ಬೆಂಗಳೂರು ಗ್ರಾಮಾಂತರ

ಜಿಪಂ ಸ್ಥಾಯಿ ಸಮಿತಿಗಳ ರಚನೆ

Published On :

ಚಿಕ್ಕಬಳ್ಳಾಪುರ: ಆರೋಗ್ಯ, ಶಿಕ್ಷಣ, ಕೃಷಿ ಮತ್ತು ಆರೋಗ್ಯ ವಿವಿಧ ಕ್ಷೇತ್ರಗಳಿಗೆ ಸಂಬಂಧಿಸಿ ಪ್ರಗತಿ ಸಾಧಿಸುವಲ್ಲಿ ಪ್ರಮುಖ ಪಾತ್ರ ವಹಿಸುವ ಜಿಪಂ ಸ್ಥಾಯಿ ಸಮಿತಿಗಳ ರಚನೆ ಮಾಡಲಾಯಿತು.
ಕಳೆದ 11 ತಿಂಗಳಿಂದ ಮುಂದೂಡಿಕೊಂಡು ಬಂದಿದ್ದ ರಚನೆಗೆ ಇತಿಶ್ರೀ ಹಾಡಿ ಸಮಿತಿಯ ಅಧ್ಯಕ್ಷ ಮತ್ತು ಸದಸ್ಯರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಜಿಪಂ ಸಭಾಂಗಣದಲ್ಲಿ ಚುನಾವಣಾಧಿಕಾರಿ, ಜಿಪಂ ಉಪ ಕಾರ್ಯದರ್ಶಿ ಚಂದ್ರಪ್ಪ ನೇತೃತ್ವದಲ್ಲಿ ಬುಧವಾರ ಜಿಪಂ ಎರಡನೇ ಅವಧಿಗೆ 5 ಸ್ಥಾಯಿ ಸಮಿತಿಗಳ ಸದಸ್ಯರ ಆಯ್ಕೆಗೆ ಚುನಾವಣೆ ನಡೆಸಲಾಯಿತು. ನಂತರ ಸಮಿತಿ ಅಧ್ಯಕ್ಷರನ್ನು ಆಯ್ಕೆ ಮಾಡಲಾಯಿತು.
ಸ್ಥಾಯಿ ಸಮಿತಿಗೆ ಆಯ್ಕೆ: ಹಣಕಾಸು ಮತ್ತು ಲೆಕ್ಕ ಪರಿಶೋಧನಾ, ಯೋಜನಾ ಸ್ಥಾಯಿ ಸಮಿತಿ ಒಟ್ಟು 6 ಸ್ಥಾನಗಳಿಗೆ 5 ಮಂದಿ ನಾಮಪತ್ರ ಸಲ್ಲಿಸಿದ್ದು ಸಮಿತಿ ಅಧ್ಯಕ್ಷರಾಗಿ ಜಿಪಂ ಅಧ್ಯಕ್ಷ ಎಸ್.ಎನ್. ಚಿನ್ನಪ್ಪ ಚುನಾವಣೆಯಿಲ್ಲದೇ ಪಂಚಾಯತ್ ರಾಜ್ ನಿಯಮಗಳಂತೆ ಆಯ್ಕೆಯಾದರು. ಸಮಿತಿಯ ಅಧ್ಯಕ್ಷರಾಗಿ ಜಿಪಂ ಉಪಾಧ್ಯಕ್ಷ ರಾಘವೇಂದ್ರ ಹನುಮಾನ್ ಪಂಚಾಯತ್ ರಾಜ್ ನಿಯಮಗಳಂತೆ ಆಯ್ಕೆಯಾದರು.
ಮುಂದೂಡಿಕೆಗೆ ವಿಷಾದ: ವಿಳಂಬವಾಗಿಯಾದರೂ ಸ್ಥಾಯಿ ಸಮಿತಿ ರಚನೆಯಾಗಿರುವುದು ಖುಷಿಯ ಸಂಗತಿ. ಹಳೆಯ ಸಂಗತಿ ಮರೆತು ಮುಂದೆ ಜನರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಶ್ರಮಿಸಬೇಕಾಗಿದೆ ಎಂದು ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ನೀಲಾ ಮಂಜುನಾಥ್ ತಿಳಿಸಿದರೆ, ಜಿಪಂ ಸ್ಥಾಯಿ ಸಮಿತಿ ರಚನೆಗೆ ಕಳೆದ ಎರಡ್ಮೂರು ತಿಂಗಳ ಹಿಂದೆಯೇ ಚುನಾವಣೆ ನಡೆಸಬೇಕಾಗಿತ್ತು. ಆದರೆ, ಜಿಪಂ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯ ಸಭೆ, ಆ ನಂತರ ಲೋಕಸಭಾ ಚುನಾವಣೆ ಬಂದ ಹಿನ್ನೆಲೆಯಲ್ಲಿ ಸ್ಥಾಯಿ ಸಮಿತಿ ಚುನಾವಣೆ ಮುಂದೂಡಿಕೊಂಡು ಬರಲಾಯಿತು ಎಂದು ಚುನಾವಣಾಧಿಕಾರಿ ಚಂದ್ರಪ್ಪ ವಿಷಾದ ವ್ಯಕ್ತಪಡಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.