ಚುನಾವಣಾಧಿಕಾರಿಗಳಿಂದ ವರದಿ ಕೋರಿದ ಡಿಸಿ
ರಾಮನಗರ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಚುನಾವಣೆ ಸಂಬಂಧ ಕ್ಷೇತ್ರ ವ್ಯಾಪ್ತಿಯಲ್ಲಿನ ಮತಗಟ್ಟೆಗಳ ಮೂಲಭೂತ ಸೌಕರ್ಯಗಳಾದ ರ್ಯಾಂಪ್, ವಿದ್ಯುತ್ ಸಂಪರ್ಕ, ಶೌಚಾಲಯ, ಕುಡಿಯುವ ನೀರಿನ ಸೌಲಭ್ಯ, ಮತಗಟ್ಟೆಗಳಲ್ಲಿ ಎಲ್ಲ ಕಿಟಕಿ ಬಾಗಿಲುಗಳ ಸುಸ್ಥಿತಿ, ಮತ ಚಲಾಯಿಸಲು ಬಂದ ಮತದಾರರಿಗೆ ಸರದಿಯಲ್ಲಿ ನಿಲ್ಲಲು ನೆರಳಿನ ವ್ಯವಸ್ಥೆ, ಮತಗಟ್ಟೆಗಳಿಗೆ ಸರಿಯಾಗಿ ಮತಗಟ್ಟೆ ಸಂಖ್ಯೆ ಮತ್ತು ಹೆಸರು ನಮೂದಿಸಿರುವ ಬಗ್ಗೆ ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ಡಾ.ಡಿ.ಎಸ್. ವಿಶ್ವನಾಥ್ ಅವರು ಸಹಾಯಕ ಚುನಾವಣಾಧಿಕಾರಿಗಳಿಂದ ವರದಿ ಕೋರಿದ್ದಾರೆ.
ಏ.17 ರಂದು ನಡೆಯುವ ಚುನಾವಣೆಯ ಸಿದ್ಧತೆಗಳ ಬಗ್ಗೆ ಭಾರತ ಚುನಾವಣಾ ಆಯೋಗವು ಸದ್ಯದಲ್ಲೇ ಸಭೆ ಕರೆಯಲಿದ್ದು, ಕ್ಷೇತ್ರ ವ್ಯಾಪ್ತಿಯ ಪ್ರತಿ ವಿಧಾನಸಭಾ ಕ್ಷೇತ್ರಗಳ ಸಹಾಯಕ ಚುನಾವಣಾಧಿಕಾರಿಯಾಗಿ ನೇಮಕಗೊಂಡಿರುವವರು ತಮ್ಮ ವ್ಯಾಪ್ತಿಯ ಸೆಕ್ಟರ್ ಆಫೀಸರ್ಗಳಿಂದ ಮತಗಟ್ಟೆವಾರು ಮತಗಟ್ಟೆಗಳಲ್ಲಿನ ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಿ ದಣಢೀಕಣತ ವರದಿಯನ್ನು ಏ.8 ರೊಳಗೆ ಸಲ್ಲಿಸಲು ಸೂಚಿಸಿದ್ದಾರೆ.
ವರದಿಯನ್ನು ಮತಗಟ್ಟೆಗಳಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿಗಳು ಹಾಗೂ ಮತದಾರರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಚುನಾವಣಾ ಆಯೋಗವು ಅಪೇಕ್ಷಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

