ಬೆಂಗಳೂರು ಗ್ರಾಮಾಂತರ

ಅಭಿವೃದ್ಧಿಗಾಗಿ ಕಾಂಗ್ರೆಸ್‌ಗೆ ಮತ ನೀಡಿ: ಮೊಯ್ಲಿ

Published On :

ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಕೇಂದ್ರ ಸಚಿವ ವೀರಪ್ಪ ಮೊಯ್ಲಿ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ವಿವಿಧ ಗ್ರಾಮಗಳಲ್ಲಿ ಸೋಮವಾರ ಚುನಾವಣಾ ಪ್ರಚಾರ ರೋಡ್ ಶೋ ಮತ್ತು ಸಭೆಗಳನ್ನು ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು,  ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಕಳೆದ 5 ವರ್ಷಗಳಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳಾಗಿವೆ. ಈ ಭಾಗಕ್ಕೆ ಶಾಶ್ವತ ನೀರಾವರಿ ಒದಗಿಸುವ ಕನಸು ಕೈಗೂಡವ ಹೊಸ್ತಿಲಲ್ಲಿದೆ. ಅದರ ಭಾಗವಾಗಿಯೇ ಎತ್ತಿನಹೊಳೆ ಯೋಜನೆ ಕಾರ್ಯಗತವಾಗುತ್ತಿದೆ. ಜನರ ನೀರಿನ ಬವಣೆ ನೀಗಿಸಲು ಶಪಥ ಮಾಡಿರುವ ಕಾಂಗ್ರೆಸ್ ಗೆಲ್ಲಿಸಿ.
ಸದಾ ಕಾಲ ಜನಹಿತವನ್ನೇ ಬಯಸುವ ಪಕ್ಷವನ್ನು ಜನ ಕೈಬಿಡಲ್ಲ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಕೇವಲ ಮಾತಿನಲ್ಲಿ ಅಭಿವೃದ್ಧಿ ಶಿಖರ ಕಟ್ಟುವ ಕುಮಾರಸ್ವಾಮಿ ಕಾಂಗ್ರೆಸ್‌ಗೆ  ಪ್ರತಿಸ್ಪರ್ಧಿಯೇ ಅಲ್ಲ. ಬಿಜೆಪಿಯ ಬಚ್ಚೇಗೌಡರದು ಸೀಮಿತ ವ್ಯಾಪ್ತಿ ಎಂದರು. ಪಕ್ಷದ ಸ್ಥಳೀಯ ಮುಖಂಡರು ಮತ್ತು ಅಪಾರ ಸಂಖ್ಯೆಯ ಕಾರ್ಯಕರ್ತರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.