ಬೆಂಗಳೂರು ಗ್ರಾಮಾಂತರ

ಕ್ರಿಕೆಟ್ ಪಂದ್ಯಾವಳಿ ಹಣ ದೇವಾಲಯ ಅಭಿವೃದ್ಧಿಗೆ

Published On :

ದೊಡ್ಡಬಳ್ಳಾಪುರ: ತಾಲೂಕಿನ ಸಕ್ಕರೆಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋನೇನಹಳ್ಳಿ ಗ್ರಾಮದಲ್ಲಿ ಶ್ರೀ ಹುಲುಕುಡಿ ಬಳಗದ ನೇತೃತ್ವದಲ್ಲಿ 2014ನೇ ಸಾಲಿನ ಪಂಚಾಯಿತಿ ವ್ಯಾಪ್ತಿಯ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ನಡೆಯಿತು.
ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳ ಕ್ರಿಕೆಟ್ ತಂಡಗಳು ಪಂದ್ಯಾವಳಿಯಲ್ಲಿ ಭಾಗವಹಿಸಿದ್ದವು. ಈ ಪಂದ್ಯಾವಳಿಯಲ್ಲಿ ಸಕ್ಕರೆಗೊಲ್ಲಹಳ್ಳಿ ಗ್ರಾಮದ ಶ್ರೀವೀರಭದ್ರಸ್ವಾಮಿ ಕ್ರಿಕೆಟ್ ಕ್ಲಬ್ ಪ್ರಥಮ ಬಹುಮಾನದೊಂದಿಗೆ ಟ್ರೋಫಿ ಮತ್ತು ನಗದು 20 ಸಾವಿರ ರುಗಳ ಬಹುಮಾನ ತನ್ನದಾಗಿಸಿಕೊಂಡಿತು. ಆದರೆ ಬಹುಮಾನದ ನಗದು ಹಣವನ್ನು ಹುಲುಕುಡಿ ವೀರಭದ್ರಸ್ವಾಮಿ ದೇವಾಲಯದ ಅಭಿವೃದ್ಧಿಗೆ ನೀಡುವ ಮೂಲಕ ಯುವಕರು ಗಮನ ಸೆಳೆದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.