ಸರ್ಕಾರಿ ನೌಕರರ ಸಮ್ಮೇಳನ 22ಕ್ಕೆ

Updated on: 

ರಾಮನಗರ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಆ.22 ರಂದು ಮೈಸೂರಿನ ಮಹಾರಾಜ ಕಾಲೇಜು ಆವರಣದಲ್ಲಿ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಸಮ್ಮೇಳನ ಹಾಗೂ ಪ್ರಜಾ ಸ್ನೇಹಿ ಆಡಳಿತ ವಿಷಯವಾಗಿ ವಿಚಾರ ಸಂಕಿರಣ ಹಮ್ಮಿಕೊಂಡಿದೆ. ಸದರಿ ಸಮ್ಮೇಳನ ಹಾಗೂ ವಿಚಾರ ಸಂಕಿರಣದಲ್ಲಿ ಭಾಗವಹಿಸುವ ರಾಜ್ಯ ಸರ್ಕಾರಿ ನೌಕರರಿಗೆ ಮಾತ್ರ ಸೀಮಿತಗೊಳಿಸಿ ಮೈಸೂರು ಜಿಲ್ಲೆಯ ಪ್ರತಿನಿಧಿಗಳಿಗೆ ಆ.22ರ ಒಂದು ದಿನಕ್ಕೆ  ಹಾಗೂ ಇತರೆ ಜಿಲ್ಲೆಗಳ ಪ್ರತಿನಿಧಿಗಳಿಗೆ ಆ.22 ಮತ್ತು 23ರಂದು 2 ದಿನಗಳ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಿ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಸುತ್ತೋಲೆ ಹೊರಡಿಸಿದೆ. ಸಮ್ಮೇಳನದಲ್ಲಿ ಭಾಗವಹಿಸಲಿಚ್ಛಿಸುವ ಸರ್ಕಾರಿ ನೌಕರರು ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಬೇಕು. ಸಮ್ಮೇಳನದಲ್ಲಿ ಭಾಗವಹಿಸಿದ ಬಗ್ಗೆ ಅಧಿಕೃತ ಹಾಜರು ಪತ್ರವನ್ನು ನೌಕರರ ಸಂಘದ ಅಧ್ಯಕ್ಷರು ಅಥವಾ ಇವರಿಂದ ನಾಮ ನಿರ್ದೇಶನ ಹೊಂದಿದ ಅಧಿಕಾರಿಗಳಿಂದ ಪಡೆದು ಒದಗಿಸುವ ಷರತ್ತಿಗೆ ಒಳಪಟ್ಟಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಜಿಲ್ಲಾ ವ್ಯಾಪ್ತಿಯ ಸರ್ಕಾರಿ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಸಮ್ಮೇಳನದಲ್ಲಿ ಪಾಲ್ಗೊಳ್ಳುವಂತೆ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಎಚ್.ಪಿ.ಜಯರಾಂ ಕೋರಿದ್ದಾರೆ.
ಕೆಂಚನಕುಪ್ಪೆ ಗ್ರಾಪಂನ ಉಪಾಧ್ಯಕ್ಷ ಸತ್ಯಪ್ಪ
ರಾಮನಗರ: ತಾಲೂಕಿನ ಕೆಂಚನಕುಪ್ಪೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾಗಿ ಸತ್ಯಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಗುರುವಾರ ನಡೆದ ಚುನಾವಣೆಯಲ್ಲಿ ಉಪಾಧ್ಯಕ್ಷ ಸ್ಥಾನಕ್ಕೆ ಸತ್ಯಪ್ಪ ಅವರನ್ನು ಹೊರತುಪಡಿಸಿ ಬೇರಾರೂ ನಾಮ ಪತ್ರ ಸಲ್ಲಿಸದ ಹಿನ್ನೆಯಲೆಯಲ್ಲಿ ಚುನಾವಣಾಧಿಕಾರಿಯಾದ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಜಿ. ಕುಮಾರಸ್ವಾಮಿ ಅವಿರೋಧ ಆಯ್ಕೆ ಘೋಷಿಸಿದರು. ನೂತನ ಉಪಾಧ್ಯಕ್ಷರನ್ನು ಅಧ್ಯಕ್ಷೆ ಜೆ. ಲಲಿತಾ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಂ. ರಾಜೇಗೌಡ, ಕಾರ್ಯದರ್ಶಿ ವೆಂಕಟೇಶ್, ಸದಸ್ಯರಾದ ಕೆಂಪಣ್ಣ, ರಮೇಶ್, ಗೋವಿಂದಪ್ಪ, ನಾಗರಾಜು, ನಾರಾಯಣಪ್ಪ, ಸಿದ್ದಪ್ಪಾಜಿ, ಟಿ. ಲಿಂಗರಾಜು, ಲಕ್ಷ್ಮಿ, ಕೆಂಪಮ್ಮ, ಪ್ರೇಮ, ರತ್ನಮ್ಮ, ರಾಮಚಂದ್ರು, ಗೋಪಾಲಯ್ಯ, ಗಿರಿಜಮ್ಮ ಮತ್ತಿತರರು ಅಭಿನಂದಿಸಿದರು.
ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ
ದೊಡ್ಡಬಳ್ಳಾಪುರ: ಇಲ್ಲಿನ ದಿ ಟೆಕ್ಸ್ಟೈಲ್ ಮ್ಯಾನುಫ್ಯಾಕ್ಟರರ್ಸ್ ಕೋ ಆಪರೇಟಿವ್ ಬ್ಯಾಂಕ್ ಲಿಮಿಟೆಡ್(ಟಿಎಂಸಿ ಬ್ಯಾಂಕ್) ನೇತೃತ್ವದಲ್ಲಿ ಪ್ರತಿಭಾ ಪುರಸ್ಕಾರ ಮತ್ತು ಅಭಿನಂದನಾ ಕಾರ್ಯಕ್ರಮ ನಡೆಯಲಿದೆ. ಬ್ಯಾಂಕಿನ ಸದಸ್ಯತ್ವ ಹೊಂದಿರುವ ಸದಸ್ಯರ ಮಕ್ಕಳು ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಶೇ.85ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ್ದರೆ, ಅಂತಹ ಅರ್ಹ ವಿದ್ಯಾರ್ಥಿಗಳು ಪುರಸ್ಕಾರಕ್ಕೆ ಅರ್ಜಿಯನ್ನು ಆ. 31ರೊಳಗೆ  ಅರ್ಜಿ ಸಲ್ಲಿಸಬಹುದು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com