ಬೆಂಗಳೂರು ಗ್ರಾಮಾಂತರ

ಮತದಾನ ಮಾಡಲು ಬೇಕಾದ ದಾಖಲೆಗಳ ವಿವರ

Published On :

ರಾಮನಗರ: ಏ.17ರಂದು ನಡೆಯುವ ಬೆಂಗಳೂರು ಗ್ರಾಮಾಂತರ ಲೋಕಸಭಾ ಚುನಾವಣೆಗೆ ಮತದಾರರು ಮತದಾನ ಮಾಡಲು ನೀಡಲಾಗಿರುವ ಮತದಾರರ ಗುರುತಿನ ಚೀಟಿಯನ್ನು (ಎಪಿಕ್) ತೋರಿಸಿ ಮತದಾನ ಮಾಡುವುದು. ಗುರುತಿನ ಚೀಟಿ ಇಲ್ಲದಿದ್ದಲ್ಲಿ ಭಾರತ ಚುನಾವಣಾ ಆಯೋಗವು ಸೂಚಿಸಿರುವ ಇನ್ನಿತರೆ ಭಾವಚಿತ್ರವಿರುವ ಗುರುತಿನ ಚೀಟಿಯನ್ನು ಹಾಜರುಪಡಿಸಿ ಮತದಾನ ಮಾಡಬಹುದು.
ಪಾಸ್‌ಪೋರ್ಟ್, ವಾಹನ ಚಾಲನಾ ಪರವಾನಗಿ, ಕೇಂದ್ರ ಅಥವಾ ರಾಜ್ಯ ಸರ್ಕಾರಿ ಇಲಾಖೆಗಳು, ಸಾರ್ವಜನಿಕ ಉದ್ದಿಮೆಗಳ ನೌಕರರಿಗೆ ನೀಡಿರುವ ಭಾವಚಿತ್ರವಿರುವ ಗುರುತಿನ ಚೀಟಿಗಳು, ಭಾವಚಿತ್ರವಿರುವ ಬ್ಯಾಂಕ್, ಅಂಚೆ ಕಚೇರಿ ಪಾಸ್ ಪುಸ್ತಕ, ಪಾನ್‌ಕಾರ್ಡ್, ಆಧಾರ್ ಕಾರ್ಡ್, ಎನ್‌ಪಿಆರ್ (ನ್ಯಾಷನಲ್ ಪಾಪ್ಯುಲೇಷನ್ ರಿಜಿಸ್ಟರ್) ಸ್ಮಾರ್ಟ್‌ಕಾರ್ಡ್, ನರೇಗಾ ಉದ್ಯೋಗ ಚೀಟಿ, ಕೇಂದ್ರ ಸರ್ಕಾರದ ಕಾರ್ಮಿಕ ಸಚಿವಾಲಯವು ನೀಡಿರುವ ಆರೋಗ್ಯ ವಿಮಾ  ಸ್ಮಾರ್ಟ್‌ಕಾರ್ಡ್, ಭಾವಚಿತ್ರವಿರುವ ಪಿಂಚಣಿ ದಾಖಲಾತಿ, ಚುನಾವಣಾ ಆಯೋಗದಿಂದ ವಿತರಿಸಲಾಗುವ ಭಾವಚಿತ್ರವಿರುವ ಮತದಾರರ ಚೀಟಿ  ಹಾಜರುಪಡಿಸಿ ಮತದಾನ ಮಾಡಬಹುದು.
ಈ ಬಾರಿ ನೀಡಲಿರುವ ಮತದಾರರ ಚೀಟಿಗಳು ಸೇರಿದಂತೆ ಅವರು ತಮ್ಮ ಗುರುತನ್ನು ಸಾಬೀತು ಪಡಿಸಲು ಮತದಾರರು ಮುಖ್ಯಸ್ಥರ ಹೆಸರಿನಲ್ಲಿ ನೀಡಲಾಗಿರುವ ಮತದಾರರ ಗುರುತಿನ ಚೀಟಿ ಅಥವಾ ಭಾವಚಿತ್ರ ಹೊಂದಿರುವ ಮೇಲ್ಕಂಡ ದಾಖಲೆಗಳ ಪೈಕಿ ಯಾವುದಾದರೊಂದು ದಾಖಲೆಯನ್ನು ಆ ಕುಟುಂಬದ ಇನ್ನಿತರಸದಸ್ಯರ ಗುರುತಿಗಾಗಿ ಬಳಸಬಹುದಾಗಿದೆ.
ಮತದಾರರ ಗುರುತಿನ ಚೀಟಿಗಳಲ್ಲಿ ಸಣ್ಣ ಪುಟ್ಟ ತಪ್ಪುಗಳಿದ್ದರೂ ಮತದಾರರ ಭಾವಚಿತ್ರ ತಾಳೆಯಾದಲ್ಲಿ ಮತದಾನ ಮಾಡಲು ಅವಕಾಶ ನೀಡುವಂತೆ ಮತಗಟ್ಟೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಕ್ಷೇತ್ರದ ಚುನಾವಣಾಧಿಕಾರಿ ಡಾ.ಡಿ.ಎಸ್. ವಿಶ್ವನಾಥ್ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.