ಬೆಂಗಳೂರು ಗ್ರಾಮಾಂತರ

ಜಿಲ್ಲೆಗೆ ಕಾಂಗ್ರೆಸ್ ಕೊಡುಗೆ ಶೂನ್ಯ: ಶಾಸಕ ಬಾಲಕೃಷ್ಣ

Published On :

ಮಾಗಡಿ: ಜಿಲ್ಲೆಗೆ ಕಾಂಗ್ರೆಸ್ ಕೊಡುಗೆ ಶೂನ್ಯ ಎಂದು ಶಾಸಕ ಎಚ್.ಸಿ. ಬಾಲಕೃಷ್ಣ ಕಾಂಗ್ರೆಸ್ ದುರಾಡಳಿತದ ವಿರುದ್ಧ ವಾಗ್ದಾಳಿ ನಡೆಸಿದರು.
ಅವರು ಇಲ್ಲಿನ ಪುರಾಣ ಪ್ರಸಿದ್ಧ ಕಲ್ಲೂರು ಆಂಜನೇಯಸ್ವಾಮಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡುತ್ತಾ ಈ ಬಾರಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ನೂರು ಸಂಖ್ಯೆ ದಾಟುವುದಿಲ್ಲ, ಬಿಜೆಪಿ ಅಧಿಕಾರ ಹಿಡಿಯಲು ಸಾಧ್ಯವಿಲ್ಲ. ಇಂಥಹ ಪರಿಸ್ಥಿತಿಯಲ್ಲಿ ತೃತೀಯ ರಂಗಕ್ಕೆ ಹೆಚ್ಚಿನ ಅವಕಾಶವಿದೆ. ಕಾರ್ಯಕರ್ತರು ಸಂಘಟಿತರಾಗಬೇಕು ಎಂದರು.
 ಏ.14 ರಂದು ಎಚ್.ಡಿ. ಕುಮಾರಸ್ವಾಮಿ ಸೇರಿದಂತೆ ಅನೇಕ ಜೆಡಿಎಸ್  ನಾಯಕರು ಮಾಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ರೋಡ್ ಶೋ ಮೂಲಕ ಮತಯಾಚಿಸಲಿದ್ದಾರೆ. ಜೆಡಿಎಸ್ ಮುಖಂಡರು, ಕಾರ್ಯಕರ್ತರು ಒಗ್ಗಟ್ಟಾಗಿ ಜೆಡಿಎಸ್ ಅಭ್ಯರ್ಥಿ ಗೆಲವಿಗೆ ಹಗಲಿರುಳು ಶ್ರಮಿಸೋಣ ಎಂದು ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಕೆ.ಮುದ್ದುರಾಜ ಯಾದವ್ ಕಾರ್ಯಕರ್ತರಿಗೆ ಕರೆ ನೀಡಿದರು. ಬೆಂಗಳೂರು ಹಾಲು ಒಕ್ಕೂಟದ ನಿರ್ದೇಶಕ ನರಸಿಂಹಮೂರ್ತಿ ಮಾತನಾಡಿ ಸುಸಂಸ್ಕೃತ ಕುಟುಂಬದಿಂದ ಬಂದಿರುವ ಜೆಡಿಎಸ್ ಅಭ್ಯರ್ಥಿ ಪ್ರಭಾಕರ್ ರೆಡ್ಡಿ ಅವರನ್ನು ಆಯ್ಕೆ ಮಾಡುವಂತೆ ಕರೆ ನೀಡಿದರು. ಬಗಿನಗೆರೆ ರಾಮಣ್ಣ, ವಿಜಯಕುಮಾರ್, ಬಾಚೇನಹಟ್ಟಿ ಗ್ರಾ.ಪಂ. ಅಧ್ಯಕ್ಷ ಪ್ರಕಾಶ್, ಸದಸ್ಯ ರಂಗನಾಥ್, ಗೋವಿಂದಪ್ಪ, ವಿಎಸ್‌ಎಸ್‌ಎನ್  ಅಧ್ಯಕ್ಷ ಬಲರಾಮಯ್ಯ,ಚಿಕ್ಕರಂಗಣ್ಣ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.