ದೌರ್ಜನ್ಯ: ಪೊಕ್ಸೋ ಕಾಯಿದೆಯಡಿ ಕ್ರಮ
ಆನೇಕಲ್ಲು: ಅಪ್ರಾಪ್ತ ವಯಸ್ಸಿನ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗುವುದು ಅಕ್ಷಮ್ಯ ಅಪರಾಧವಾಗಿದ್ದು ಯಾವುದೇ ವ್ಯಕ್ತಿ ಎಷ್ಟೇ ಪ್ರಭಾವಶಾಲಿಯಾಗಿದ್ದರೂ ಮುಲಾಜಿಲ್ಲದೇ ಪೊಕ್ಸೋ ಕಾಯಿದೆಯಡಿ ಕ್ರಮ ಜರುಗಿಸುವುದಾಗಿ ಅತ್ತಿಬೆಲೆ ವೃತ್ತ ನಿರೀಕ್ಷಕ ಕಿಶೋರ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.
ತಾಲೂಕಿನ ಚಂದಾಪುರದಲ್ಲಿ ತಾಲೂಕಿನ ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಕಾರ್ಯದರ್ಶಿಗಳು, ಮುಖ್ಯ ಶಿಕ್ಷಕರಿಗೆ ಏರ್ಪಡಿಸಿದ್ದ ಜಾಗೃತಿ ಸಭೆಯಲ್ಲಿ ಮಾತನಾಡಿ, ಮಹಿಳೆಯರು ಮತ್ತು ಮಕ್ಕಳ ಸಂರಕ್ಷಣೆ, ಮಕ್ಕಳ ಮೇಲೆ ನಡೆಯಬಹುದಾದ ದೌರ್ಜನ್ಯಗಳನ್ನು ತಡೆಯಬೇಕಾದ ಜವಾಬ್ದಾರಿ ಸಮಾಜದ ಮೇಲಿದೆ. ತಂದೆ ತಾಯಿಯರ ಜೊತೆ ಇರುವಷ್ಟು ಸಮಯ ಶಿಕ್ಷಕರ ಜೊತೆ ಇರುವ ಮಕ್ಕಳ ಕುರಿತು ಮುನ್ನೆಚ್ಚರಿಕೆ ವಹಿಸುವಂತೆ ಶಿಕ್ಷಕರಲ್ಲಿ ಮನವಿ ಮಾಡಿದರು.
ಮಕ್ಕಳು ಯಾವ ರೀತಿಯ ಪ್ರಲೋಭನೆಗೆ ಒಳಗಾಗಿ ದಾರಿ ತಪ್ಪುತ್ತಾರೆ ಎಂಬುದು ಪೊಲೀಸರಿಗಿಂತ ಹೆಚ್ಚಾಗಿ ಶಿಕ್ಷಕರಿಗೆ ತಿಳಿದಿರುತ್ತದೆ. 18 ವರ್ಷ ವಯೋವಾನದೊಳಗಿನ ಮಕ್ಕಳನ್ನು ಲೈಂಗಿಕ ದೃಷ್ಟಿಯಿಂದ ಪ್ರಚೋದಿಸುವುದು, ಅಶ್ಲೀಲ ಎಸ್ಎಂಎಸ್ ಸಂದೇಶ ಕಳಿಸುವುದು ಅಪರಾಧವಾಗುತ್ತದೆ. ಉದ್ಯೋಗದ ಸಮಯ ಹಾಗೂ ಸ್ಥಳದಲ್ಲಿ ಮಹಿಳೆಯರಿಂದ ಅಂತರ ಕಾಯ್ದುಕೊಳ್ಳಬೇಕು. ಅಂತಹ ಘಟನೆಗಳು ಕಂಡು ಬಂದಲ್ಲಿ ಪ್ರಾರಂಭದಲ್ಲೇ ಚಿವುಟಿ ಹಾಕುವ ಕೆಲಸದಲ್ಲಿ ಶಿಕ್ಷಕರು ಪೋಷಕರಂತೆ ಜವಾಬ್ದಾರಿಯುತವಾಗಿ ಕೆಲಸ ಮಾಡಬೇಕು. ಯಾವುದೇ ವ್ಯಕ್ತಿಯಿಂದ ಇಂತಹ ಅನಾಹುತ ಸಂಭವಿಸುತ್ತದೆ ಎಂಬ ಸಂಶಯ ಬಂದಲ್ಲಿ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡಿದಲ್ಲಿ ಗೌಪ್ಯತೆ ಕಾಪಾಡಲಾಗುವುದು ಎಂದರು. ಬಿಇಒ ಶೇಖರಪ್ಪ ಮಾತನಾಡಿದರು. ಶಿಕ್ಷಣಾಧಿಕಾರಿ ಜಲಜಾಕ್ಷಿ, ಶಿಕ್ಷಣ ಸಂಯೋಜಕ ವಿ.ಕೆ. ಗವಿರಂಗಯ್ಯ, ಪ್ರಕಾಶ್, ಡಿ. ಮುನಿರಾಜು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

