ಬೆಂಗಳೂರು ಗ್ರಾಮಾಂತರ

ಸೂಲಿಬೆಲೆಯ ದೊಡ್ಡಕೋಲಿಗದಲ್ಲಿ ಮನೆಗೆ ಬೆಂಕಿ

Published On :

ಸೂಲಿಬೆಲೆ: ಇಲ್ಲಿಗೆ ಸಮೀಪದ ದೊಡ್ಡಕೋಲಿಗ ಗ್ರಾಮದಲ್ಲಿ ಮನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು, ಇಡೀ ಮನೆ ಸುಟ್ಟುಹೋಗಿರುವ ಘಟನೆ ಶನಿವಾರ ನಡೆದಿದೆ.
ಸಕಾಲಕ್ಕೆ ಅಗ್ನಿ ಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ ಕಾರಣ,  ಬೆಂಕಿಯಿಂದಾಗಬಹುದಾದ ಭಾರೀ ಅನಾಹುತ ತಪ್ಪಿದಂತಾಗಿದೆ. ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಗೆ ಒಳಪಡುವ ದೊಡ್ಡಕೋಲಿಗ ಗ್ರಾಮದ ಸೊಣ್ಣಪ್ಪ ಎಂಬುವರಿಗೆ ಸೇರಿದ್ದ ಹೆಂಚಿನ ಮನೆಯಿದ್ದು,  ಶನಿವಾರ ಮನೆಯವರೆಲ್ಲ ಕೆಲಸದ ನಿಮಿತ್ತ ಬೀಗ ಹಾಕಿಕೊಂಡು ಹೊರ ಹೋಗಿದ್ದರು. ಬೆಳಗ್ಗೆ 11 ಗಂಟೆ ಸಮಯದಲ್ಲಿ ಮನೆಯ ಹೆಂಚು ಸಂದಿಗಳಿಂದ ಅಪಾರ ಹೊಗೆ ಬರುತ್ತಿರುವದನ್ನು ಅರಿತ ಅಕ್ಕಪಕ್ಕದವರು ಮನೆಯ ಬಾಗಿಲು ಒಡೆದು ನೋಡಿದಾಗ ಬೆಂಕಿ ಹೊತ್ತಿಕೊಂಡಿರುವುದು ಕಂಡಿದೆ. ಕೂಡಲೇ ತಮ್ಮ ತಮ್ಮ ಮನೆಗಳಿಂದ ನೀರನ್ನು ತಂದು ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ .ಬೆಂಕಿ ನಿಯಂತ್ರಣಕ್ಕೆ ಬಾರದೇ ಹೆಚ್ಚಾಗುತ್ತಿದ್ದಂತೆ ಸ್ಥಳೀಯರು ಅಗ್ನಿ ಶಾಮಕದಳಕ್ಕೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸುವಷ್ಚರಲ್ಲಿ ಮನೆಯಲ್ಲಿದ್ದ ಬೆಲೆ ಬಾಳುವ ವಸ್ತುಗಳು ಸೇರಿದಂತೆ ದವಸ, ಧಾನ್ಯ ಬೆಂಕಿಯಲ್ಲಿ ಸುಟ್ಟು ಕರಕಲಾಗಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.