ಬೆಂಗಳೂರು ಗ್ರಾಮಾಂತರ

ನಗರಕ್ಕೆ ಪೊಲೀಸ್ ಮಹಾ ನಿರ್ದೇಶಕ ಭೇಟಿ, ಅಧಿಕಾರಿಗಳ ಹೇಳಿಕೆ ದಾಖಲೆ

Published On :

ರಾಮನಗರ: ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ವ್ಯಾಪಕ ಚುನಾವಣಾ ಅಕ್ರಮ ಕುರಿತು ಆಪ್ ಅಭ್ಯರ್ಥಿ ರವಿ ಕೃಷ್ಣಾರೆಡ್ಡಿ ನೀಡಿದ್ದ ದೂರಿನ ಹಿನೆಲೆಯಲ್ಲಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ಕುಮಾರ್ ಸೋಮವಾರ ರಾಮನಗರಕ್ಕೆ ಭೇಟಿ ನೀಡಿ ದೂರು ಸಂಬಂಧ ಪರಿಶೀಲಿಸಿದರು. ಹಾಗೂ ಅಧಿಕಾರಿಗಳ ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿ ಕೊಂಡರು.  
 ರಾಮನಗರದ ಮಾಯಗಾನಹಳ್ಳಿ ಮತಗಟ್ಟೆ ಬಳಿ ಮತದಾರರಿಗೆ ಹಣ ಹಂಚುತ್ತಿದ್ದು, ಅದನು ಚಿತ್ರೀಕರಿಸಿದಾಗ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಮೇಲೆ ಹಲ್ಲೆ ನಡೆಸಿದ್ದರು.
 ಇಡೀ ಕ್ಷೇತ್ರದಲ್ಲಿ ವ್ಯಾಪಕ ಅಕ್ರಮಗಳು ನಡೆದಿರುವ ಹಿನೆಲೆಯಲ್ಲಿ ಮರು ಚುನಾವಣೆ ನಡೆಸುವಂತೆ ಒತ್ತಾಯಿಸಿ ರವಿ ರವಿ ಕೃಷ್ಣಾರೆಡ್ಡಿ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದರು.
 ದೂರಿನ ಬಗ್ಗೆ ಸಮಗ್ರ ತನಿಖೆ ನಡೆಸಿ, ವರದಿ ನೀಡುವಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನಿಲ್ಕುಮಾರ್ ಝಾ ಅವರು ಪೊಲೀಸ್ ಮಹಾ ನಿರ್ದೇಶಕರಿಗೆ ಪತ್ರ ಬರೆದಿದ್ದರು. ಆ ಮೇರೆಗೆ ಅಲೋಕ್ಕುಮಾರ್, ಘಟನೆ ಸಂಭವಿಸಿತ್ತು ಎಂದು ಹೇಳಲಾದ ಮಾಯಗಾನಹಳ್ಳಿ ಮತಗಟ್ಟೆಗೆ ತೆರಳಿ ಪರಿಶೀಲನೆ ನಡೆಸಿದರು.
 ನಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಚುನಾವಣಾಧಿಕಾರಿ, ಜಿಲ್ಲಾಧಿಕಾರಿ ಡಾ.ಡಿ.ಎಸ್.ವಿಶ್ವನಾಥ್, ಎಸ್ಪಿ ಅನುಪಮ್ ಅಗ್ರವಾಲ್, ಸಹಾಯಕ ಚುನಾವಣಾಧಿಕಾರಿ, ಉಪ ವಿಭಾಗಾಧಿಕಾರಿ ಸಿದ್ದಪ್ಪ, ಎಂಸಿಸಿ ಅಧಿಕಾರಿಗಳು, ದೂರಿನಲ್ಲಿ ನಮೂದಿಸಲಾಗಿದ್ದ ಕೆಲ ಮತಗಟ್ಟೆ ಅಧಿಕಾರಿಗಳ ವಿಚಾರಣೆ ನಡೆಸಿದರು.  
 ಇದೇ ವೇಳೆ ದೂರುದಾರ ಆಪ್ ಅಭ್ಯರ್ಥಿ ರವಿ ಕೃಷ್ಣಾರೆಡ್ಡಿ ಅವರನು ವಿಚಾರಣೆಗೆ ಒಳಪಡಿಸಿ, ಅವರಿಂದ ಹೇಳಿಕೆ ದಾಖಲಿಸಿಕೊಂಡ ಅಲೋಕ್ಕುಮಾರ್ ಅವರು ತಮ್ಮ ರಾಮನಗರ ಭೇಟಿ ಮತ್ತು ಪ್ರಕರಣ ಸಂಬಂಧ ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದರು. ಸ್ಥಳೀಯ ಅಧಿಕಾರಿಗಳೂ ಪ್ರತಿಕ್ರಿಯೆಗೆ ಸಿದ್ಧರಿರಲಿಲ್ಲ.
ಅಭ್ಯರ್ಥಿ ಪುನರುಚ್ಚಾರ: ಚುನಾವಣಾ ಆಯೋಗಕ್ಕೆ ತಾವು ನೀಡಿರುವ ದೂರಿನಂತೆಯೇ ಬೆಂಗಳೂರು ಗ್ರಾಮಾಂತರ  ಲೋಕಸಭಾ ಕ್ಷೇತ್ರದಲ್ಲಿ ವ್ಯಾಪಕ ಭ್ರಷ್ಟಾಚಾರ ಮತ್ತು ಅಕ್ರಮಗಳು ನಡೆದಿವೆ ಎಂದು ಪುನರುಚ್ಚರಿಸಿರುವ ಆಪ್ ಅಭ್ಯರ್ಥಿ ರವಿ ಕೃಷ್ಣಾರೆಡ್ಡಿ ಸಂಬಂಧಿಸಿದವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಮತ್ತು ಮರು ಚುನಾವಣೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.