'ಮೋದಿ ಅಲೆಯಲ್ಲಿ ಬಿಜೆಪಿ ಗೆಲವು ನಿಶ್ಚಿತ'
ದೊಡ್ಡಬಳ್ಳಾಪುರ: ತಾಲೂಕಿನಲ್ಲಿ ಮೋದಿ ಅಲೆ ಹೆಚ್ಚಾಗಿದ್ದು ಬಿಜೆಪಿ ಗೆಲವು ನಿಶ್ಚಿತ. ಇಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತೀವ್ರ ಹಣಾಹಣೆ ಇದೆ ಎಂದು ಮಾಜಿ ಶಾಸಕ ಜೆ.ನರಸಿಂಹಸ್ವಾಮಿ ಹೇಳಿದರು.
ತಾಲೂಕಿನ ಮಧುರೆ ಹೋಬಳಿ ಕನಸವಾಡಿಯ ಹಲವು ಗ್ರಾಮಗಳಲ್ಲಿ ಬಿಜೆಪಿ ಅಭ್ಯರ್ಥಿ ಬಿ.ಎನ್.ಬಚ್ಚೇಗೌಡರ ಪರ ಮತಯಾಚಿಸಿ ಅವರು ಮಾತನಾಡಿದರು.
ಕ್ಷೇತ್ರದಲ್ಲಿ ಜೆಡಿಎಸ್ ಅಲೆ ಇಲ್ಲ. ಬಿಜೆಪಿ ಇಲ್ಲಿ ಅತಿಹೆಚ್ಚು ಮತ ಗಳಿಸಲಿದೆ. ಜೆಡಿಎಸ್ನ ಅಭ್ಯರ್ಥಿ ರಾಮನಗರ ವಿಧಾನಸಭಾ ಕ್ಷೇತ್ರಕ್ಕೆ ಸೀಮಿತವಾಗಿರಲಿ. ಚಿಕ್ಕಬಳ್ಳಾಪುರದ ಮತದಾರ ಅವರನ್ನು ಒಪ್ಪಿಕೊಳ್ಳಲಾರ.
ಅದೇ ರೀತಿ ಬಿಜೆಪಿ ಅಭಿವೃದ್ಧಿ ಹೆಸರಿನಲ್ಲಿ ಮತ ಕೇಳುತ್ತಿದೆ. ಕಳೆದ 5 ವರ್ಷದ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳೇ ಪಕ್ಷಕ್ಕೆ ಶ್ರೀರಕ್ಷೆ. ನದಿಜೋಡಣೆ ಮತ್ತು ಉತ್ತಮ ಆರ್ಥಿಕ ನೀತಿ ಜಾರಿಗೆ ಬಿಜೆಪಿ ಗೆಲ್ಲಿಸಿ. ನರೇಂದ್ರ ಮೋದಿ ಅವರನ್ನು ಪ್ರಧಾನಿಯಾಗಿಸಿ ಎಂದರು ಕರೆ ನೀಡಿದರು. ಬಿಜೆಪಿ ಜಿಲ್ಲಾಧ್ಯಕ್ಷ ಬಿ.ಸಿ.ನಾರಾಯಣಸ್ವಾಮಿ ಮಾತನಾಡಿ, ಬೆಲೆ ಏರಿಕೆ ಮೊಯ್ಲಿ ಸಾಧನೆ. ಬಡಜನರ ಪರ ಆಡಳಿತಕ್ಕಾಗಿ ಬಿಜೆಪಿಗೆ ಮತ ನೀಡಿ. ಸುಳ್ಳಗಾರರನ್ನು, ವಲಸಿಗರನ್ನು ದೂರ ಇಡಿ. ಸ್ಥಳೀಯ ಮತ್ತು ಪ್ರಾಮಾಣಿಕರನ್ನು ಗೆಲ್ಲಿಸಿ ಎಂದರು.
ತಾ.ಪಂ ಮಾಜಿ ಅಧ್ಯಕ್ಷ ಪ್ರಸನ್ನಕುಮಾರ್, ಮಧುರೆ ಹೋಬಳಿ ಬಿಜೆಪಿ ಅಧ್ಯಕ್ಷ ವಿಜಯಕುಮಾರ್, ಮುಖಂಡರಾದ ವಿ.ವೆಂಕಟೇಶ್, ನಾಗರಾಜ್, ಟಿ.ಜಿ.ಮಂಜುನಾಥ್, ಸೋಮಣ್ಣ ಮತ್ತಿತರರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

