಾಯನ ಮಾಡಿಲ್ಲ, ಮಾಜಿ ಮುಖ್ಯಮಂತ್ರಿ
ಸದಾನಂದಗೌಡರು ಉಡುಪಿ ಕ್ಷೇತ್ರ ಬಿಟ್ಟು ಬೆಂಗಳೂರು ಉತ್ತರಕ್ಕೆ ಬಂದಿರುವುದು ಪಲಾಯನವಲ್ಲವೇ ಎಂದು ಬಚ್ಚೇಗೌಡರಿಗೆ ಸವಾಲು ಹಾಕಿದರು. ಚಿಕ್ಕಬಳ್ಳಾಪುರ ಕ್ಷೇತ್ರದ ನನ್ನ ಜನತೆಯ ಒತ್ತಾಯದಮೇರೆಗೆ ಇಲ್ಲಿ ಸ್ಪರ್ಧಿಸುತ್ತಿದ್ದೇನೆ ಎಂದರಲ್ಲದೆ ಜೆಡಿಎಸ್ ವನ್ನು ನಿರ್ನಾಮ ಮಾಡುತ್ತೇನೆ ಎಂದು ಹೇಳುತ್ತಿರುವ ಮುಖ್ಯಮಂತ್ರಿಗಳು ತಾವು ಯಾವ ಪಕ್ಷದಿಂದ ರಾಜಕೀಯವಾಗ್ಮೇಲೆಬಂದವರು ಎಂದು ಅರಿಯಬೇಕು ಎಂದರು. ಚುನಾವಣೆ ನಂತರ ಈ ಕ್ಷೇತ್ರದ ಎಲ್ಲ ಹಳ್ಳಿಗಳಿಗೂ ಭೇಟಿ ನೀಡಿ ನಿಮ್ಮ ಕಷ್ಟ ಸುಖಗಳಿಗೆ ಸ್ಪಂದಿಸುತ್ತೇನೆ ಎಂದರು. ಸಮಾರಂಭದಲ್ಲಿ ವಿಧಾನಪರಿಷತ್ ಸದಸ್ಯ ಈ.ಕೃಷ್ಣಪ್ಪ, ಜಿಲ್ಲಾ ಜೆಡಿಎಸ್ ಖಜಾಂಚಿ ಬಿ.ಮುನೇಗೌಡ ಹಿರಿಯರಾದ ಆರ್.ಎನ್.ಕೃಷ್ಣಮೂರ್ತಿ, ತೂಬಗೆರೆ ಹೋಬಳಿಯ ಮುಖಂಡರಾದ ಹಾಡೋನಹಳ್ಳಿ ಅಪ್ಪಯ್ಯಣ್ಣ, ತಾಲೂಕು ಜೆಡಿಎಸ್ ಅಧ್ಯಕ್ಷ ಮುನಿಶಾಮಯ್ಯ ಹಾಗೂ ಮುಖಂಡರು ಭಾಗವಹಿಸಿದ್ದರು. ಸುವರ್ಣ ಕರ್ನಾಟಕ ಜನಶಕ್ತಿ ವೇದಿಕೆಯ ರವಿ, ರೈತ ಸಂಘದ ಅಧ್ಯಕ್ಷ ಗಾರೆ ರವಿಕುಮಾರ್ ಪುತ್ರ ಅರುಣ್, ನಿವೃತ್ತ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಸಿ.ಮುನಿಯಪ್ಪ, ನಸ್ಸೂರು ರಘು, ಹೊಸಹಳ್ಳಿ ಶ್ರೀನಿವಾಸ್ ್ಹಾಗೂ ನೂರಾರು ಇತರ ಪಕ್ಷಗಳ ಕಾರ್ಯಕರ್ತರು ಜೆಡಿಎಸ್ಗೆ ಸೇರ್ಪಡೆಗೊಂಡರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

