ಬೆಂಗಳೂರು ಗ್ರಾಮಾಂತರ

ಡಿಕೆ ಬ್ರದರ್ಸ್ ವಿರುದ್ಧ ಜಿಲ್ಲಾ ಬಿಜೆಪಿ ಗರಂ

Published On :

ಕನಕಪುರ: ಕನಕಪುರ ಪಟ್ಟಣದ ಸರ್ವತೋಮುಖ ಅಭಿವೃದ್ಧಿಗೆ ಬಿಜೆಪಿ ಸರ್ಕಾರ ಬಹಳಷ್ಟು ಕೊಡುಗೆ ನೀಡಿದೆ. ಎಲ್ಲವನ್ನು ತಮ್ಮ ಸಾಧನೆ ಎಂದು ಡಿಕೆಶಿ ಸೋದರರು ಬಿಂಬಿಸಿಕೊಳ್ಳುತ್ತಿದ್ದಾರೆ ಎಂದು ರಾಮನಗರ ಜಿಲ್ಲಾ ಬಿಜೆಪಿ ಅಧ್ಯಕ್ಷ ಬಿ.ನಾಗರಾಜು ಟೀಕಿಸಿದ್ದಾರೆ.
ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.   ಕನಕಪುರ ಪಟ್ಟಣದ ರಸ್ತೆ ಅಗಲೀಕರಣಕ್ಕೆ ಅನುದಾನ ಬಿಡುಗಡೆ ಮಾಡಿದ್ದು ಬಿಜೆಪಿ ಸರ್ಕಾರ, ಬಡಜನರಿಗೆ ನೀಡಿದ ಮೂರು ಸಾವಿರ ನಿವೇಶನಗಳಿಗೆ ಹಣ ನೀಡಿದ್ದು ಬಿಜೆಪಿ ಸರ್ಕಾರ, ಪಟ್ಟಣದ ನೂರು ಹಾಸಿಗೆ ಆಸ್ಪತ್ರೆ, ಪಶು ವೈದ್ಯಕೀಯ ಆಸ್ಪತ್ರೆ ಕಟ್ಟಡ ಮೊದಲಾದವುಗಳು ಕನಕಪುರಕ್ಕೆ ಬಿಜೆಪಿ ಸರ್ಕಾರದ ಕೊಡುಗೆಗಳಾಗಿವೆ. ಶಾಸಕರು ಎಲ್ಲವನ್ನೂ ತಮ್ಮ ಸಾಧನೆ ಎಂದೇ ಬಿಂಬಿಸಿಕೊಳ್ಳುತ್ತಿದ್ದಾರೆ ಎಂದು ಬಿ.ನಾಗರಾಜು ಆರೋಪಿಸಿದರು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.