ಬೆಂಗಳೂರು ಗ್ರಾಮಾಂತರ

ಮುನಿರಾಜು ಗೌಡ ಪರ ಬೈಕ್ ರ್ಯಾಲಿ

Published On :

ಕನಕಪುರ: ಬೆಂಗ್ರಾ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರಾಜು ಗೌಡ ಪರವಾಗಿ ಕನಕಪುರದಲ್ಲಿ ಬೈಕ್ ರ್ಯಾಲಿ ಹಾಗೂ ರೋಡ್ ಶೋಮೂಲಕ ಚುನಾವಣಾ ಪ್ರಚಾರ ನಡೆಯಿತು. ನೂರಕ್ಕೂ ಹೆಚ್ಚು ಬೈಕ್‌ಗಳಲ್ಲಿ ಯುವಕರು ಬಿಜೆಪಿ ಪರವಾಗಿ, ಅಭ್ಯರ್ಥಿ ಮುನಿರಾಜುಗೌಡ ಪರವಾಗಿ ಘೋಷಣೆಗಳನ್ನು ಕೂಗುತ್ತಾ ಪಟ್ಟಣದ ಎಲ್ಲಾ ಬೀದಿಗಳಲ್ಲಿ ಸಂಚರಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ಬಿ.ನಾಗರಾಜು,ತಾಲೂಕು ಅಧ್ಯಕ್ಷ ಜನಾರ್ಧನ,ಬ್ಲಾಕ್ ಅಧ್ಯಕ್ಷ ಶ್ರೀನಿವಾಸ್, ನಾಗಾನಂದ, ವಕ್ತಾರ ಮನು ಪಾಲ್ಗೊಂಡಿದ್ದರು.
ಪ್ರಚಾರದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಅಭ್ಯರ್ಥಿ ಮುನಿರಾಜುಗೌಡ, ಬೆಂಗಳೂರು ದಕ್ಷಿಣ, ಆನೇಕಲ್ ಹಾಗೂ ರಾಜರಾಜೇಶ್ವರಿ ನಗರಗಳಲ್ಲಿ ಬಿಜೆಪಿಗೆ ಅತಿಹೆಚ್ಚಿನ ಬೆಂಬಲವಿದ್ದು ಗೆಲವು ನಿಶ್ಚಿತವಾಗಿದೆ. ರಾಮನಗರ ಜಿಲ್ಲೆಯಲ್ಲಿಯೂ ಹೆಚ್ಚಿನ ಬಹುಮತ ಪಡೆಯಲು ಅಹರ್ನಿಶಿ ಶ್ರಮಿಸುತ್ತಿದ್ದೇವೆ ಎಂದು ಹೇಳಿದರು.
ಜಿಲ್ಲಾಧ್ಯಕ್ಷ ಬಿ.ನಾಗರಾಜು ಮಾತನಾಡಿ ಈ ಬಾರಿ ಯುವಕರು ಹೆಚ್ಚಾಗಿ ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ. ಮೋದಿಯವರು ಗುಜರಾತ್‌ನಲ್ಲಿ ಮಾಡಿದ ಮೋಡಿ ಎಲ್ಲರನ್ನೂ ಸೆಳೆದಿದೆ. ಸಮರ್ಥ ನಾಯಕರಿಂದ ಮಾತ್ರ ಸಮರ್ಥ ಭಾರತದ ನಿರ್ಮಾಣ ಸಾಧ್ಯ ಎಂದರು.

ಕನಕಪುರ: ಲಂಬಾಣಿ ಸಮುದಾಯ ಕೃತಜ್ಞತೆ
ಕನಕಪುರ: ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ತೀರಾ ಹಿಂದುಳಿದಿದ್ದ ಲಂಬಾಣಿ ಸಮುದಾಯಕ್ಕೆ ಉತ್ತಮ  ಸ್ಥಾನಮಾನ ದೊರಕಿಸಿಕೊಡಲು ನಿರಂತರ ಹೋರಾಟ ನಡೆಸುತ್ತಿರುವ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಸಂಸದ ಡಿ.ಕೆ.ಸುರೇಶ್ ಅವರಿಗೆ ತಾಲೂಕಿನ ಲಂಬಾಣಿ ಸಮುದಾಯ ಕೃತಜ್ಞತೆಗಳನ್ನು ಸಲ್ಲಿಸುತ್ತದೆ ಎಂದು ಕೆಪಿಸಿಸಿ ಸದಸ್ಯ ಹಾಗೂ ರಾಜ್ಯ ಕಟ್ಟಡ ಕಾರ್ಮಿಕ ಮಂಡಳಿ ನಿರ್ದೇಶಕ ಎಂ.ಮಹದೇವನಾಯಕ್ ಹೇಳಿದ್ದಾರೆ.  ಅವರು ಕನಕಪುರ ತಾಲೂಕಿನ ಬಿಳೀಕಲ್ಲು ಬೆಟ್ಟದ ಬುಡದಲ್ಲಿನ ಕೋಣಾಳುದೊಡ್ಡಿ ಗ್ರಾಮದಲ್ಲಿ ಚುನಾವಣಾ ಪ್ರಚಾರ ಹಾಗೂ ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.  ಕಾಂಗ್ರೆಸ್ ಮುಖಂಡರಾದ ಶಂಕರನಾರಾಯಣ, ಮರಸಪ್ಪರವಿ, ಸಿದ್ದುನಾಯಕ್ ನೇತೃತ್ವದಲ್ಲಿ 20 ಕ್ಕೂ ಹೆಚ್ಚು ಜೆಡಿಎಸ್ ಮುಖಂಡರು ಪಕ್ಷತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.