ಕಡ್ಡಾಯ ಮತದಾನ ಮಾಡಿ: ಶಿವೇಗೌಡ
ಆನೇಕಲ್ಲು: 18 ವರ್ಷ ತುಂಬಿದ ಎಲ್ಲ ಯುವಕ ಯುವತಿಯರು ಕಡ್ಡಾಯ ಮತದಾನದಲ್ಲಿ ಪಾಲ್ಗೊಂಡು ಸಂವಿಧಾನಾತ್ಮಕವಾಗಿ ದೊರಕಿರುವ ಹಕ್ಕನ್ನು ಚಲಾಯಿಸಬೇಕೆಂದು ಉಪ ಚುನಾವಣಾಧಿಕಾರಿ ಎಚ್.ಎನ್. ಶಿವೇಗೌಡ್ ಮನವಿ ಮಾಡಿದ್ದಾರೆ. ಅವರು ತಾಲೂಕು ಪಂಚಾಯ್ತಿ ಕಚೇರಿಯಿಂದ ಪಟ್ಟಣದ ಪ್ರಮುಖ ರಸ್ತೆಯಲ್ಲಿ ಸಂಚರಿಸಿ ಮತದಾನದ ಮಹತ್ವ ಜಾಗೃತಿ ಜಾಥಾದಲ್ಲಿ ಪಾಲ್ಗೊಂಡು ಮಾತನಾಡಿ ಚುನಾವಣಾ ಆಯೋಗ ನಿರ್ಭೀತ ಹಾಗೂ ಪಾರದರ್ಶಕ ಚುನಾವಣೆ ನಡೆಸಲು ಸಕಲ ಸಿದ್ಧತೆಗಳನ್ನು ಮಾಡಿದೆ. ಸರ್ಕಾರವೇ ಮತದಾನ ಪಟ್ಟಿಯ ಚೀಟಿಯನ್ನು ಮನೆ ಮನೆಗೆ ತಲುಪಿಸುತ್ತದೆ. ಈ ಚೀಟಿಯು ಅಧಿಕೃತ ಪತ್ರವಾಗಿದೆ. ಆಲಸ್ಯ ಮಾಡದೇ, ಯಾರಿಂದರೂ ಏನನ್ನೂ ಅಪೇಕ್ಷಿಸದೇ, ಆಮಿಷಗಳಿಗೆ ಒಳಗಾಗದೇ ನಿಮ್ಮದೇ ಆಯ್ಕೆಯನ್ನು ಮಾಡಿ ಎಂದರು. ಜಿಲ್ಲಾ ಪಂಚಾಯ್ತಿ ಉಪ ಕಾರ್ಯದರ್ಶಿ ಎಂ.ಜಿ. ಶಿವಲಿಂಗಯ್ಯ ಮತದಾನ ಪ್ರತಿಜ್ಞಾ ವಿಧಿ ಬೋಧಿಸಿದರು. ಇಒ ಡಾ. ವೀರಭದ್ರಪ್ಪ ಜಾಥದ ಉದ್ದೇಶ ಹಾಗೂ ಮತದಾನದ ಮಹತ್ವ ಬಗ್ಗೆ ವಿವರಿಸಿದರು. ವಿವಿಧ ಇಲಾಖಾ ಅಧಿಕಾರಿಗಳು ಭಾಗವಹಿಸಿದ್ದರು.
ರೈತರ ಬಗ್ಗೆ ಸಿಎಂ ಹೇಳಿಕೆಗೆ ಖಂಡನೆ
ದೇವನಹಳ್ಳಿ: ಬೆಳಗಾವಿ ಅಧಿವೇಶನ ಸಂದರ್ಭದಲ್ಲಿ ಕಬ್ಬಿಗೆ ಬೆಂಬಲ ಬೆಲೆ ಒತ್ತಾಯಿಸಿ ವಿಠಲ್ ಅರಬಾವಿ ಎಂಬ ರೈತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು ಸತ್ಯ ಸಂಗತಿ. ಆದರೆ ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಇತರ ಸಚಿವರು ಚುನಾವಣಾ ಪ್ರಚಾರ ಸಭೆಗಳಲ್ಲಿ ಬೆಳಗಾವಿಯಲ್ಲಿ ರೈತ ವಿಷ ಕುಡಿದು ಸತ್ತಿಲ್ಲ, ಅತಿಯಾದ ಮದ್ಯಪಾನ ಮಾಡಿದ್ದರಿಂದ ಸತ್ತಿದ್ದಾನೆ ಎಂದು ಹೇಳಿಕೆ ನೀಡುತ್ತಿರುವುದು ಖಂಡನೀಯ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಖಂಡಿಸಿದ್ದಾರೆ. ಮುಖ್ಯಮಂತ್ರಿಗಳ ಮತ್ತು ಸಚಿವರ ಹೇಳಿಕೆ ಬಗ್ಗೆ ರಾಜ್ಯಪಾಲರಿಗೆ ಮನವಿ ಸಲ್ಲಿಸಿ ಸರ್ಕಾರವನ್ನು ವಜಾಗೊಳಿಸಬೇಕೆಂದು ಮನವಿ ಸಲ್ಲಿಸಿ ಮುಂದಿನ ತೀರ್ಮಾನಗಳ ಬಗ್ಗೆ ಏ.10 ರಂದು ಸಭೆ ನಡೆಸಲಾಗುವುದು ಎಂದರು.
ಮಹಿಳಾ ಕಾಂಗ್ರೆಸ್ ಪಾದಯಾತ್ರೆ ಇಂದು
ದೊಡ್ಡಬಳ್ಳಾಪುರ: ಇಲ್ಲಿನ ಮಹಿಳಾ ಕಾಂಗ್ರೆಸ್ ಘಟಕದ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರ
ಪಾದಯಾತ್ರೆ ಏ.5ರ ಶನಿವಾರ ದೊಡ್ಡಬಳ್ಳಾಪುರ ನಗರಾದ್ಯಂತ ನಡೆಯಲಿದೆ ಎಂದು ಮಹಿಳಾ ಘಟಕದ ಅಧ್ಯಕ್ಷೆ ರೇವತಿ ತಿಳಿಸಿದ್ದಾರೆ.
ಕೇಂದ್ರ ಸಚಿವ ವೀರಪ್ಪ ಮೊಯ್ಲಿ ಪುತ್ರಿ ಹಂಸ ಮೊಯ್ಲಿ ಪಾದಯಾತ್ರೆಯ ನೇತೃತ್ವ ವಹಿಸಲಿದ್ದಾರೆ. ಇಲ್ಲಿನ ಶಿವಪುರ ಗೇಟ್ ಆಂಜನೇಯಸ್ವಾಮಿ ದೇವಾಲಯದಿಂದ ಆರಂಭವಾಗುವ ಪಾದಯಾತ್ರೆ ಪ್ರಮುಖ ಬೀದಿಗಳಲ್ಲಿ ನಡೆದು ತಾಲೂಕು ಕಚೇರಿ ವೃತ್ತದಲ್ಲಿ ಕೊನೆಗೊಳ್ಳಲಿದೆ. ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕಮಲಾಕ್ಷಿ, ಶಾಸಕ ಟಿ.ವೆಂಕಟರಮಣಯ್ಯ, ಮಾಜಿ ಶಾಸಕ ಆರ್.ಜಿ.ವೆಂಕಟಾಚಲಯ್ಯ ಮತ್ತಿತರರು ಭಾಗವಹಿಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

