ಸೂಕ್ಷ್ಮ ಮತಗಟ್ಟೆಗಳಿಗೆ ಚುನಾವಣಾ ವೀಕ್ಷಕರ ಭೇಟಿ
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಗುರುವಾರ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ನಗರ ಮತ್ತು ಗ್ರಾಮಾಂತರದ ಅತಿ ಸೂಕ್ಷ್ಮ ಮತ್ತು ಸೂಕ್ಷ್ಮ ಮತಗಟ್ಟೆಗಳಿಗೆ ಚುನಾವಣಾ ವೀಕ್ಷಕರು ಭೇಟಿ ನೀಡಿ ಪರಿಶೀಲಿಸಿದರು.
ಕೇಂದ್ರ ಚುನಾವಣಾ ಆಯೋಗದ ಮೂಲಕ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣಾ ವೀಕ್ಷಕರು, ಉಪವಿಭಾಗಾಧಿಕಾರಿ ಮಂಜುನಾಥ್, ತಹಶೀಲ್ದಾರ್ ಕೆ.ಬಿ.ಸಿದ್ಧಲಿಂಗಯ್ಯ ಸೇರಿದಂತೆ ಹಲವಾರು ಅಧಿಕಾರಿಗಳು ಮತದಾನ ಕೇಂದ್ರಗಳಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ದೊಡ್ಡಬಳ್ಳಾಪುರ ಕ್ಷೇತ್ರದಲ್ಲಿ ಬಹುತೇಕ ಶಾಂತಿಯುತವಾಗಿ ನಡೆಯುತ್ತಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಲಾಗಿದೆ. ಮತಕೇಂದ್ರಗಳ ಸುತ್ತ ಕೂಡ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.
ಅಡ್ಡ ಮತದಾನ ಸಂಪೂರ್ಣವಾಗಿ ತಡೆಯಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ದೊಡ್ಡಬಳ್ಳಾಪುರದಲ್ಲಿ ತಾಲೂಕು ಮಟ್ಟದ ಹಲವು ಅಧಿಕಾರಿಗಳ ಮಾರ್ಗದರ್ಶನದಲ್ಲಿ ವ್ಯವಸ್ಥಿತವಾಗಿ ಚುನಾವಣೆ ನಡೆದಿದೆ. ಶಾಂತಿಯುತ ಮತದಾನಕ್ಕೆ ಸಹಕರಿಸಿದ ನಾಗರೀಕರಿಗೆ ಅಭಿನಂದನೆಗಳು ಎಂದರು.
ಮಹಾಲಿಂಗೇಶ್ವರಸ್ವಾಮಿ ಅಕ್ಕಿ ಪೂಜಾ ಸಮಾರಂಭ
ಮಾಗಡಿ: ಮಾಗಡಿ ತಾಲೂಕಿನ ಸೋಲೂರು ಹೋಬಳಿ ಕಂಚಗಲ್ ಬಂಡೇಮಠದಲ್ಲಿ ಏಪ್ರಿಲ್ 18 ರಂದು ಮಹಾಲಿಂಗೇಶ್ವರಸ್ವಾಮಿ ಅಕ್ಕಿ ಪೂಜಾ ಸಮಾರಂಭ ಮತ್ತು ಕಂಚಗಲ್ ಬಂಡೇಮಠದ ಅಧ್ಯಕ್ಷರಾದ ಬಸವಲಿಂಗಸ್ವಾಮಿಜೀಗಳ ಹುಟ್ಟು ಹಬ್ಬವನ್ನು ಏರ್ಪಡಿಸಲಾಗಿದೆ ಎಂದು ಶಿವಪ್ರಸಾದ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

