ಚನ್ನರಾಯಪಟ್ಟಣ ಗ್ರಾಪಂ ಅಧ್ಯಕ್ಷರ ಆಯ್ಕೆ
ವಿಜಯಪುರ: ಪಟ್ಟಣ ಸಮೀಪದ ಚನ್ನರಾಯಪಟ್ಟಣ ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಮುನಿಕೃಷ್ಣಪ್ಪ, ಉಪಾಧ್ಯಕ್ಷರಾಗಿ ನಾಗರತ್ನಮ್ಮ ಆಯ್ಕೆಯಾಗಿದ್ದಾರೆ.
ಪಂಚಾಯಿತಿಯಲ್ಲಿ ಒಟ್ಟು 23 ಮಂದಿ ಸದಸ್ಯರಿದ್ದು ಅದರಲ್ಲಿ 9 ಮಂದಿ ಜೆಡಿಎಸ್ ಬೆಂಬಲಿತ ಹಾಗೂ 9 ಮಂದಿ ಕಾಂಗ್ರೆಸ್ ಬೆಂಬಲಿಗರು ಮತ್ತು 5 ಮಂದಿ ಬಿಜೆಪಿ ಸದಸ್ಯರು ಇದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಮುನಿಕೃಷ್ಣಪ್ಪ ಮತ್ತು ತಮ್ಮೇಗೌಡ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಾಗರತ್ನಮ್ಮ ಮತ್ತು ಪದ್ಮಾವತಮ್ಮ ಸ್ಪರ್ಧಿಸಿದ್ದರು. ಇದರಲ್ಲಿ ಕಾಂಗ್ರೆಸ್ ಬೆಂಬಲಿತ ಮುನಿಕೃಷ್ಣಪ್ಪ 17 ಮತಗಳಿಸುವ ಮೂಲಕ ಅಧ್ಯಕ್ಷರಾಗಿ, ಜೆಡಿಎಸ್ ಅಭ್ಯರ್ಥಿ ನಾಗರತ್ನಮ್ಮ 18 ಮತಗಳಿಸುವ ಮೂಲಕ ಉಪಾಧ್ಯಾಕ್ಷರಾಗಿ ಆಯ್ಕೆಯಾದರು. ಚುನಾವಣಾ ಅಧಿಕಾರಿಯಾಗಿ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ವಿನೋದಮ್ಮ ಕಾರ್ಯನಿರ್ವಹಿಸಿದರು. ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಮುನಿಕೃಷ್ಣಪ್ಪ ಮಾತನಾಡಿ ಪಂಚಾಯಿತಿಯ ವ್ಯಾಪ್ತಿಯಲ್ಲಿ ಕುಡಿಯುವ ನೀರು, ಬೀದಿ ದೀಪ ವ್ಯವಸ್ಥೆ ಮತ್ತು ಗ್ರಾಮ ಅಭಿವೃದ್ಧಿಯನ್ನು ಎಲ್ಲಾ ಸದಸ್ಯ ಸಹಕಾರದೊಂದಿಗೆ ಮಾಡುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ವೆಂಕಟಸ್ವಾಮಿ, ವಿಜಯಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮೀನಾರಾಯಣಪ್ಪ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಜ್ಗೋಪಾಲ್ ರೆಡ್ಡಿ, ಗೊಡ್ಲು ಮುದ್ದೇನಹಳ್ಳಿ ಗ್ರಾ.ಪಂ.ಅಧ್ಯಕ್ಷ ಚೇತನ್ಕುಮಾರ್, ದೇವನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗನ್ನಾಥ್, ಹಾರೋಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸುಬ್ಬಣ್ಣ, ಬಮೂಲ್ ನಿರ್ದೇಶಕ ಸೋಮಣ್ಣ, ದಿನ್ನೂರು ವೆಂಕಟೇಶ್ ಮತ್ತಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

