ಮತದಾನದ ಮಹತ್ವದ ಬಗ್ಗೆ ಅರಿವು
ರಾಮನಗರ: ಜಿಲ್ಲಾ ಸ್ವೀಪ್ ಸಮಿತಿ ಹಾಗೂ ರೋಟರಿ ಸಂಸ್ಥೆಯಿಂದ ನಗರದ ಎಂ.ಎಚ್. ಕಾಲೇಜಿನ ವಿದ್ಯಾರ್ಥಿಗಳಿಗೆ ಮತದಾರರ ಜಾಗೃತಿ ಕಾರ್ಯಕ್ರಮದ ಮೂಲಕ ಮತದಾನದ ಮಹತ್ವದ ಬಗ್ಗೆ ಅರಿವು ಮೂಡಿಸಲಾಯಿತು.
ಸಂದರ್ಭದಲ್ಲಿ ಜಿ.ಪಂ. ಸಿಇಒ ಹಾಗೂ ಜಿಲ್ಲಾ ಸ್ವೀಪ್ಸ್ಮಿತಿ ಅಧ್ಯಕ್ಷ ಡಾ.ಎಂ.ವಿ.ವೆಂಕಟೇಶ್ ಮಾತನಾಡಿ, ಭಾರತದ ಇತಿಹಾಸವನ್ನು ಅವಲೋಕಿಸಿದಾಗ ಅನುವಂಶೀಯ ಆಡಳಿಛತ ವ್ಯವಸ್ಥೆ, ರಾಜ ವ್ಯವಸ್ಥೆ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆ ಕಾಣಸಿಗುತ್ತದೆ ಎಂದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳೇ ಪ್ರಭುಗಳಾಗಿದ್ದು, ಸಕ್ರಿಯವಾಗಿ ರಾಜಕೀಯದಲ್ಲಿ ಪಾಲ್ಗೊಳ್ಳಲು ಅವಕಾಶವಿದೆ. ಇದನ್ನು ಸದುಪಯೋಗಪಡಿಸಿಕೊಂಡು ಸೂಕ್ತ ವ್ಯಕ್ತಿಗೆ ಮತ ಚಲಾಯಿಸುವ ಮೂಲಕ ದೇಶದ ಅಭಿವೃದ್ಧಿಯಲ್ಲಿ ಪಾಲುದಾರರಾಗಬೇಕು ಎಂದು ಕರೆ ನೀಡಿದರು.
ಪ್ರಜಾ ಪ್ರಭುತ್ವ ವ್ಯವಸ್ಥೆಯಲ್ಲಿ ಜಾತಿ, ಮತ, ಬಡವ, ಬಲ್ಲಿದ ಎಂಬ ಬೇಧವಿಲ್ಲದೆ ಮತ ಚಲಾಯಿಸುವ ಹಕ್ಕನ್ನು ಸಂವಿಧಾನ ನೀಡಿದೆ. ಗ್ರಾಮೀಣ ಭಾಗದಲ್ಲಿನ ನಿರಕ್ಷರಸ್ಥರು ಮತದಾನ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಮತ ಚಲಾಯಿಸುತ್ತಾರೆ. ಆದರೆ, ನಗರ ಪ್ರದೇಶದಲ್ಲಿರುವ ಸುಶಿಕ್ಷಿತರೇ ಮತದಾನದ ಬಗ್ಗೆ ಅಸಡ್ಡೆ ತೋರುತ್ತಿದ್ದಾರೆ ಎಂದು ವಿಷಾದಿಸಿದರು.
ಯುವ ಮತದಾರರೇ ದೇಶದ ಬೆನ್ನೆಲುಬಾಗಿದ್ದಾರೆ. ಎಲ್ಲರೂ ಮತದಾನ ಮಾಡಿ, ಉತ್ತಮ ಸರ್ಕಾರ ಆಯ್ಕೆ ಮಾಡಿದಲ್ಲಿ 100 ವರ್ಷಗಳಲ್ಲಿ ಕಾಣಬೇಕಾದ ಅಭಿವೃದ್ಧಿಯು ಮುಂದಿನ ಹತ್ತು ವರ್ಷದಲ್ಲಿ ಆಗಲಿದೆ. ದೇಶದ ಭವಿಷ್ಯ ನಿರ್ಧರಿಸುವ ಪ್ರಕ್ರಿಯೆ ಬಗ್ಗೆ ಉದಾಸೀನ ತೋರದೇ ಎಲ್ಲರೂ ಮತದಾನ ಮಾಡುವಂತೆ ವಿನಂತಿಸಿದರು.
ರೋಟರಿ ಸಂಸ್ಥೆಯ ಜಿಲ್ಲಾಧ್ಯಕ್ಷ ಆರ್.ಜಿ.ಚಂದ್ರಶೇಖರ್, ಎಂ.ಎಚ್.ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಎಚ್.ಚಂದ್ರಶೇಖರ್, ಪ್ರಾಂಶುಪಾಲ ಕುಮಾರಸ್ವಾಮಿ ಭಾಗವಹಿಸಿದ್ದರು.
ರೇಷ್ಮೆ ಗೂಡಿನ ಮಾರುಕಟ್ಟೆಯಲ್ಲಿ...
ಜಿಲ್ಲಾ ಸ್ವೀಪ್ ಸಮಿತಿ ಹಾಗೂ ರೇಷ್ಮೆ ಇಲಾಖೆಯಿಂದ ನಗರದ ರೇಷ್ಮೆ ಗೂಡಿನ ಮಾರುಕಟ್ಟೆಯಲ್ಲಿ ಮಂಗಳವಾರ ಮತದಾರರ ಜಾಗೃತಿ ಕಾರ್ಯಕ್ರಮ ನಡೆಯಿತು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಡಾ.ಎಂ.ವಿ.ವೆಂಕಟೇಶ್, ರೇಷ್ಮೆ ಗೂಡು ಮಾರುಕಟ್ಟೆ ಉಪ ನಿರ್ದೇಶಕ ಲಕ್ಷ್ಮಿಕಾಂತರೆಡ್ಡಿ ರೇಷ್ಮೆ ಮಾರುಕಟ್ಟೆಗೆ ಆಗಮಿಸಿದ್ದ ಸಾರ್ವಜನಿಕರು, ರೈತರಿಗೆ ಮತದಾನದ ಮಹತ್ವ ತಿಳಿಸುವ ಕರಪತ್ರಗಳನ್ನು ವಿತರಿಸಿದರು.
ಏ.17ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ತಪ್ಪದೇ ಮತ ಚಲಾಯಿಸುವಂತೆ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

