ಬೆಂಗಳೂರು ಗ್ರಾಮಾಂತರ

ಪ್ರಭಾವಿ ಜೆಡಿಎಸ್ ಮುಖಂಡ ಗಿರೀಗೌಡ ಕಾಂಗ್ರೆಸ್ ಸೇರ್ಪಡೆ

Published On :

ರಾಮನಗರ: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕ್ಷೇತ್ರಾಂತರ ಬೆನ್ನಲ್ಲೇ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರು ಅನ್ಯಪಕ್ಷಗಳಿಗೆ ಗುಳೆ ಹೊರಟಿದ್ದಾರೆ. ಇದೀಗ ಪ್ರಭಾವಿ ಜೆಡಿಎಸ್ ಮುಖಂಡ ಗಿರೀಗೌಡ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ.  
ಬಿಜೆಪಿ ಮೂಲಕ ರಾಜಕಾರಣ ಪ್ರಾರಂಭಿಸಿದ್ದ ಗಿರೀಗೌಡ 1994ರ ರಾಮನಗರ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಎಚ್.ಡಿ.ದೇವೇಗೌಡರ ವಿರುದ್ಧ ಸೆಣೆಸಿದ್ದರು. ನಂತರ 1999ರಲ್ಲೂ ಬಿಜೆಪಿ ಹುರಿಯಾಳು ಆಗಿ ಎರಡನೇ ಸ್ಥಾನ ಪಡೆದಿದ್ದರು.
ನಂತರ ಜೆಡಿಎಸ್ ಸೇರಿದ್ದರಾದರೂ ಕೆಲವೇ ಕಾಲದಲ್ಲಿ ಬಿಜೆಪಿಗೆ ಮರಳಿದ್ದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ತೊರೆದು, ಜೆಡಿಎಸ್ ಸೇರ್ಪಡೆಗೊಂಡು ಕುಮಾರಸ್ವಾಮಿ ಪರ ಕೆಲಸ ಮಾಡಿದ್ದರು.
ಇದೀಗ ಜೆಡಿಎಸ್ ಮುಖಂಡರಿಂದ ನಿರ್ಲಕ್ಷ್ಯಕ್ಕೆ ಒಳಗಾಗಿದ್ದ ಗಿರೀಗೌಡ ಅವರನ್ನು ತಮ್ಮತ್ತ ಸೆಳೆಯುವಲ್ಲಿ ಕಾಂಗ್ರೆಸ್ ಮುಖಂಡರು ಯಶಸ್ವಿಯಾಗಿದ್ದಾರೆ. ಸಚಿವ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಅವರು ಬುಧವಾರ ರಾತ್ರಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಸ್ವೇಚ್ಛಾಚಾರ ಕಾರಣ: ಕಳೆದ ವಿಧಾನಸಭೆ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಸಿದ ಹೋದ ಕುಮಾರಸ್ವಾಮಿ ಕ್ಷೇತ್ರಕ್ಕೆ ಕಾಲಿಡದೆಯೂ ಗೆದ್ದರು. ಎಂತಹ ಸಂದರ್ಭ ಬಂದರೂ ರಾಮನಗರ ಬಿಟ್ಟು ಹೋಗುವುದಿಲ್ಲ ಎಂದು ಆಣೆ ಮಾಡಿದ್ದರು. ಇದೀಗ ಕ್ಷೇತ್ರಾಂತರ ಮಾಡಿ, ಪಕ್ಷ ಮತ್ತು ಕಾರ್ಯಕರ್ತರನ್ನು ನಡುನೀರಿನಲ್ಲಿ ಕೈಬಿಟ್ಟಿದ್ದಾರೆ ಎಂದು ಗಿರೀಗೌಡ ಆರೋಪಿಸಿದ್ದಾರೆ.   ಸ್ವೇಚ್ಛಾರಕ್ಕೂ ಒಂದು ಮಿತಿ ಇದೆ. ಇಲ್ಲಿ ಬಿಟ್ಟು ಅಲ್ಲಿಗೆ, ಅಲ್ಲಿ ಬಿಟ್ಟು ಇಲ್ಲಿಗೆ ಬರುವ ಕುಮಾರಸ್ವಾಮಿ ಅವರ ನಿಲುವು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಲ್ಲಿ ಬೇಸರ ಮೂಡಿಸಿದೆ. ಕುಮಾರಸ್ವಾಮಿ ಅವರ ಈ ವರ್ತನೆಯೇ ತಮ್ಮ ಪಕ್ಷಾಂತರಕ್ಕೆ ಕಾರಣ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.