ಬಿಜೆಪಿ ಆತ್ಮಾವಲೋಕನ ಮಾಡಿಕೊಳ್ಳಲಿ: ಎಸ್.ಎಂ.ಕೃಷ್ಣ
ಆನೇಕಲ್ಲು: ಭ್ರಷ್ಟಾಚಾರದ ವಿರುದ್ಧ ಮಾತನಾಡುವ ನರೇಂದ್ರ ಮೋದಿಯವರಿಗೆ ಅವರ ಪಕ್ಷದ ಮುಖ್ಯಮಂತ್ರಿಯಿಂದ ಹಿಡಿದು ಹಲವಾರು ಮಂತ್ರಿಗಳು ಜೈಲಿಗೆ ಹೋಗಿ ಬಂದಿರುವುದು ತಿಳಿಯದ ವಿಷಯವೇನಲ್ಲ. ಮೊದಲ ಬಾರಿ ಮುಖ್ಯಮಂತ್ರಿಯವರೊಬ್ಬರು ಜೈಲುವಾಸ ಮಾಡಿರುವುದು ಬಗ್ಗೆ ಬಿಜೆಪಿ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ರಾಜ್ಯ ಸಭಾ ಸದಸ್ಯ ಎಸ್.ಎಂ.ಕೃಷ್ಣ ತಿಳಿಸಿದರು.
ಅವರು ಆನೇಕಲ್ ತಾಲೂಕಿನ ಚಂದಾಪುರದಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಪರವಾಗಿ ಏರ್ಪಡಿಸಿದ್ದ ಪ್ರಚಾರ ಸಭೆಯಲ್ಲಿ ಮಾತನಾಡಿ ಕರ್ನಾಟಕದಲ್ಲಿ ರಾಮಕೃಷ್ಣ ಹೆಗಡೆ ಅವರ ಕಾಲದಲ್ಲಿ ಲೋಕಾಯುಕ್ತ ಕಾಯ್ದೆ ಜಾರಿಗೆ ಬಂತು. ಕಾಂಗ್ರೆಸ್ ಸರ್ಕಾರ ಲೋಕಾಯುಕ್ತವನ್ನು ಬಲಪಡಿಸಿತು. ಆದರೆ ಗುಜರಾತಿನಲ್ಲಿ ಮೋದಿ ಅವರು ಲೋಕಾಯುಕ್ತವನ್ನು ಜಾರಿ ಮಾಡಿರಲೇ ಇಲ್ಲ. ಈಗಿನ ರಾಜ್ಯಪಾಲರು ಕ್ರಮ ಕೈಗೊಂಡು ಇತೀಚೆಗಷ್ಟೇ ನೇಮಕ ಮಾಡಿದರು. ಇದರಿಂದ ಮೋದಿಯವರ ಭ್ರಷ್ಟಾಚಾರದ ದ್ವಿಮುಖ ನೀತಿಯನ್ನು ತೋರುತ್ತದೆ ಎಂದರು.
ಇಂಧನ ಸಚಿವ ಡಿ.ಕೆ.ಶಿವಕುಮಾರ್ ಮಾತನಾಡಿ ಕೇವಲ ಆರು ತಿಂಗಳಲ್ಲಿ ಡಿ.ಕೆ.ಸುರೇಶರವರು ಕ್ಷೇತ್ರಕ್ಕೆ ಮಾಡಿದ ಅಭಿವೃದ್ಧಿ ಕಾರ್ಯಗಳಿಂದ ಗೆಲ್ಲುವುದಿಲ್ಲವೆಂದು ಖಾತ್ರಿಗೊಂಡ ಕುಮಾರಸ್ವಾಮಿಯವರು ಚಿಕ್ಕಬಳ್ಳಾಪುರಕ್ಕೆ ಪಲಾಯನ ಮಾಡಿದ್ದಾರೆ. ಕರ್ನಾಟಕದ ಜನತೆ ಅವರ ಕುಟುಂಬದವರಿಗೆ ಮಂತ್ರಿ, ಮುಖ್ಯಮಂತ್ರಿ ಹಾಗೂ ಪ್ರಧಾನ ಮಂತ್ರಿಯಂತಹ ಉನ್ನತ ಸ್ಥಾನ ನೀಡಿದರೂ ಆತ್ಮ ತೃಪ್ತಿಯಿಲ್ಲದೆ ಜನರ ವಿಶ್ವಾಸ ಗಳಿಸುವಲ್ಲಿ ಎಡವಿದ್ದಾರೆ ಎಂದರು.
ಕ್ಷೇತ್ರದ ಶಾಸಕ ಬಿ.ಶಿವಣ್ಣ, ಹಾಪ್ಕಾಂಸ್ ನಿರ್ದೇಶಕ ಎಂ.ಬಾಬು, ಬಮೂಲ್ ನಿರ್ದೇಶಕ ಆರ್.ಕೆ.ರಮೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜಣ್ಣ, ಚಂದ್ರಪ್ಪ, ಮುಖಂಡರಾದ ಗಟ್ಟಹಳ್ಳಿ ಸೀನಪ್ಪ, ಎಂ. ಕೆಂಪರಾಜು, ಲಿಂಗಣ್ಣ, ಪುರುಷೋತ್ತಮ್, ಆರ್.ಕೆ.ಕೇಶವ ಮತ್ತು ಶಂಭಪ್ಪ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

