ಮೊಯ್ಲಿ ಪರ ಹಂಸ ಮತಯಾಚನೆ
ವಿಜಯಪುರ: ಚಿಕ್ಕಬಳ್ಳಾಪುರ ಕಾಂಗ್ರೆಸ್ ಅಭ್ಯರ್ಥಿ ವೀರಪ್ಪಮೊಯ್ಲಿ ಪರ
ಅವರ ಪುತ್ರಿ ಹಂಸ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಕಾಲ್ನಡಿಗೆಯ ಮುಖಾಂತರ ಮತಯಾಚನೆ ಮಾಡಿದರು.
ಈ ವೇಳೆ ಮಾತನಾಡಿದ ಅವರು, ಬಯಲು ಸೀಮೆಗೆ ಕುಡಿವ ನೀರಿನ ಸಮಸ್ಯೆ ನಿವಾರಿಸಲೆಂದು ಎತ್ತಿನಹೊಳೆ ಯೋಜನೆ ಜಾರಿಗೆ ತರುವಲ್ಲಿ
ವೀರಪ್ಪಮೊಯ್ಲಿ ಅವಿರತ ಪ್ರಯತ್ನ ನಡೆಸುತ್ತಿದ್ದಾರೆ. ಇನ್ನು ಕೇವಲ 36ತಿಂಗಳಲ್ಲಿ ನೀರಿನ ಸಮಸ್ಯೆ ನಿವಾರಣೆಯಾಗಲಿದೆ. ಈ ಭಾಗದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ಮೊಯ್ಲಿ ಅವರಿಂದ ನಡೆದಿದ್ದು ಅದುವೇ ಆವರಿಗೆ ಶ್ರೀರಕ್ಷೆ ಎಂದು ತಿಳಿಸಿದರು.
ಮತಯಾಚನೆ ಕಾರ್ಯಕ್ರಮವು ಬೆಳಗ್ಗೆ 9 ಗಂಟೆಯಿಂದ ಪ್ರಾರಂಭಗೊಂಡು ನೂರಾರು ಕಾರ್ಯಕರ್ತರೊಂದಿಗೆ ಕಾಲ್ನಡಿಗೆಯಲ್ಲೇ ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದರು. ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ವಿ.ಮಂಜುನಾಥ್, ದೇವನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗನ್ನಾಥ್, ಮಾಜಿ ಶಾಸಕ ಕೆ.ವೆಂಕಟಸ್ವಾಮಿ, ಕಾಂಗ್ರೆಸ್ ಅಧ್ಯಕ್ಷ ಎಂ.ಸತೀಶ್ಕುಮಾರ್, ಪುರಸಭಾಧ್ಯಕ್ಷೆ ಅನಸೂಯಮ್ಮ, ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ಜ್ಯೋತಿ ಬಸವರಾಜು ಮತ್ತಿತರರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

