ಬದುಕಿನ ಹಕ್ಕನ್ನೇ ಕಸಿದುಕೊಂಡಿರುವ ಸರ್ಕಾರಗಳು: ಕೆ. ಆರ್ಕೇಶ್ ಆಕ್ರೋಶ
ದೊಡ್ಡಬಳ್ಳಾಪುರಛ ಕಾಂಗ್ರೆಸ್ ಮತ್ತು ಬಿಜೆಪಿ ದೇಶವನ್ನು ದಿವಾಳಿ ಮಾಡಿವೆ. ಬೆಲೆ ಏರಿಕೆ ನೀತಿಗಳು ಬಡಜನರ ಬದುಕಿನ ಹಕ್ಕನ್ನೇ ಕಸಿದುಕೊಂಡಿವೆ ಎಂದು ಆಮ್ ಆದ್ಮಿ ಪಾರ್ಟಿಯ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೆ. ಆರ್ಕೇಶ್ ಆರೋಪಿಸಿದರು.
ಇಲ್ಲಿನ ಸಿದ್ಧಲಿಂಗಯ್ಯ ವೃತ್ತದಲ್ಲಿ ಅವರು ಮತಯಾಚನೆ ಮಾಡಿ ಮಾತನಾಡಿದರು.
ಭ್ರಷ್ಟಾಚಾರ ಮುಕ್ತ ಸರ್ಕಾರದ ರಚನೆಗೆ ಎಎಪಿ ಪಣತೊಟ್ಟಿದೆ. ಎಲ್ಲ ಹಂತಗಳಲ್ಲಿ ಹಾಸು ಹೊಕ್ಕಾಗಿರುವ ಭ್ರಷ್ಚಾಚಾರ, ಲಂಚಗುಳಿತನವನ್ನು ಕೊನೆಗಾಣಿಸಬೇಕು. ಯುಪಿಎ ಸರ್ಕಾರ ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ಮುಳುಗಿದೆ. ಅದೇ ರೀತಿ ಮೋದಿ ಹೆಸರು ಹೇಳಿಕೊಂಡು ಮತ ಕೇಳುತ್ತಿರುವ ಬಿಜೆಪಿಗೆ ಪಕ್ಷದ ಹೆಸರಿನಲ್ಲಿ ಮತ ಕೇಳುವ ವಿಶ್ವಾಸವೂ ಇಲ್ಲದಾಗಿದೆ. ದೇಶದಲ್ಲಿ ಜಿಡಿಪಿ ಪ್ರಮಾಣ ಗಣನೀಯವಾಗಿ ಕುಸಿದಿದೆ. ಕುಸಿಯುತ್ತಿರುವ ಆರ್ಥಿಕ ವ್ಯವಸ್ಥೆ ಸಾಮಾನ್ಯ ಜನರ ಜೀವನವನ್ನು ದುಸ್ತರವಾಗಿಸಿದೆ. ಹೆಚ್ಚುತ್ತಿರುವ ತೆರಿಗೆಗಳು ಮಾರಕವಾಗಿ ಪರಿಣಮಿಸಿವೆ. ಈ ದೇಶಕ್ಕೆ ಒಂದು ಸ್ಪಷ್ಟ ಆರ್ಥಿಕ ನೀತಿ ಇಲ್ಲದಾಗಿದೆ. ದೇಶದ ಶೇ.30ರಷ್ಟು ಹಣ ವಿದೇಶಿ ಬ್ಯಾಂಕುಗಳಲ್ಲಿ ಅಕ್ರಮ ಖಾತೆಗಳಲ್ಲಿ ಸೇರಿದೆ. ಈ ಎಲ್ಲ ಕಳಂಕಗಳಿಂದ ದೇಶ ಮುಕ್ತವಾದರೆ ಗಾಂಧಿ ಕಂಡ ರಾಮರಾಜ್ಯದ ಕನಸು ನನಸಾಗುತ್ತದೆ. ಈ ಹಿನ್ನಲೆಯಲ್ಲಿ ಈಗಾಗಲೇ ಚಳವಳಿಯ ಮೂಲಕವೇ ಹೆಸರು ಮಾಡಿರುವ ಎಎಪಿ ಅರವಿಂದ ಕೇಜ್ರೀವಾಲರ ನೇತೃತ್ವದಲ್ಲಿ ದೇಶದಲ್ಲಿ ಹೊಸ ಬಗೆಯ ರಾಜಕೀಯ ಶಕ್ತಿಯ ಪ್ರತಿಷ್ಠಾಪನೆಗೆ ಪಣತೊಟ್ಟಿದೆ ಎಂದರು.
ಈ ಸಂದರ್ಭದಲ್ಲಿ ತಳ್ಳುಗಾಡಿ ವ್ಯಾಪಾರಿಗಳು, ಬೀದಿಬದಿ ವ್ಯಾಪಾರಿಗಳು, ವರ್ತಕರು, ಸಾರ್ವಜನಿಕರಿಗೆ ಕರಪತ್ರ ಹಂಚಿ ಮತಯಾಚನೆ ಮಾಡಿದರು. ಪಕ್ಷದ ಕೆಲ ಕಾರ್ಯಕರ್ತರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

