ಬೆಂಗಳೂರು ಗ್ರಾಮಾಂತರ

ಕಲಾಪ್ರಜ್ಞೆ ಪ್ರಚೋದಿಸುವ ಶಿಕ್ಷಣ ಇಂದಿನ ಅಗತ್ಯ

Published On :

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕಲಾಪ್ರಜ್‌ಞೆಯನ್ನು ಪ್ರಚೋದಿಸುವ ಶಿಕ್ಷಣ ಇಂದಿನ ಅಗತ್ಯ. ಸೃಜನಶೀಲ ಆಲೋಚನೆಗಳನ್ನು ನೀಡದ ಶಿಕ್ಷಣದ ವ್ಯಕ್ತಿತ್ವವನ್ನು ಕಟ್ಟಿಕೊಡುವುದು ಅಸಾಧ್ಯ ಎಂದು ಕಿರುತೆರೆ ಕಲಾವಿದ ಮತ್ತು ಚಿತ್ರ ನಟ ಅರುಣ್ ಸಾಗರ್ ಅಭಿಪ್ರಾಯಪಟ್ಟರು.
ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ನಡೆದ ವಾರ್ಷಿಕೋತ್ಸವ ಸಮಾರಂಭ-2014 ಕಾರ್ಯಕ್ರಮದಲ್ಲಿ ಮುಖ್ಯಅತಿಥಿಯಾಗಿ ಅವರು ಮಾತನಾಡಿದರು.
ಗ್ರಾಮೀಣ ಪ್ರದೇಶದಲ್ಲಿ ವಿದ್ಯಾರ್ಥಿಗಳ ಆಲೋಚನಾ ಕ್ರಮ ಬಲಿಷ್ಠವಾಗಿರುತ್ತದೆ. ಕಲಾವಂತಿಕೆ ಮತ್ತು ಚಿಂತನಶೀಲತೆ ಎರಡೂ ಇದ್ದರೂ ಪ್ರೋತ್ಸಾಹ ಮತ್ತು ಸೂಕ್ತ ವೇದಿಕೆಗಳ ಕೊರತೆಯಿಂದ ಎಷ್ಟೋ ಪ್ರತಿಭೆಗಳು ಬೆಳಕಿಗೆ ಬಾರದೇ ಹೋಗುತ್ತಿವೆ. ಅಂತಹ ಪ್ರತಿಭೆಗಳನ್ನು ಉತ್ತೇಜಿಸುವ ಕೆಲಸ ಅನಿವಾರ್ಯವಾಗಿ ಆಗಲೇ ಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಶಾಸಕ ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿ, ದೊಡ್ಡಬಳ್ಳಾಪುರದಲ್ಲಿ ಸರ್ಕಾರಿ ಕಾಲೇಜಿನ ದಾಖಲಾತಿ ಪ್ರಮಾಣ ದಿನೇದಿನೇ ಹೆಚ್ಚುತ್ತಿದೆ. ಈ ಹೆಚ್ಚಳದ ಸಾಂದ್ರತೆ ಕಡಿಮೆ ಮಾಡುವ ನಿಟ್ಟಿನಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಮಹಿಳಾ ಪದವಿ ಕಾಲೇಜು ಆರಂಭವಾಗುತ್ತಿದೆ. ಈಗಾಗಲೇ ಕಾಲೇಜು ಆರಂಭಿಸಲು ಪ.ಪೂ.ಕಾಲೇಜಿನ ಕಟ್ಟಡದಲ್ಲೇ ಕೊಠಡಿಗಳನ್ನು ಮೀಸಲಿರಿಸಿ ನೀಡಲಾಗಿದೆ. ಸರ್ಕಾರಿ ಕಾಲೇಜುಗಳು ಉತ್ತಮ ಫಲಿತಾಂಶ ಪಡೆಯುತ್ತಿರುವುದು ಗಣನೀಯ ಅಂಶ ಎಂದರು.
ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳ ಸಾಧನೆ ಅನನ್ಯ. ದೂರದೂರುಗಳಿಂದ ಬಂದು ಅಧ್ಯಯನಶೀಲರಾಗುವ ವಿದ್ಯಾರ್ಥಿಗಳು ತಮ್ಮ ವಿಭಿನ್ನ ಅಭಿರುಚಿಗಳನ್ನು ಸಾಮಾಜಿಕ ಬದಲಾವಣೆ ಮತ್ತು ಬೆಳವಣಿಗೆಗೆ ಪೂರಕವಾಗಿ ಬೆಳೆಸಿಕೊಳ್ಳಬೇಕು. ಆಗ ಮಾತ್ರ ಶಿಕ್ಷಣದ ನಿಜವಾದ ಅರ್ಥ ಈಡೇರುತ್ತದೆ ಎಂದರು.
ತಾಲೂಕು ಪಂಚಾಯಿತಿ ಅಧ್ಯಕ್ಷೆ ನರಸಮ್ಮ, ನಗರಸಭಾ ಅಧ್ಯಕ್ಷೆ ಶಂಶುನ್ನಿಸಾ, ಕಾಲೇಜಿನ ಪ್ರಾಂಶುಪಾಲ ಪ್ರೊ.ಎಸ್.ಪಿ.ರಾಜಣ್ಣ, ನಗರಸಭಾ ಸದಸ್ಯರನೇಕರು, ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು, ಹಳೇ ವಿದ್ಯಾರ್ಥಿಗಳು ಮತ್ತಿತರರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.