ಬೆಂಗಳೂರು ಗ್ರಾಮಾಂತರ

ದೊಣ್ಣೆಯಿಂದ ಹೊಡೆದು ಪತ್ನಿ ಕೊಂದ ಪತಿ

Published On :
ಸೂಲಿಬೆಲೆ: ಹೊಸಕೋಟೆ ತಾಲೂಕಿನ ಸಿದ್ದನಹಳ್ಳಿಯಲ್ಲಿ ಮಂಗಳವಾರ ರಾತ್ರಿ ಪತಿ-ಪತ್ನಿ ನಡುವೆ ನಡೆದ ಜಗಳ ವಿಕೋಪಕ್ಕೆ ಹೋಗಿ ಪತಿ ತನ್ನ ಪತ್ನಿಯನ್ನು ದೊಣ್ಣಿಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ನಡೆದಿದೆ.
ಕೊಲೆಯಾದಾಕೆ ನಹೀಂ ತಾಜ್ (55) ಎಂದು ಪೊಲೀಸರು ತಿಳಿಸಿದ್ದಾರೆ.
ನಂದಗುಡಿ ಪೊಲೀಸ್ ಠಾಣಿ ವ್ಯಾಪ್ತಿಗೆ ಒಳಪಡುವ ಸಿದ್ದನಹಳ್ಳಿ ಗ್ರಾಮದ ನಿವಾಸಿಯಾಗಿರುವ ಅನಾಮುಲ್ಲಾ (60) ತನ್ನ ಪತ್ನಿಯೊಂದಿಗೆ ಆಗ್ಗಾಗೆ ಸಣ್ಣಪುಟ್ಟ ವಿಚಾರಗಳಿಗೆಲ್ಲ ಜಗಳ ಮಾಡುತ್ತಿದ್ದ.
ಇದು ಮಾಮೂಲಾಗಿದ್ದ ಕಾರಣ ಗ್ರಾಮದಲ್ಲಿ ಹತ್ತಾರು ಬಾರಿ ಬುದ್ಧಿವಾದ ಹೇಳಿದ್ದರೂ ಪ್ರಯೋಜನವಾಗಿರಲಿಲ್ಲ ಎನ್ನಲಾಗಿದೆ. ಮಂಗಳವಾರ ರಾತ್ರಿ ಮತ್ತೇ ಪತಿ-ಪತ್ನಿ ನಡುವೆ ಜಗಳವಾಗಿದ್ದು,ಇದು ವಿಕೋಪಕ್ಕೆ ಹೋಗಿ ಅನಾಮುಲ್ಲಾ ಮನೆಯಲ್ಲಿ ದೊಣ್ಣೆಯಿಂದ ಹೊಡೆದಿದ್ದಾರೆ. ಹೊಡೆದ ರಸಭಕ್ಕೆ ಗಂಭೀರವಾಗಿ ಗಾಯಗೊಂಡ ನಹೀಂ ತಾಜ್  ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಗಲಾಟೆ ವಿಷಯ ಕೇಳಿ ಅಕ್ಕಪಕ್ಕದವರು ಅನಾಮುಲ್ಲಾನನ್ನು ಹಿಡಿದು ಮಸೀದಿಯಲ್ಲಿ ಕೂಡಿ ಹಾಕಿ ನಂದಗುಡಿ ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಮಸೀದಿಯಲ್ಲಿ ಕೂಡಿಟ್ಟ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.  ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.