ಬೆಂಗಳೂರು ಗ್ರಾಮಾಂತರ

ಬಸವಣ್ಣರ ಬೋಧನೆ ಸರ್ವಕಾಲಕ್ಕೂ ಅನ್ವಯ

Published On :

ಹೊಸಕೋಟೆ: ಸಾಮಾಜಿಕ ಬದಲಾವಣೆಗಾಗಿ ಬಸವಣ್ಣನವರು ಪ್ರತಿಪಾದಿಸಿದ ಬೋಧನೆಗಳು ಸರ್ವಕಾಲಕ್ಕೂ ಅನ್ವಯಿಸುತ್ತವೆ ಎಂದು ವಿಜಯಪುರದ ಬಸವಕಲ್ಯಾಣ ಮಠಾಧ್ಯಕ್ಷ ಮಹದೇವ ಸ್ವಾಮೀಜಿ ಹೇಳಿದರು. ತಾಲೂಕಿನ ಕೆಂಬಳಿಗಾನಹಳ್ಳಿಯಲ್ಲಿ ವೀರಶೈವ ಸೇವಾ ಸಮಿತಿ ಏರ್ಪಡಿಸಿದ್ದ ಬಸವ ಜಯಂತಿ, ಶ್ರೀ ಜಗಜ್ಯೋತಿ ಬಸವೇಶ್ವರ ನಾಟಕ ಪ್ರದರ್ಶನದಲ್ಲಿ ಧರ್ಮ ಜಾಗೃತಿ ಮೂಡಿಸುವಲ್ಲಿ ಬಸವಣ್ಣನವರು ಪ್ರಮುಖ ಪಾತ್ರ ವಹಿಸಿದ್ದಾರೆ. ಜವರಲ್ಲಿ ಭಕ್ತಿ ಮನೋಭಾವ ಬದಲಾವಣೆ ಹೊಂದಲು ಸಹಕಾರಿಯಾಗಿವೆ ಎಂದರು. 12ನೇ ಶತಮಾನದಲ್ಲಿಯೇ ಮಹಿಳೆಯರನ್ನು ಶೋಷಣೆಯಿಂದ ಮುಕ್ತಗೊಳಿಸಿ ಸಮಾನ ಅವಕಾಶ ಕಲ್ಪಿಸುವ ಬಗ್ಗೆ ಬಸಣ್ಣನವರು ಪ್ರತಿಪಾದಿಸಿದ್ದರು. ದೂರದರ್ಶನದ ಅತಿಯಾದ ವ್ಯಾವೋಹದಿಂದಾಗಿ ನಾಟಕ ಕಲೆಗೆ ತೀವ್ರ ಧಕ್ಕೆ ಉಂಟಾಗುತ್ತಿರುವುದು ದುರದೃಷ್ಟಕರ. ಕಲೆ, ಸಂಸ್ಕೃಕತಿ ಬೆಳವಣಿಗೆಗೆ ಪ್ರೋತ್ಸಾಹ ಅಗತ್ಯವಾಗಿದೆ ಎಂದರು. ಸಿದ್ಧಗಂಗೆಯ ಸಿದ್ಧಲಿಂಗೇಶ್ವರ ನಾಟಕ ಮಂಡಳಿಯ ವ್ಯವಸ್ಥಾಪಕ ವೀರಭದ್ರಯ್ಯ ಮಾತನಾಡಿ, ಬಸವಣ್ಣ ಅವರು ಪ್ರಚುರಪಡಿಸಿದ ತತ್ವ, ಮಾನವೀಯ ಮೌಲ್ಯ, ಸಮಾನತೆ, ವ್ಯಕ್ತಿತ್ವದ ಬಗ್ಗೆ ಜನರಿಗೆ ಅರಿವು ಮೂಡಿಸುವ ಉದ್ದೇಶದಿಂದ ನಾಟಕ ಪ್ರದರ್ಶನ ಹಮ್ಮಿಕೊಳ್ಳಲಾಗುತ್ತಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.