ಸೇವೆಯ ಸಾರ್ಥಕತೆ ಸಾಧನೆಗೆ ಪೂರಕವಾಗಲಿ: ವಿಜಯಕುಮಾರ್
ದೊಡ್ಡಬಳ್ಳಾಪುರ: ಸೇವೆಯ ಸಾರ್ಥಕತೆ ನಿರೀಕ್ಷಿತ ಗುರಿಸಾಧನೆಗೆ ಪೂರಕವಾಗಿರಬೇಕು. ಸ್ವಾರ್ಥವಿಲ್ಲದ ಸೇವೆ ಯಾವತ್ತೂ ಮಹತ್ವವನ್ನು ಹೊಂದಿರುತ್ತದೆ ಎಂದು ತಾಲೂಕು ಪಂಚಾಯಿತಿ ಸದಸ್ಯ ಡಾ.ಎಚ್.ಜಿ. ವಿಜಯಕುಮಾರ್ ಹೇಳಿದರು.
ತಾಲೂಕಿನ ದೊಡ್ಡಬಳ್ಳಾಪುರ ಕೈಗಾರಿಕಾ ಪ್ರದೇಶ ಲಯನ್ಸ್ ಕ್ಲಬ್ ಸಹಯೋಗದಲ್ಲಿ ಇಲ್ಲಿನ ಶ್ರೀರಾಮ ಆಸ್ಪತ್ರೆಯಲ್ಲಿ ನಡೆದ ಉಚಿತ ಕೀಲು ಮತ್ತು ಮೂಳೆ ರೋಗ ತಪಾಸಣೆ ಮತ್ತು ಚಿಕಿತ್ಸಾ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದರು.
ಲಯನ್ಸ್ ಕ್ಲಬ್ ಅಧ್ಯಕ್ಷ ಒಬದೇನಹಳ್ಳಿ ಕೆ. ಮುನಿಯಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಾಮಾಜಿಕ ಸೇವಾ ಕಾರ್ಯಗಳಲ್ಲಿ ಲಯನ್ಸ್ ಕ್ಲಬ್ ತನ್ನದೇ ಆದ ಪ್ರತಿಷ್ಠೆ ಉಳಿಸಿಕೊಂಡಿದೆ. ಆರೋಗ್ಯ, ಸಾಮಾಜಿಕ ಸೇವೆ ಮತ್ತು ಶೈಕ್ಷಣಿಕ ಪ್ರಗತಿಗೆ ಪೂರಕವಾದ ಕಾರ್ಯಯೋಜನೆಗಳನ್ನು ರೂಪಿಸುವುದು ನಮ್ಮ ಗುರಿಯಾಗಿದ್ದು, ಮುಂದಿನ ದಿನಗಳಲ್ಲಿ ಉಚಿತ ಆಂಬ್ಯುಲೆನ್ಸ್ ಸೇವೆಯನ್ನೂ ಆರಂಭಿಸುವ ಉದ್ದೇಶ ಹೊಂದಲಾಗಿದೆ ಎಂದರು. ಲಯನ್ಸ್ ಕ್ಲಬ್ನ ಮಾಜಿ ಅಧ್ಯಕ್ಷ ಬಿ.ಎಚ್. ಕೆಂಪಣ್ಣ, ಕಾರ್ಯದರ್ಶಿ ಎಳ್ಳುಪುರ ರಾಮಾಂಜಿನಪ್ಪ ಮತ್ತಿತರರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

