ಸಹಸ್ರಾರು ಭಕ್ತರ ಸಮ್ಮುಖಸಿದ್ಧಲಿಂಗ ಶ್ರೀ ಅಂತ್ಯಕ್ರಿಯೆ
ನೆಲಮಂಗಲ: ಬುಧವಾರ ಲಿಂಗೈಕ್ಯರಾದ ತಾಲೂಕಿನ ಕಂಬಾಳು ಮೂಲ ಸಂಸ್ಥಾನ ಮಠದ ಶ್ರೀ ಸಿದ್ಧಲಿಂಗಸ್ವಾಮೀಜಿ ಪಾರ್ಥಿವ ಶರೀರವನ್ನು ಕಂಬಾಳು ಗ್ರಾಮದಲ್ಲಿ ಮುತ್ತಿನ ಪಲ್ಲಕ್ಕಿಯಲ್ಲಿ ಮೆರವಣಿಗೆ ನಡೆಸಿ ಮಠದ ಸಮೀಪವೇ ವೀರಶೈವ ಧರ್ಮದ ವಿಧಿ ವಿಧಾನದಂತೆ ಗುರುವಾರ ಅಂತ್ಯ ಸಂಸ್ಕಾರ ನಡೆಸಲಾಯಿತು.
ಮೈಸೂರಿನ ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ, ಕನಕಪುರ ಮಠದ ಮುಮ್ಮಡಿ ನಿರ್ವಾಣ ಸ್ವಾಮೀಜಿ, ಬೇಲಿ ಮಠದ ಶಿವರುದ್ರ ಸ್ವಾಮೀಜಿ, ಗದ್ದುಗೆ ಮಠದ ಸಹಂತ ಸ್ವಾಮೀಜಿ, ಬಂಡೆ ಮಠದ ಬಸವಲಿಂಗ ಸ್ವಾಮೀಜಿ, ಹೊನ್ನಮ್ಮ ಗವಿ ಮಠದ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಸೇರಿದಂತೆ 50 ಕ್ಕೂ ಹೆಚ್ಚಿನ ಮಠಗಳ ಪೂಜ್ಯರ ಸಮ್ಮುಖದಲ್ಲಿ ಪೂಜೆ ಸಲ್ಲಿಸಿ ಭಕ್ತರ ಜಯ ಘೋಷದೊಂದಿಗೆ ಅಂತ್ಯ ಸಂಸ್ಕಾರ ಬೆಳಿಗ್ಗೆ 11-30ಕ್ಕೆ ನಡೆಸಲಾಯಿತು.
ಅಂತ್ಯ ಸಂಸ್ಕಾರಕ್ಕೂ ಮುನ್ನ ನೆರೆದಿದ್ದ ಸಾವಿರಾರು ಭಕ್ತರನ್ನು ಉದ್ದೇಶಿಸಿ ಮಾತನಾಡಿದ ಸಿದ್ಧಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಶರಣರ ಸಾವನ್ನು ಮರಣದಲ್ಲಿ ನೋಡು, ಮರಣವೇ ಮಹಾನವಮಿ ಎಂದು ಜನ ಸೇವೆಯೇ ಜನಾರ್ದನ ಸೇವೆ ಎಂದು ಭಾವಿಸಿ ತಮ್ಮ ಜೀವನವನ್ನು ಮುಡುಪಾಗಿಡುವ ಮಠಗಳ ಸ್ವಾಮಿಗಳ ಸೇವೆ ಸದಾ ಹಸಿರು. ಭಕ್ತರ ನಂಬಿಕೆಯನ್ನು ಉಳಿಸಿಕೊಂಡು ಹೋಗುವ ಮಹಾನ್ ಕಾರ್ಯವನ್ನು ಕಂಬಾಳು ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಮಾಡಿ ತೋರಿಸಿರುವುದಕ್ಕೆ ಇಲ್ಲಿ ನೆರೆದಿರುವ ಭಕ್ತ ಸಮೂಹವೇ ಸಾಕ್ಷಿ ಎಂದರು.
ಉತ್ತಮ ಸೇವೆ: ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಮಾತನಾಡಿ ಶಿವಗಂಗೆಯ ಪರಿಸರದಲ್ಲಿ ಸಾಕಷ್ಟು ಮಠಗಳಿದ್ದು ಎಲ್ಲಾ ಮಠಗಳು ಉತ್ತಮವಾದ ಜನ ಸೇವೆಯನ್ನು ಧರ್ಮ ಕಾರ್ಯವನ್ನು ನಡೆಸಿಕೊಂಡು ಬರುತ್ತಿವೆ. ಲಿಂಗೈಕ್ಯ ಸಿದ್ಧಲಿಂಗಸ್ವಾಮೀಜಿ ಅವರ ಸೇವೆ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಸಂಸ್ಕೃತ ಭಾಷೆಯನ್ನು ಗ್ರಾಮೀಣ ಮಕ್ಕಳಿಗೂ ಕಲಿಸುವ ನಿಟ್ಟಿನಲ್ಲಿ ಅವರಿಗಿದ್ದ ವಾತ್ಸಲ್ಯದಿಂದಲೇ ಸಂಸ್ಕೃತ ಪಾಠ ಶಾಲೆಯನ್ನು ತೆರೆದಿದ್ದಾರೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

