ದೇವೇಗೌಡರ ವಿರುದ್ಧ ಕರಪತ್ರ ಹಂಚಿದ್ದಕ್ಕೆ ಆಕ್ರೋಶ
ನೆಲಮಂಗಲ: ಜೆಡಿಎಸ್ ವರಿಷ್ಠ ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಅಪಮಾನವೆಸಗುವ ದುರುದ್ದೇಶದಿಂದ ಕರಪತ್ರ ಹಂಚಿರುವ ಯಂಟಗಾನಹಳ್ಳಿ ಗ್ರಾಮ ಪಂಚಾಯ್ತಿ ಸದಸ್ಯ ಬೈರೇಗೌಡ ಕೂಡಲೇ ಕ್ಷಮೆಯಾಚಿಸಬೇಕು ಎಂದು ಜೆಡಿಎಸ್ ಮುಖಂಡ ವಕೀಲ ಕೇಶವಮೂರ್ತಿ ಕಿಡಿಕಾರಿದ್ದಾರೆ.
ಕರಪತ್ರದಲ್ಲಿ ಜಾಗೃತ ಮತದಾರರ ವೇದಿಕೆ ಎಂದು ಬಳಸಿಕೊಂಡಿದ್ದು, ಈ ವೇದಿಕೆ ನೋಂದಣಿಯಾಗಿಲ್ಲ. ಬಿಜೆಪಿ ಪಕ್ಷವನ್ನು ಬೆಂಬಲಿಸಿ ಎನ್ನುವ ಸಲುವಾಗಿ ಕುಮಾರಸ್ವಾಮಿ ವಿರುದ್ಧಇಲ್ಲಸಲ್ಲದ ಆರೋಪಗಳನ್ನು ಕರಪತ್ರದಲ್ಲಿ ಮುದ್ರಿಸಿ ಪತ್ರಿಕೆಗಳ ವಿತರಕರಿಂದ ಮನೆ ಮನೆಗೆ ತಲುಪಿಸಿರುವ ಅವರು ಕ್ಷಮೆಯಾಚಿಸಿದಿದ್ದರೆ ಉಗ್ರ ಹೋರಾಟ ಪ್ರತಿಭಟನೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಮ್ಮಿಕೊಳ್ಳಲಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಶಾಸಕ ಡಾ.ಕೆ.ಶ್ರೀನಿವಾಸಮೂರ್ತಿ, ತಾಲೂಕು ಜೆಡಿಎಸ್ ಅಧ್ಯಕ್ಷ ರಾಮಕೃಷ್ಣಪ್ಪ, ಕಾರ್ಯದರ್ಶಿ ಹೇಮಂತ್ಕುಮಾರ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

