ಬೆಂಗಳೂರು ಗ್ರಾಮಾಂತರ

ಮೋದಿ ನಾಯಕತ್ವ ಮನವರಿಕೆ ಮಾಡಿ

Published On :

ಕ.ಪ್ರ.ವಾರ್ತೆ    ರಾಮನಗರ    ಏ.7
ಯುಪಿಎ ಸರ್ಕಾರದ ವೈಫಲ್ಯ, ಭ್ರಷ್ಟಾಚಾರ, ಬೆಲೆ ಏರಿಕೆ, ವಾಜಪೇಯಿ ಸರ್ಕಾರದ ಸಾಧನೆಗಳ ಜತೆಗೆ ದೇಶಕ್ಕೆ ನರೇಂದ್ರ ಮೋದಿ ನಾಯಕತ್ವದ ಅನಿವಾರ್ಯತೆಯನ್ನು ಮತದಾರರಿಗೆ ಮನವರಿಕೆ ಮಾಡಿಕೊಡುವಂತೆ ಚಿತ್ರನಟಿ ತಾರಾ ಕಾರ್ಯಕರ್ತರಿಗೆ ಕರೆ ನೀಡಿದರು.
ನಗರದಲ್ಲಿರುವ ರಾಮನಗರ ಪ್ಯಾಲೇಸ್ ಸಭಾಂಗಣದಲ್ಲಿ ಸೋಮವಾರ ಬಿಜೆಪಿ ಮಹಿಳಾ ಮೋರ್ಚಾ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಪಕ್ಷದ ಎಲ್ಲ ಕಾರ್ಯಕರ್ತರು ಮನೆ ಮನೆಗೆ ತೆರಳಿ ಪಕ್ಷದ ಅಭ್ಯರ್ಥಿ ಮುನಿರಾಜುಗೌಡ ಪರ ಮತಯಾಚಿಸಬೇಕು ಎಂದು ತಿಳಿಸಿದರು.  ಭ್ರಷ್ಟಾಚಾರ, ಅಗತ್ಯ ವಸ್ತುಗಳ ಬೆಲೆ ಏರಿಕೆಯೇ ಕೇಂದ್ರದ ಯುಪಿಎ ಸರ್ಕಾರದ ಸಾಧನೆ.
 ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ದೇಶಾದ್ಯಂತ ಬಡ ಮತ್ತು ಮಧ್ಯಮ ವರ್ಗದ ಜನರು ಬದುಕಲಾಗದ ಸ್ಥಿತಿ ಎದುರಾಗಿದೆ. ಬಿಜೆಪಿಗೆ ಅಧಿಕಾರದಿಂದ ಮಾತ್ರವೇ ಬೆಲೆ ನಿಯಂತ್ರಣ ಸಾಧ್ಯ ಎಂದರು.
ವಚನಭ್ರಷ್ಟ ಸರ್ಕಾರ: ಮಹಿಳೆಯರಿಗೆ ಎಲ್ಲಾ ರಂಗದಲ್ಲೂ ಶೇ. 33ರಷ್ಟು ಮೀಸಲಾತಿ ನೀಡುವುದಾಗಿ ಘೋಷಿಸಿದ್ದ ಯುಪಿಎ ಸರ್ಕಾರವು ಆ ವಿಷಯದಲ್ಲಿ ಕಡೆವರೆಗೂ ಕಾಳಜಿ ತೋರಲೇ ಇಲ್ಲ. ಮಹಿಳೆಯರ ಪಾಲಿಗೆ ಯುಪಿಎ ವಚನಭ್ರಷ್ಟವಾಗಿದೆ ಎಂದು ತಾರಾ ಆರೋಪಿಸಿದರು.   ಬಿಜೆಪಿ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಶೇಕಡ 50ರಷ್ಟು ಮೀಸಲಾತಿ ಸೌಲಭ್ಯ ದೊರೆಯಲಿದೆ. ಹೀಗಾಗಿ ಮಹಿಳೆಯರು ಬಿಜೆಪಿಯನ್ನು ಬೆಂಬಲಿಸಬೇಕು. ಮತ ಮಾರಾಟಕ್ಕೆ ಯಾವ ಕಾರಣಕ್ಕೂ ಅವಕಾಶ ನೀಡಬಾರದು ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಬಿ.ನಾಗರಾಜು, ಅಭ್ಯರ್ಥಿ ಪಿ.ಮುನಿರಾಜುಗೌಡ ಅವರ ಪತ್ನಿ ಭವ್ಯ, ಬಿಜೆಪಿ ಮಹಿಳಾ ಮೋರ್ಚಾ ಪದಾಧಿಕಾರಿಗಳಾದ ಮಂಜುಳಾ, ಭಾರತಿ, ಚಂದ್ರಪ್ರಭಾ, ಪಕ್ಷದ ಮುಖಂಡರಾದ  ಜಿ.ವಿ.ಪದ್ಮನಾಭ, ಮಂಜು, ರುದ್ರದೇವರು, ರವಿಕುಮಾರಗೌಡ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.