'ವ್ಯಕ್ತಿತ್ವ ವಿಕಸನಕ್ಕೆ ಶಿಬಿರ ಸಹಕಾರಿ'
ಹೊಸಕೋಟೆ: ವಿದ್ಯಾರ್ಥಿಗಳಲ್ಲಿನ ಬುದ್ಧಿಶಕ್ತಿ ವಿಕಸನ ಗೊಳ್ಳಲು ಶಿಬಿರಗಳು ಸಹಕಾರಿಯಾಗಲಿವೆ ಎಂದ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಮುನಿರಾಜು ಕಿವಿಮಾತು ಹೇಳಿದರು.
ಪಟ್ಟಣದ ಬಾಲಕಿಯರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಮುದಾಯ, ಶಿಕ್ಷಣ ಇಲಾಖೆ ಮತ್ತು ಅಕ್ಷರ ಫೌಂಡೇಷನ್ ಸಹಯೋಗ ದಲ್ಲಿ ಏರ್ಪಡಿಸಿದ್ದ ಶಾಲಾ ಮಕ್ಕಳ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಪಠ್ಯೇತರ ಚಟುವಚಿಕೆಗಳಿಂದ ಜ್ಞಾನಾರ್ಜನೆ ಹೊಂದಲು ಸಾಧ್ಯವಿದೆ. ಸರಕಾರಿ ಶಾಲೆ ಗಳಲ್ಲಿ ಉತ್ತಮ ಸೌಲಭ್ಯ ಒದಗಿಸಿದ್ದು ಶಾಲೆ ಯಿಂದ ಹೊರಗುಳಿದ ಮಕ್ಕಳನ್ನು ದಾಖಲಿ ಸಲು ಜಾಗೃತಿ ಮೂಡಿಸುವಲ್ಲಿ ಇಂತಹ ಕಾರ್ಯಕ್ರಮಗಳು ಉಪಯುಕ್ತವಾಗಿವೆ. ಸರಕಾರೇತರ ಸಂಸ್ಥೆಗಳು ಹಮ್ಮಿಕೊಳ್ಳುವ ಇಂತಹ ಪ್ರೋತ್ಸಾಹದಾಯಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಮಕ್ಕಳು ಪಾಲ್ಗೊಂಡು ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಅಕ್ಷರ ಫೌಂಡೇಷನ್ ತಾಲೂಕು ಸಂಯೋಜಕ ಶ್ರೀನಿವಾಸ್ ಮಾತನಾಡಿ, ಪ್ರತಿ ಮಗುವಿನ ಉತ್ತಮ ಕಲಿಕೆಯ ಉದ್ದೇಶದಿಂದ ಸಂಸ್ಥೆಯು 14 ವರ್ಷಗಳಿಂದ ರಾಜ್ಯದ ಆಯ್ದ ಜಿಲ್ಲೆಗಳಲ್ಲಿ ಶಾಲಾ ಪೂರ್ವ ಮತ್ತು ಪ್ರಾಥಮಿಕ ಶಿರ್ಕ್ಷಕ್ಕೆ ಸಂಬಂಧಿಸಿದಂತೆ ಕಾರ್ಯಕ್ರಮ ರೂಪಿಸಿ ಅನುಷ್ಠಾನಗೊಳಿಸಿದೆ. ನಮ್ಮ ಮಕ್ಕಳು ನಮ್ಮ ಅಭಿಮಾನ ಯೋಜನೆಯಡಿ ಸಮು ದಾಯ, ಶಾಲಾಭಿವೃದ್ಧಿ ಸಮಿತಿ ಮತ್ತು ಗ್ರಾಮಗಳಲ್ಲಿನ ಯುವಕ-ಯುವತಿಯರ ಸಹಕಾರದೊಂದಿಗೆ 60 ಮಕ್ಕಳಿಗೆ 3 ದಿನಗಳ ಶಿಬಿರ ಏರ್ಪಡಿಸುತ್ತಿದೆ. ಪ್ರಸ್ತುತ ತಾಲೂಕಿನಲ್ಲಿ ಇಂತಹ 40 ಶಿಬಿರಗಳು ಚಾಲನೆಯಲ್ಲಿವೆ. ಗ್ರಾಮದ ಶೈಕ್ಷಣಿಕ ಸ್ಥಿತಿ ಗತಿಗಳ ಬಗ್ಗೆ ಚರ್ಚೆ, ಮುಂದಿನ ಶೈಕ್ಷಣಿಕ ಪ್ರಗತಿಗೆ ಯೋಜನೆ ರೊಪಿಸುವುದು, ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆ ಹೊರಹೊಮ್ಮಿಸುವುದರ ಮೂಲಕ ಶಾಲೆ ಮತ್ತು ಸಮುದಾಯದ ಮಧ್ಯೆ ಉತ್ತಮ ಸಂಬಂಧ ಬೆಸೆಯುವುದು ಶಿಬಿರದ ಪ್ರಮುಖ ಉದ್ದೇಶವಾಗಿದೆ ಎಂದರು.
ರಜಾ ಅವಧಿಯ ಸದ್ಬಳಕೆ, ಕಲಿಕೆಯಲ್ಲಿ ಆಸಕ್ತಿ ನಿರಂತರವಾಗಿರಲು ಚಟುವಟಿಕೆ ಹಮ್ಮಿ ಕೊಳ್ಳುವ ಮೂಲಕ ಪ್ರೇರೇಪಿಸುವುದು, ನಾನಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವ್ಯಕ್ತಿಗಳಿಂದ ವೃತ್ತಿ ಅನುಭವಗಳನ್ನು ಹಂಚಿಕೊಳ್ಳುವ ಕಾರ್ಯಕ್ರಮ ನಡೆಸಲಾಗುವುದು.
ಗ್ರಾಮೀಣ ವಿದ್ಯಾರ್ಥಿಗಳಿಗೆ ಕಬ್ಬಿಣದ ಕಡಲೆಯಾಗಿರುವ ಇಂಗ್ಲಿಷ್ ಹಾಗೂ ಗಣಿತವನ್ನು ಸುಲಭವಾಗಿ ಕಲಿಯಲು ಅಗತ್ಯ ಮಾರ್ಗದರ್ಶನ ನೀಡುವುದರೊಂದಿಗೆ ಕಲಿಕೋಪಕರಣ ಸಹ ವಿತರಿಸಲಾಗಿದೆ. ರಾಜ್ಯದಲ್ಲಿಯೇ ತಾಲೂಕನ್ನು ಶೈಕ್ಷಣಿಕವಾಗಿ ಮಾದರಿ ಯನ್ನಾಗಿಸುವುದು ಸಂಸ್ಥೆಯ ಆಶಯವಾಗಿದೆ ಎಂದು ಪ್ರತಿಪಾದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

