ಬೆಂಗಳೂರು ಗ್ರಾಮಾಂತರ

ಕಲ್ಲಡ್ಕ ಗಲಭೆ; ಐವರ ಬಂಧನ

Published On :

ಬಂಟ್ವಾಳ: ಕಲ್ಲಡ್ಕದಲ್ಲಿ ನಡೆದ ಅಹಿತಕರ ಘಟನೆಗಳಿಗೆ ಸಂಬಂಧಿಸಿದಂತೆ ಬಂಟ್ವಾಳ ನಗರ ಪೊಲೀಸರು ಎರಡೂ ಗುಂಪುಗಳಿಗೆ ಸೇರಿದ ಒಟ್ಟು ಐದು ಮಂದಿಯನ್ನು ಬಂಧಿಸಿದ್ದಾರೆ. ಕಲ್ಲಡ್ಕದ ನಿವಾಸಿಗಳಾದ ಹಾರಿಸ್, ಸಿದ್ದೀಕ್, ಅಮಿತ್ ಪೂಜಾರಿ, ಪುಷ್ಪರಾಜ ಹಾಗೂ ರಾಜೇಶ್ ಬಂಧಿತರು.
ಕಲ್ಲಡ್ಕದಲ್ಲಿ ಗುರುವಾರ ರಾತ್ರಿ ನಡೆದ ಗುಂಪು ಘರ್ಷಣೆಗೆ ಸಂಬಂಧಿಸಿದಂತೆ ಶುಕ್ರವಾರ ಮಧ್ಯರಾತ್ರಿ ಕಾರ್ಯಾಚರಣೆ ನಡೆಸಿದ ನಗರ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ ಶನಿವಾರ ಬಂಟ್ವಾಳ ನ್ಯಾಯಾಲಯಕ್ಕೆ ಹಾಜರು ಪಡಿಸಿದರು. ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.   ಪಿಎಫ್‌ಐ ಸಂಘಟನೆ ಮುಖಂಡರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡ ಹಿನ್ನೆಲೆಯಲ್ಲಿ ಮಧ್ಯರಾತ್ರಿಯಿಂದಲೇ ಸಂಘಟನೆಯ ನೂರಾರು ಕಾರ್ಯಕರ್ತರು ಬಂಟ್ವಾಳ ನಗರ ಠಾಣೆ ಎದುರು ಜಮಾಯಿಸಿ ಪ್ರತಿಭಟನೆ ನಡೆಸಿದರು. ಬಂಟ್ವಾಳ ನಗರ ಠಾಣೆಯಲ್ಲೇ ಮೊಕ್ಕಾಂ ಹೂಡಿದ್ದ ಎಸ್ಪಿಯನ್ನು ಶನಿವಾರ ಮಧ್ಯಾಹ್ನ ಬಿಜೆಪಿ ಮುಖಂಡರು ಭೇಟಿ ಮಾಡಿ ಅಮಾಯಕರನ್ನು ಬಂಧಿಸದಂತೆ ಮನವಿ ಮಾಡಿದರು.

ಕಲ್ಲಡ್ಕ ಶಾಂತ
ಕಳೆದೆರಡು ದಿನಗಳಿಂದ ನಡೆದ ಅಹಿತಕರ ಘಟನೆ ಹಿನ್ನೆಲೆಯಲ್ಲಿ ಅಶಾಂತಿಗೆ ತಿರುಗಿದ್ದ ಕಲ್ಲಡ್ಕ ಶನಿವಾರ ಸಂಪೂರ್ಣ ಸಹಜ ಸ್ಥಿತಿಗೆ ತಲುಪಿದ್ದು, ಎಂದಿನಂತೆ ಅಂಗಡಿ ಮುಂಗಟ್ಟುಗಳು ತೆರೆದು ವ್ಯಾಪಾರಸ್ಥರು ತಮ್ಮ ವ್ಯವಹಾರ ನಡೆಸಿದ್ದಾರೆ.  ವಾಹನ ಸಂಚಾರಗಳು ಕೂಡ ಎಂದಿನಂತೆ ಇದ್ದವು, ಮುಂಜಾಗ್ರತಾ ಕ್ರಮವಾಗಿ ಕಲ್ಲಡ್ಕ ಪರಿಸರಾದ್ಯಂತ ಸಶಸ್ತ್ರ ಮೀಸಲು ಪಡೆ ಸಹಿತ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.