ಬೆಂಗಳೂರು ಗ್ರಾಮಾಂತರ

ಅಭಿವೃದ್ಧಿಗೆ ದಳ ಬೆಂಬಲಿಸಿ

Published On :

ಪಾವಗಡ: ಕಾಂಗ್ರೆಸ್ ಹಾಗೂ ಬಿಜೆಪಿ ವಿರುದ್ಧ ಹಾರಿಹಾಯ್ದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಕುಡಿಯುವ ನೀರಿನ ಯೋಜನೆ ಅನುಷ್ಠಾನ ಸೇರಿದಂತೆ ರಾಜ್ಯದ ಅಭಿವೃದ್ಧಿಗೆ ಜೆಡಿಎಸ್ ಬೆಂಬಲಿಸಿ ಎಂದು ಮನವಿ ಮಾಡಿದರು.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೊಳಿಹಟ್ಟಿ ಶೇಖರ್ ಪರ ಪ್ರಚಾರಕ್ಕೆ ಆಗಮಿಸಿದ್ದ ದೇವೇಗೌಡರು ರೋಡ್ ಶೋ ನಡೆಸಿದ ನಂತರ ಪಕ್ಷದ ವತಿಯಿಂದ ಪಟ್ಟಣದ ಎಸ್‌ಎಸ್‌ಕೆ ಬಯಲು ರಂಗಮಂದಿರದಲ್ಲಿ ಏರ್ಪಡಿಸಿದ್ದ ಬೃಹತ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ ಚಿತ್ರದುರ್ಗ ಲೋಕಸಭಾ ಜೆಡಿಎಸ್ ಅಭ್ಯರ್ಥಿ ಗೊಳಿಹಟ್ಟಿ ಶೇಖರ್ ಅವರನ್ನು ಚುನಾವಣೆಯಲ್ಲಿ ಅತ್ಯಧಿಕ ಮತಗಳಿಂದ ಗೆಲ್ಲಿಸಿ ಎಂದು ಮನವಿ ಮಾಡಿದರು.
ಸೋನಿಯಾ ಗಾಂಧಿ ನೇತೃತ್ವದ ಕಾಂಗ್ರೆಸ್ ಮತ್ತು ನರೇಂದ್ರಮೋದಿ ನೇತೃತ್ವದ ಬಿಜೆಪಿ ಕಾರ್ಯ ವೈಖರಿ  ತರಾಟೆಗೆ ತೆಗೆದುಕೊಂಡ ಗೌಡರು, ಜನಪರ ಯೋಜನೆಗಳನ್ನು ರೂಪಿಸುವಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ವಿಫಲ ವಾಗಿವೆ. ಸ್ವಾರ್ಥ ಕಾಜಕಾರಣದಲ್ಲಿ ನಿರತವಾಗಿ ಇತರೆ ಸಮುದಾಯಗಳನ್ನು ಕಡೆಗಾಣಿಸಿವೆ. ತಾವು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಅಲ್ಪಸಂಖ್ಯಾತರ ಏಳಿಗೆ, ಮಹಿಳಾ ಮೀಸಲಾತಿ ಸೇರಿದಂತೆ ಎಲ್ಲಾ ಸಮುದಾಯಗಳ ಅಭಿವೃದ್ಧಿಗೆ ಆದ್ಯತೆ ಕಲ್ಪಿಸಿದ್ದಾಗಿ ತಿಳಿಸಿದರು.
ಸಿದ್ದು ವಿರುದ್ಧ ಕಿಡಿ: ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿ ಕಾರಿದ ಗೌಡರು, ಸಿದ್ಧರಾಮಯ್ಯ ಮೊದಲು ಎಲ್ಲಿದ್ದರು. ಎಲ್ಲಿಂದ ಬಂದರು ಎಂದು ಪ್ರಶ್ನಿಸಿದರು.
 ಎಚ್.ಡಿ.ಕುಮಾರಸ್ವಾಮಿ  ಏಕಾಂಗಿಯಾಗಿ ಹೋರಾಟ ನಡೆಸಿದ್ದಾರೆ. ಈಗ ರಾಜಕೀಯ ಚಿತ್ರಣ ಬದಲಾಗಿದ್ದು ರಾಜ್ಯದ ಜನತೆಯ ಒಲವು ಜೆಡಿಎಸ್ ಪರ ಇದೆ ಎಂದರು. ಕಾಂಗ್ರೆಸ್ ಹಾಗೂ ಬಿಜೆಪಿ ಪರ ಯಾವುದೇ ಅಲೆ ಇಲ್ಲ. ತೃತೀಯ ರಂಗದ ಪರ ಜನಭಿಪ್ರಾಯವಿದೆ. ಮೋದಿ ಹಾಗೂ ರಾಹುಲ್ ಪ್ರಧಾನಿಗೆ ಅರ್ಹರಲ್ಲ ಎಂದು ಹೇಳಿದರು.
ಮೋದಿ ಬೆಂಬಲಿಸೊಲ್ಲ: ದೇವೇಗೌಡರ ಬೆಂಬಲವಿಲ್ಲದೇ ದೇಶದಲ್ಲಿ ಯಾರು ಪ್ರಧಾನಿಯಾಗಲು ಸಾಧ್ಯವಿಲ್ಲ,  ದೇಶದ ಹಿತದೃಷ್ಟಿಯಂದ ಮೋದಿಯವರನ್ನು ಬೆಂಬಲಿಸುವ ಪ್ರಶ್ನೆಯೇ ಇಲ್ಲವೆಂದರು.
ಚುನಾವಣೆಯಲ್ಲಿ ಅಭ್ಯರ್ಥಿ ಗೂಳಿಹಟ್ಟಿ ಶೇಖರ್ ಅವರನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸಿ ಎಂದು ಮನವಿ ಮಾಡಿದರು.ಪಕ್ಷದ ರಾಜ್ಯ ಉಪಾಧ್ಯಕ್ಷ ತಿಮ್ಮಾರೆಡ್ಡಿ, ಶಾಸಕ ಕೆ.ಎಂ. ತಿಮ್ಮರಾಯಪ್ಪ ಮುಖಂಡ ಯಶೋಧರ,ಬಲರಾಮರೆಡ್ಡಿ, ಗೂಳಿಹಟ್ಟಿ ಶೇಖರ್, ಪ್ರಧಾನ ಕಾರ್ಯದರ್ಶಿ ಗೋವಿಂದಬಾಬು ಇತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.