ಬೆಂಗಳೂರು ಗ್ರಾಮಾಂತರ

ಬಿಜೆಪಿಯಿಂದ ಸಬಲೀಕರಣ: ನಟಿ ರಕ್ಷಿತಾ

Published On :

ಆನೇಕಲ್ಲು: ಮಹಿಳೆಯರು ಎಲ್ಲ ರಂಗಗಳಲ್ಲಿಯೂ ಸಮಾನತೆ ಸಾಧಿಸಿದ್ದು ರಾಜಕೀಯ ರಂಗದಲ್ಲೂ ಒಂದು ಹೆಜ್ಜೆ ಮುಂದಿದ್ದಾರೆ. ಸಮಾನ ಅವಶಕಾಶ, ಸ್ವಾಭಿಮಾನ ಹಾಗೂ ಸ್ವಾವಲಂಬನೆಗಾಗಿ ಭಾರತೀಯ ಜನತಾ ಪಕ್ಷವನ್ನು ಗೆಲ್ಲಿಸಬೇಕೆಂದು ನಟಿ ರಕ್ಷಿತಾ ಕರೆ ನೀಡಿದ್ದಾರೆ.
ಅವರು ಆನೇಕಲ್ಲಿನ ಬಿಜೆಪಿ ಘಟಕ ಏರ್ಪಡಿಸಿದ್ದ ಮಹಿಳಾ ಸಮಾವೇಶದಲ್ಲಿ ಗ್ರಾಮಾಂತರ ಲೋಕಸಭಾ ಅಭ್ಯರ್ಥಿ ತುಳಸಿ ಮುನಿರಾಜು ಗೌಡ ಪರವಾಗಿ ಮತಯಾಚನೆ ಮಾಡಿ ಮಾತನಾಡಿ ಕಾಂಗ್ರೆಸ್ 6 ದಶಕಗಳ ಅವಧಿಯಲ್ಲಿ ಅವಶ್ಯ ವಸ್ತುಗಳ ಬೆಲೆ ನಿಯಂತ್ರಣ, ಮಹಿಳೆಯರ ಮೇಲಿನ ದೌರ್ಜನ್ಯ ನಿಯಂತ್ರಣ ಮಾಡುವಲ್ಲಿ ವಿಫಲವಾಗಿದೆ. ಭಾರತೀಯ ಜನತಾ ಪಕ್ಷದ ಅಭ್ಯ ರ್ಥಿಗಳಿಗೆ ಕೇವಲ 60 ತಿಂಗಳು ಅವಕಾಶ ನೀಡಿದಲ್ಲಿ ಎಲ್ಲ ಸಮಸ್ಯೆಗಳಿಗೆ ಪರಿಹಾರ ಕಾಣಲು ಸಾಧ್ಯವಾಗುತ್ತದೆ. ಮಹಿಳೆಯರಿಗೆ ಉತ್ತಮ ಅವಕಾಶವನ್ನು ಮೋದಿ
ನೇತೃತ್ವದ ಸರ್ಕಾರದಿಂದ ಮ್ರಾ ನಿರೀಕ್ಷಿಸಲು ಸಾಧ್ಯ ಎಂದರು. ಅಭ್ಯರ್ಥಿ ಮುನಿರಾಜು ಪತ್ನಿ ಭವ್ಯಾ ಗೌಡ ಮಾತನಾಡಿ ಯುಪಿಎ ನೇತೃತ್ವದ ಕೇಂದ್ರ ಸರ್ಕಾರ ಗಡಿ ರಕ್ಷಣೆ ಹಾಗೂ ಭಯೋತ್ಪಾದನೆ ತಡೆಯುವಲ್ಲಿ ವಿಫಲವಾಗಿದೆ. ದೇಶದಲ್ಲಿ ಆತಂಕವಾದವನ್ನು ಮಟ್ಟ ಹಾಕಲು, ಏಕ ರೂಪ ನಾಗರಿಕ ಸಂಹಿತೆ ಜಾರಿಗೆ ತಂದು ಸಮಾನತೆಯ ಮೂಲಕ ರಾಷ್ಟ್ರೀಯ ಭಾವೈಕ್ಯತೆ ಮತ್ತು ಸಹೋದರತೆ ಮೂಡಿಸಲು ಬಿಜೆಪಿ ಸರ್ವ ಶಕ್ತವಾಗಿದ್ದು ಎಲ್ಲ ಸಮುದಾಯದವರೂ ಯುವ ಅಭ್ಯರ್ಥಿ ಮುನಿರಾಜು ಗೌಡಗೆ ಮತ ನೀಡಬೇಕೆಂದು ಕೋರಿದರು.
ವೇದಿಕೆಯಲ್ಲಿ ಬೆಂಗಳೂರು ದಕ್ಷಿಣ ಮಹಿಳಾ ಮುಖಂಡರಾದ ಭಾರತಿ ವೆಂಕಟೇಶಗೌಡ, ತೇಜಸ್ವಿನಿ ನಟರಾಜು, ಇಗ್ಗಲೂರು ಮಂಜುಳಾ ಇದ್ದರು.

ಕಾಂಗ್ರೆಸ್ 6 ದಶಕಗಳ ಅವಧಿಯಲ್ಲಿ ಅವಶ್ಯ ವಸ್ತುಗಳ ಬೆಲೆ ನಿಯಂತ್ರಣ, ಮಹಿಳೆಯರ ಮೇಲಿನ ದೌರ್ಜನ್ಯ ನಿಯಂತ್ರಣ ಮಾಡುವಲ್ಲಿ ವಿಫಲವಾಗಿದೆ. ಭಾರತೀಯ ಜನತಾ ಪಕ್ಷದ ಅಭ್ಯ ರ್ಥಿಗಳಿಗೆ ಕೇವಲ 60 ತಿಂಗಳು ಅವಕಾಶ ನೀಡಿದಲ್ಲಿ ಎಲ್ಲ ಸಮಸ್ಯೆಗಳಿಗೆ ಪರಿಹಾರ ಕಾಣಲು ಸಾಧ್ಯ
-ನಟಿ ರಕ್ಷಿತಾ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.