ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ ಗೆಲವು ನಿಶ್ಚಿತ
ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ವಿರೋಧ ಪಕ್ಷಗಳು ಎಷ್ಟೇ ಪ್ರಯತ್ನಪಟ್ಟರೂ ಕಾಂಗ್ರೆಸ್ ಗೆಲವು ನಿಶ್ಚಿತ. ಇಲ್ಲಿನ ಜನ ಪ್ರಾಮಾಣಿಕ ರಾಜಕಾರಣವನ್ನು ಬೆಂಬಲಿಸುತ್ತಾರೆ ಎಂದು ವಿಧಾನಸಭೆಯ ಮಾಜಿ ಸ್ಪೀಕರ್ ರಮೇಶ್ಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.
ಇಲ್ಲಿನ ಭಗತ್ಸಿಂಗ್ ಕ್ರೀಡಾಂಗಣದಲ್ಲಿ ಭಾನುವಾರ ಸಂಜೆ ನಡೆದ ಕಾಂಗ್ರೆಸ್ ಬೃಹತ್ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಸ್ವಾರ್ಥ ರಾಜಕಾರಣ ದೇಶವನ್ನು ಅಲ್ಲೋಲ ಕಲ್ಲೋಲ ಮಾಡುತ್ತಿದೆ. ವ್ಯಕ್ತಿಗತ ಹಿತಾಸಕ್ತಿಗಳು ರಾಜಕೀಯದ ದಿಕ್ಕುದೆಸೆಗಳನ್ನು ಬದಲಿಸುತ್ತಿದ್ದು, ಅಪಾಯಕಾರಿ ರಾಜಕೀಯ ಚಿತ್ರಣ ನಮ್ಮ ಮುಂದಿದೆ. ಎತ್ತಿನಹೊಳೆ ಮತ್ತು ಶಾಶ್ವತ ನೀರಾವರಿ ಯೋಜನೆಗಳನ್ನು ಅವೈಜ್ಞಾನಿಕ ಎಂದು ಕರೆದು ಜಾರಿ ಸಾಧ್ಯವಿಲ್ಲ ಎಂದು ಹೇಳಿದ್ದ ಕುಮಾರಸ್ವಾಮಿ ದಿಢೀರನೇ ವರಸೆ ಬದಲಿಸಿದ್ದಾರೆ. ಕೇವಲ ಪ್ರತಿಷ್ಠೆಯ ರಾಜಕಾರಣಕ್ಕಾಗಿ ರಾಮನಗರದಿಂದ ಚಿಕ್ಕಬಳ್ಳಾಪುರಕ್ಕೆ ಬಂದಿದ್ದಾರೆ. ಕೋಮುವಾದಿ ಶಕ್ತಿಗಳು ಈ ದೇಶದ ದಲಿತ, ಹಿಂದುಳಿದ ಮತ್ತು ಅಲ್ಪಸಂಖ್ಯಾತ ಜನರನ್ನು ಓಟ್ ಬ್ಯಾಂಕ್ ಆಗಿ ಸೃಷ್ಟಿಸಿಕೊಳ್ಳುವ ಹುನ್ನಾರ ಮಾಡುತ್ತಿವೆ. ಅಂತಹ ಶಕ್ತಿಗಳು ಬೆಳೆಯದಂತೆ ಚಿವುಟಿ ಹಾಕುವ ಕೆಲಸವನ್ನು ಅಗತ್ಯವಾಗಿ ಮಾಡಬೇಕಿದೆ. ಬಿಜೆಪಿ ದೇಶದ ಐಕ್ಯತೆಗೆ ಮಾರಕವಾಗುವ ಪ್ರಣಾಳಿಕೆಯನ್ನು ಹೊರತಂದಿದೆ. ಇದು ಜಾತ್ಯತೀತ ರಾಷ್ಟ್ರದ ಪರಿಕಲ್ಪನೆಗೆ ವಿರುದ್ಧ ಎಂದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಅಭ್ಯರ್ಥಿ ವೀರಪ್ಪ ಮೊಯ್ಲಿ, ಚಿಕ್ಕಬಳ್ಳಾಪುರ ಕ್ಷೇತ್ರದ ಜನತೆಯ ಬೆಂಬಲದಿಂದ ರಾಜಕೀಯ ಮರುಜನ್ಮ ಪಡೆದು ರಾಷ್ಟ್ರ ರಾಜಕಾರಣದಲ್ಲಿ ಗಣನೀಯ ಕೆಲಸ ಮಾಡಿದ್ದೇನೆ. ಆ ಮೂಲಕ
ಕ್ಷೇತ್ರಕ್ಕೂ ಕೂಡ ಸಾಕಷ್ಟು ಅಭಿವೃದ್ಧಿ ಕೆಲಸಗಳು ಆಗಿವೆ. ಕ್ಷೇತ್ರ ವ್ಯಾಪ್ತಿಯಲ್ಲಿ ನಡೆದ ಉದ್ಯೋಗ ಮೇಳಗಳು ಅನೇಕ ವಿದ್ಯಾವಂತ ಯುವಕರಿಗೆ ಬದುಕಿನ ಮಾರ್ಗವನ್ನು ತೋರಿಸಿಕೊಟ್ಟಿವೆ. ಶಿಕ್ಷಣ, ಮೂಲಸೌಕರ್ಯ ಮತ್ತು ಆರೋಗ್ಯಕ್ಕೆ ಒತ್ತು ನೀಡಿ ಕೆಲಸ ಮಾಡಿದ್ದೇನೆ. ಎತ್ತಿನಹೊಳೆ ಯೋಜನೆಯನ್ನು ನನ್ನ ಸ್ವಾರ್ಥಕ್ಕಾಗಿ ಮಾಡುತ್ತಿಲ್ಲ. ಈ ಜನರ ನೀರಿನ ಬವಣೆ ನೀಗಿಸುವುದು ನನ್ನ ಧರ್ಮ. ಅದನ್ನು ರಾಜಕಾರಣಕ್ಕೆ ಬಳಸಿಕೊಳ್ಳುವಷ್ಟು ಸಣ್ಣತನದ ರಾಜಕಾರಣಿ ನಾನಲ್ಲ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

