ರಾಮನಗರದಲ್ಲಿ ಸಲ್ಲದವರು ಚಿಕ್ಕಬಳ್ಳಾಪುರದಲ್ಲಿ ಸಲ್ಲುವರೆ?
ಸಿಎಂ ಸಿದ್ಧರಾಮಯ್ಯ ಪ್ರಶ್ನೆ ಜೆಡಿಎಸ್ ಅಪ್ಪ, ಮಕ್ಕಳಿಗೆ ಮಾತ್ರ ಸೀಮಿತ
ಹೊಸಕೋಟೆ: ರಾಮನಗರದಲ್ಲಿ ಸೋಲಿನ ಭೀತಿಯಿಂದ ಪಲಾಯನಗೊಂಡಿರುನ ಕುಮಾರಸ್ವಾಮಿ ಚಿಕ್ಕಬಳ್ಳಾಪುರದಲ್ಲಿ ಸ್ಪರ್ಧಿಸಿ ಮತ್ತೊಮ್ಮೆ ಜನರಿಗೆ ಮೋಸ ಮಾಡಲು ಪ್ರಯತಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಆರೋಪಿಸಿದರು.
ಅವರು ಪಟ್ಟಣದ ಬಸ್ಸ್ಟಾಂಡಿನಲ್ಲಿ ತಾಲೂಕು ಕಾಂಗ್ರೆಸ್ ಸಮಿತಿ ವತಿಯಿಂದ ಏರ್ಪಡಿಸಿದ್ದ ಲೋಕಸಭಾ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು. ಜೆಡಿಎಸ್ ಅಪ್ಪ, ಮಕ್ಕಳಿಗೆ
ಮಾತ್ರ ಸೀಮಿತವ್ದ ಪಕ್ಷವಾಗಿದ್ಗು ರಾಜ್ಯದಲ್ಲಿ ರೈತರು ಸಂಕಷ್ಟಗಳಿಗೆ ಸಿಲುಕಿದ ಸಂದರ್ಭಗಳಲ್ಲಿ ಮೌನವಾಗಿದ್ದು ಚುನಾವಣೆ ಸ ಮೀಪಿಸುತ್ತಿದ್ದಂತೆ ಮೊಸಳೆ ಕಣ್ಣೀರು ಹರಿಸುವ ನಾಟಕವಾಡುತ್ತಿದ್ದಾರೆ.
ಈ ಕ್ಷೇತ್ರದ ಜನರ ಮಹತ್ವಾಕಾಂಕ್ಷಿ ಎತ್ತಿನಹೊಳೆ ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿರುವ ಕುಮಾರಸ್ವಾಮಿಗೆ ಮತದಾರರೆ ತಕ್ಕ ಪಾಠ ಕಲಿಸಲಿದ್ದಾರೆ. ರಾಜ್ಯದಲ್ಲಿ 3-4 ಕ್ಷೇತ್ರಗಳಲ್ಲಿ ಮಾತ್ರ ಕಾಂಗ್ರೆಸ್ಗೆ ಜೆಡಿಎಸ್ ಅಭ್ಯರ್ಥಿಗಳಿಂದ ಸ್ಪರ್ಧೆ ಇದೆ. ಉಳಿದೆಡೆ ತನ ಅಸ್ತಿತ್ವವನೆ ಅದು ಕಳೆದುಕೊಂಡಿದೆ. ಕೋಮುವಾದಿಯಾದ ಬಿಜೆಪಿ ರಾಷ್ಟ್ರದ ವೈವಿಧ್ಯತೆಯನು ಕಾಪಾಡಲು ಸಾಧ್ಯವಿಲ್ಲ ಎಂದರು.
ಕಾಂಗ್ರೆಸ್ ಅಭ್ಯರ್ಥಿ ವೀರಪ್ಪ ಮೊಯ್ಲಿ ಮಾತನಾಡಿ ಕ್ಷೇತ್ರದಲ್ಲಿ ಬಹಳಷ್ಚು ಅಭಿವೃದ್ಧಿ ಕಾರ್ಯಗಳನು ಜಾರಿಗೊಳಿಸಿರುವುದನು ಮತದಾರರು ಅರಿತು ಮತ್ತೊಂದು ಅವಕಾಶ ನೀಡಬೇಕು.
ಎತ್ತಿನಹೊಳೆ ಯೋಜನೆಯನು 3 ನರ್ಷಗಳಲ್ಲಿ ಪೂರೈಸಿ ನೀರಾವರಿ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಲು ಕಂಕಣಬದ್ಧರಾಗುವುದಾಗಿಯೂ ತಾಲೂಕಿನ ಅನುಗೊಂಡನಹಳ್ಳಿ ಹೋಬಳಿಯಲ್ಲಿ ಏತ ನೀರಾವರಿ ಯೋಜನೆ ಜಾರಗೊಳಿಸುವುದಾಗಿ ತಿಳಿಸಿದರು.
ಮಾಜಿ ಕೇಂದ್ರ ಸಚಿವ ಸಿ.ಎಂ.ಇಬ್ರಾಹಿಂ, ವಿಧಾನ ಪರಿಷತ್ ಮಾಜಿ ಸದಸ್ಯ ವಿ.ಎಸ್.ಉಗ್ರಪ್ಪ, ಶಾಸಕರಾದ ಎನ್. ನಾಗರಾಜ್, ಬೈರತಿ ಬಸವರಾಜ್ ಮಾತನಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

