ದೂರಲ್ಲಿ ಪೂರ್ಣ ಮಾಹಿತಿ ನೀಡಿ
ಚಿಕ್ಕಬಳ್ಳಾಪುರ: ಅಧಿಕಾರಿಗಳು ಮಾನವೀಯ ದೃಷ್ಟಿಯಿಂದ ಸಕಾಲದಲ್ಲಿ ಸಾರ್ವಜನಿಕರ ಕೆಲಸಗಳನ್ನು ಮಾಡಿಕೊಡಬೇಕು. ಇದರಿಂದ ಯಾರಿಗೇನೂ ತೊಂದರೆಯಾಗುವುದಿಲ್ಲ ಎಂದು ಲೋಕಾಯುಕ್ತ ಇನ್ಸ್ಪೆಕ್ಟರ್ ಮಂಜೇಗೌಡ ಸಲಹೆ ನೀಡಿದರು.
ನಗರದ ತಾ.ಪಂ. ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸರ್ಕಾರಿ ಅಧಿಕಾರಿಗಳು ಹಣ, ರಾಜಕೀಯ, ಸ್ವಾರ್ಥಕ್ಕೆ ಒಳಗಾಗದೇ ಕಾರ್ಯ ನಿರ್ವಹಿಸಬೇಕು. ಅರ್ಜಿದಾರರು ಲೋಕಾಯುಕ್ತರಿಗೆ ದೂರು ನೀಡುವಾಗ ಸಮರ್ಪಕವಾಗಿ ಎಲ್ಲಾ ಮಾಹಿತಿಯನ್ನು ಅರ್ಜಿಯ ಜೊತೆ ಒದಗಿಸಿ ದೂರು ನೀಡಿದರೆ ನ್ಯಾಯ ಒದಗಿಸಲು ಸಾಧ್ಯವಾಗುತ್ತದೆ. ಕೆಲ ಮಂದಿ ಲೋಕಾಯುಕ್ತ ವ್ಯಾಪ್ತಿಗೆ ಬಾರದ ದೂರುಗಳನ್ನು ನೀಡುತ್ತಾರೆ. ಅಂತಹ ದೂರುಗಳನ್ನು ಇಲ್ಲಿ ನೀಡಿದರೆ ಏನೂ ಪ್ರಯೋಜನವಾಗುವುದಿಲ್ಲ. ಲೋಕಾಯುಕ್ತರಿಗೆ ಬರುವ ಎಲ್ಲಾ ದೂರುಗಳು ಸತ್ಯವಾಗಿರುವುದಿಲ್ಲ. ಅದನ್ನು ಮೊದಲು ಪರಿಶೀಲಿಸಬೇಕಾಗುತ್ತದೆ. ಆದರೆ, ರಾಜಕೀಯ ವ್ಯಕ್ತಿಗಳ ರೀತಿ ಅರ್ಜಿ ಪಡೆದು ನ್ಯಾಯ ದೊರಕಿಸಿ ಕೊಡುತ್ತೇವೆ ಎಂಬುವ ರೀತಿಯಲ್ಲಿ ನಾವು ಸುಳ್ಳು ಭರವಸೆ ನೀಡುವುದಿಲ್ಲ ಎಂದರು. ಲೋಕಾಯುಕ್ತರಿಗೆ ಬಂದ ದೂರುಗಳಲ್ಲಿ ಇದುವರೆಗೂ ಶೇ.75 ರಷ್ಟು ಸಮಸ್ಯೆಗಳನ್ನು ಇತ್ಯರ್ಥ ಪಡಿಸಲಾಗಿದೆ ಎಂದ ಅವರು, ಇತ್ತೀಚೆಗೆ ಸಾರ್ವಜನಿಕರ ಸಮಸ್ಯೆಗಳನ್ನು ಸುಲಭವಾಗಿ ಪರಿಹರಿಸಲು ಎಲ್ಲಾ ಇಲಾಖೆಗಳ ಅಧಿಕಾರಿಗಳ ದೂರವಾಣಿ ಸಂಖ್ಯೆ ಹಾಗೂ ಪದನಾಮ ಬರೆದು ಕಳುಹಿಸುವಂತೆ ಸೂಚಿಸಲಾಗಿತ್ತು. ಆದರೆ ಕೆಲ ಸರ್ಕಾರಿ ಅಧಿಕಾರಿಗಳು ತಮ್ಮ ಬಳಿ ಮೊಬೈಲ್ ಇಲ್ಲ ಎಂದು ಬರೆದುಕೊಡುವ ಮೂಲಕ ಉದ್ಧಟತನ ತೋರಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ತಾಲೂಕಿನ ಕೊತ್ತನೂರು ಬಳಿ ಕೆರೆ ಒತ್ತುವರಿಯಾಗುತ್ತಿದೆ ಅದನ್ನು ತೆರವುಗೊಳಿಸಬೇಕು ಎಂದು ಪಿ.ತ್ಯಾಗರಾಜು ಎಂಬುವವರು ದೂರು ಸಲ್ಲಿಸಿದರು. ಸಭೆಯಲ್ಲಿ ಕಂದಾಯ ಇಲಾಖೆಗೆ ಸಂಬಂಧಪಟ್ಟಂತೆ 3 ಅರ್ಜಿಗಳು, ನಗರಸಭೆ 1, ಗಂಗಕಲ್ಯಾಣ ಯೋಜನೆ 1 ಸೇರಿದಂತೆ ಒಟ್ಟು 5 ಅರ್ಜಿಗಳು ಸಲ್ಲಿಕೆಯಾಗಿದ್ದವು. ಸಭೆಯಲ್ಲಿ ಡಿವೈಎಸ್ಪಿ ಬೂಪಯ್ಯ ಮುಂತಾದವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

